ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

CWG 2022: ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು: 20ಕ್ಕೇರಿದ ಭಾರತದ ಪದಕಗಳ ಸಂಖ್ಯೆ

Twitter
Facebook
LinkedIn
WhatsApp
CWG 2022: ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು: 20ಕ್ಕೇರಿದ ಭಾರತದ ಪದಕಗಳ ಸಂಖ್ಯೆ

ಕಾಮನ್​ ವೆಲ್ತ್ ಗೇಮ್ಸ್ 2022ರಲ್ಲಿ (Commonwealth Games 2022) ಭಾರತದ ಪದಕದ ಬೇಟೆ ಮುಂದುವರೆದಿದೆ. ಈವರೆಗೆ ಒಟ್ಟು 20 ಪದಕಗಳನ್ನು ಬಾಜಿಕೊಂಡಿದೆ. ಇದರಲ್ಲಿ ಆರು ಚಿನ್ನ, ಏಳು ಬೆಳ್ಳಿ ಹಾಗೂ ಏಳು ಕಂಚು ಪಡೆದುಕೊಂಡಿದೆ. ಭಾರತಕ್ಕೆ ಇದುವರೆಗೆ ಬಂದಿರುವ 20 ಪದಕಗಳ ಪೈಕಿ 10 ಪದಕಗಳು ವೇಟ್​ ಲಿಫ್ಟಿಂಗ್ ​​ನಿಂದಲೇ ಆಗಿದೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಇತ್ತ ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ (Murali Sreeshankar) ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಬೆಳ್ಳಿ ಗೆದ್ದ ಮೊದಲ ಪುರುಷ ಲಾಂಗ್​ಜಂಪರ್ ಶ್ರೀಶಂಕರ್ ಆಗಿದ್ದಾರೆ. 8.08ಮೀ ಜಿಗಿತದ ಮೂಲಕ ಭಾರತಕ್ಕೆ (India) ಐತಿಹಾಸಿಕ ಬೆಳ್ಳಿ ಗೆದ್ದುಕೊಟ್ಟರು.

ಇನ್ನು ಮೀರಾಬಾಯಿ ಚಾನು ಭಾರತಕ್ಕೆ ಕಾಮನ್‌ವೆಲ್ತ್ ಗೇಮ್ಸ್​​ನಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟರು. ಚಾನು 49 ಕೆಜಿ ತೂಕ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತುವ ಮೂಲಕ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಸ್ನ್ಯಾಚ್‌ ನಲ್ಲಿ 88 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ ನಲ್ಲಿ 113 ಕೆಜಿ ಎತ್ತುವ ಮೂಲಕ ಪ್ರಶಸ್ತಿ ಗೆದ್ದು ದಾಖಲೆ ಕೂಡ ಮಾಡಿದರು.

ವೇಟ್‌ ಲಿಫ್ಟರ್‌ ಹರ್ಜಿಂದರ್ ಕೌರ್ ಅವರು ಕಂಚಿನ ಪದಕ ಗೆದ್ದು ಬೀಗಿದರು. ಮಹಿಳೆಯರ 71kg ವಿಭಾಗದಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ ಕೌರ್ ಕಂಚಿಗೆ ಕೊರಳೊಡ್ಡಿದರು. ಅಂತೆಯೆ ಯುವ ವೇಟ್‌ ಲಿಫ್ಟರ್‌ ಅಚಿಂತಾ ಶೆಯುಲಿ ಅವರು ಚಿನ್ನದ ಪದಕ ಬಾಜಿಕೊಂಡರು. ಪುರುಷರ 73kg ವಿಭಾಗದಲ್ಲಿ ಒಟ್ಟು 313 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ 20 ವರ್ಷದ ವೇಟ್​​ ಲಿಫ್ಟರ್ ಬಂಗಾರಕ್ಕೆ ಕೊರಳೊಡ್ಡಿದರು.

ಜೆರೆಮಿ ಲಾಲ್ರಿನ್ನುಂಗಾ ಕಾಮನ್‌ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟರು. ಸಂಕೇತ್ ಮಹಾದೇವ್ ಸಾಗರ್ ಕೂಡ ಪುರುಷರ ವೇಟ್‌ ಲಿಫ್ಟಿಂಗ್‌ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾದರು. ಕರ್ನಾಟಕದ ವೇಟ್‌ ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಮಿಂಚಿದ್ದಾರೆ. 55 ಕೆಜಿ ವಿಭಾಗದ ವೇಟ್​ ಲಿಫ್ಟಿಂಗ್​ ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಪುರುಷರ 109 ಕೆಜಿ ತೂಕ ವಿಭಾಗದಲ್ಲಿ ಭಾರತದ ಲವ್‌ಪ್ರೀತ್ ಸಿಂಗ್ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟರು. ವೇಟ್‌ಲಿಫ್ಟರ್‌ ಗುರ್​ದೀಪ್ ಸಿಂಗ್ ಅವರು ಕೂಡ ಬೆಳ್ಳಿ ಪದಕ ಗೆದ್ದು ಬೀಗಿದರು. ಇದರ ನಡುವೆ ಪುರುಷರ ಹೈ ಜಂಪ್​ನಲ್ಲಿ ಭಾರತದ ತೇಜಸ್ವಿನ್ ಶಂಕರ್ ಪದಕ ಗೆದ್ದು ಇತಿಹಾಸ ನಿರ್ಮಿಸಿದರು. ಫೈನಲ್​ ಪಂದ್ಯದಲ್ಲಿ ಶಂಕರ್ 2.22 ಮೀಟರ್ ಜಿಗಿದು ಕಂಚಿನ ಪದಕಕ್ಕೆ ಕೊರಳೊಡ್ಡಿದರು. ಅತ್ತ ಸೌರವ್ ಘೋಷಾಲ್ ಅವರು ಸ್ಕ್ವಾಷ್‌ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ವಿಕಾಸ್ ಠಾಕೂರ್ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. ಪುರುಷರ 96 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಕಾಣಿಸಿಕೊಂಡ ವಿಕಾಸ್ ಠಾಕೂರ್ ಒಟ್ಟು 346 ಕೆಜಿ ಭಾರ ಎತ್ತುವ ಮೂಲಕ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಟ್ಟರು. ತೂಲಿಕಾ ಮಾನ್ ಅವರು ಮಹಿಳಾ ಜೂಡೊ ಸ್ಪರ್ಧೆಯ 78 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ