ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ 27 ಜೂನ್ ರಂದು ಶಾಲಾ ಮಕ್ಕಳಿಗೆ ರಜೆ ಘೋಷಣೆ
Twitter
Facebook
LinkedIn
WhatsApp

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ದಿನಾಂಕ 27 ರಂದು ರಜೆಯನ್ನು ಘೋಷಿಸಲಾಗಿದೆ

ಹಾಗೆಯೇ ಸಾಂಭವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆಯಿದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧ ಪಟ್ಟ ಪಂಚಾಯತ್ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡಲು ತಿಳಿಸಲಾಗಿದೆ
ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ