ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ನಿಧನ - ಇಂದಿರಾಗಾಂಧಿಗೆ ಕರ್ನಾಟಕದಲ್ಲಿ ರಾಜಕೀಯ ಮರುಜೀವ ನೀಡಿದ್ದ ನಾಯಕ

Twitter
Facebook
LinkedIn
WhatsApp
D. B. Chandra Gowda

ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ (D. B. Chandra Gowda) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) (D. B. Chandra Gowda) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.  

ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ  ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಡಿ.ಬಿ.ಚಂದ್ರೇಗೌಡ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.

ಅದರಲ್ಲೂ 1977ರಲ್ಲಿ ಲೋಕಸಭೆ ಚುನಾವಣೆಗೆ ಚಿಕ್ಕಮಗಳೂರು ಕ್ಷೇತ್ರವನ್ನುಇಂದಿರಾಗಾಂಧಿ ಅವರಿಗೆ ಬಿಟ್ಟುಕೊಟ್ಟು ಗಮನಸೆಳೆದಿದ್ದರು.

ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು ಜನಿಸಿದ್ದು 26 ಆಗಸ್ಟ್ 1936ರಲ್ಲಿ. ಚಿಕ್ಕಮಗಳೂರಿನಲ್ಲಿಯೇ ಆರಂಭಿಕ ಶಿಕ್ಷಣ ಪಡೆದು ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ತಮ್ಮ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್‌ ಎಲ್ ಕಾನೂನು ಕಾಲೇಜಿನಲ್ಲಿ ಎಲ್ಎಲ್‌ ಬಿ ಪದವಿಯನ್ನು ಪಡೆದರು. ವಕೀಲಿ ವೃತ್ತಿ ಮಾಡುತ್ತಲೇ ರಾಜಕಾರಣದತ್ತಲೂ ಆಕರ್ಷಿತರಾದರು.

ಕಾಲೇಜು ದಿನಗಳಲ್ಲಿಯೇ ವಿದ್ಯಾರ್ಥಿ ನಾಯಕರಾಗಿ ಗುರುತಿಸಿಕೊಂಡಿದ್ದು ಅವರಲ್ಲಿ ರಾಜಕೀಯ ಸೆಳೆತವನ್ನು ಹೆಚ್ಚಿಸಿತ್ತು. ಪ್ರಜಾ ಸೋಷಲಿಸ್ಟ್‌ ಪಕ್ಷದ ಮೂಲಕ ರಾಜಕಾರಣವನ್ನೂ ಆರಂಭಿಸಿದರು.1967 ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. ನಂತರ ಕಾಂಗ್ರೆಸ್‌ ಸೇರಿ 1971 ರಲ್ಲಿಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. 1977ರಲ್ಲಿಎರಡನೇ ಬಾರಿಗೆ ಲೋಕಸಭೆ ಪ್ರವೇಶಿಸಿದರು. ಇಂದಿರಾಗಾಂಧಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರಿಂದ ಮುಂದೆ ವಿಧಾನಪರಿಷತ್‌ ಪ್ರವೇಶಿಸಬೇಕಾಯಿತು.

ಕ್ಯಾಬಿನೆಟ್ ಸಚಿವರಾಗಿ ಕೆಲಸ ಮಾಡಿದರು. 1980 ರಲ್ಲಿ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದರು ಮತ್ತು ಕರ್ನಾಟಕ ಕ್ರಾಂತಿ ರಂಗಕ್ಕೆ ಸೇರಿದರು, ಕರ್ನಾಟಕ ರಾಜ್ಯ ಕಾಂಗ್ರೆಸ್ (ಯು) ಅಧ್ಯಕ್ಷರಾದರು . ಮತ್ತು 1980 ರಿಂದ 1981 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು.

ಅವರು 1983 ರಲ್ಲಿ ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿದರು ಮತ್ತು 1983 ರಿಂದ 1985 ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರು. 1986 ರಲ್ಲಿ ಅವರು ಜನತಾ ದಳದ ರಾಜಕೀಯ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. 1989ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಪುನರಾಯ್ಕೆಗೊಂಡು ವಿರೋಧ ಪಕ್ಷದ ನಾಯಕರಾದರು. 1999 ರಲ್ಲಿ, ಅವರು ಶೃಂಗೇರಿ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾಗಿ ಮೂರನೇ ಅವಧಿಗೆ ಆಯ್ಕೆಯಾದರು ಮತ್ತು 2004 ರವರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. 2008 ರಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. 2009 ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರವನ್ನು ಪ್ರತಿನಿಧಿಸುವ 15 ನೇ ಲೋಕಸಭೆಯಲ್ಲಿ ಸಂಸದರಾದರು.

ನನ್ನ ಗೋಪಾಲ ಎಂಬ ಕನ್ನಡ ಚಲನಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದ್ದ ಚಂದ್ರೇಗೌಡ ಅವರದ್ದು ಬಹುಮುಖ ವ್ಯಕ್ತಿತ್ವ. ಅಂತ್ಯಕ್ರಿಯೆ ಸ್ವಗಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ