ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘಣ್ಣ
Twitter
Facebook
LinkedIn
WhatsApp
ಬೆಂಗಳೂರು: ನಟ, ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಬೆಳಗ್ಗೆ ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.
ಡಾ.ರಾಜಕುಮಾರ್ ಕುಟುಂಬ ಪಕ್ಷದ ಹೊರತಾಗಿ ಬಹುತೇಕ ರಾಜಕೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಶಿವರಾಜಕುಮಾರ್ ಕಾಂಗ್ರೆಸ್ ಪರ ಪ್ರಚಾರವನ್ನೂ ಕೈಗೊಂಡಿದ್ದರು.
ಇದೀಗ ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಭೇಟಿ ಮಾಡಿ ಅಭಿನಂದಿಸಿದ್ದಾರೆ.