ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಕರೆಂಟ್ ಶಾಕ್ – ಯುವಕ ಮೃತ್ಯು..!

Twitter
Facebook
LinkedIn
WhatsApp
ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಕರೆಂಟ್ ಶಾಕ್ – ಯುವಕ ಮೃತ್ಯು..!

ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಸಂಭವಿಸಿದೆ.

ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತಪಟ್ಟ ಯುವಕ ಎಂದು ತಿಳಿಯಲಾಗಿದೆ.

ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದಾಗ ಸರ್ವಿಸ್ ತಂತಿ ತಾಗಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಸಾವನ್ನಪ್ಪಿದ್ದಾನೆ.

ವಿದ್ಯುತ್ ಶಾಕ್ ತಗುಲಿದ ತಕ್ಷಣ ಸ್ಥಳೀಯರು ಯುವಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮನೆ ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದ್ದ ಒಬ್ಬ ಮಗನನ್ನು ಚೆನ್ನಾಗಿ ಓದಿಸಿ, ನೂರಾರು ಕನಸು ಕಟ್ಟಿಕೊಂಡಿದ್ದ ತಂದೆ-ತಾಯಿಗೆ ಈಗ ದಿಕ್ಕೇ ತೋಚದಾಗಿದೆ. ಅಗ್ನಿವೀರ್ ಪರೀಕ್ಷೆ ಪಾಸ್ ಆಗಿದ್ದ ಯುವಕ ಪ್ರಜ್ವಲ್, ದೈಹಿಕ ಪರೀಕ್ಷೆಗೆ ತಯಾರಾಗುತ್ತಿದ್ದ. ಅಷ್ಟರೊಳಗೆ ಈ ರೀತಿ ದುರಂತ ಸಂಭವಿಸಿರೋದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಕೆರೆಗೆ ಬಿದ್ದ ಕಾರು, ಒಂದೇ ಕುಟುಂಬದ ಮೂವರು ಮೃತ್ಯು..!

ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರ ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ ಮುಂಜಾನೆ ನಡೆದಿದೆ.

ವೀರಾಪುರ ಗ್ರಾಮದ ನಿವಾಸಿಗಳಾದ ಯಮುನಾ, ದೊಡ್ಡಣ್ಣ ಮತ್ತು ಸಣ್ಣಮ್ಮ ಮೃತಪಟ್ಟವರು. ಪ್ರವೀಣ್ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರವೀಣ್ ಅವರು ಪತ್ನಿ ಯಮುನಾ, ಮಾವ ದೊಡ್ಡಣ್ಣ ಮತ್ತು ಅತ್ತೆ ಸಣ್ಣಮ್ಮ ಜೊತೆ ಇಂದು ಭಾನುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಕ್ಷೇತ್ರಕ್ಕೆ ಕಾರಿನಲ್ಲಿ ಹೊರಟಿದ್ದರು. ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ