ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿತ್ರೀಕರಣಕ್ಕೆಂದು 14 ವರ್ಷ ಬಳಿಕ ಕೇರಳಕ್ಕೆ ಬಂದಿದ್ದ ದಳಪತಿ ವಿಜಯ್ ಕಾರು ಗ್ಲಾಸ್ ಪುಡಿ ಪುಡಿ.!

Twitter
Facebook
LinkedIn
WhatsApp
ಚಿತ್ರೀಕರಣಕ್ಕೆಂದು 14 ವರ್ಷ ಬಳಿಕ ಕೇರಳಕ್ಕೆ ಬಂದಿದ್ದ ದಳಪತಿ ವಿಜಯ್ ಕಾರು ಗ್ಲಾಸ್ ಪುಡಿ ಪುಡಿ.!

ವೆಂಕಟ್ ಪ್ರಭು ನಿರ್ದೇಶನದ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಚಿತ್ರ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಗೋಟ್)’ (‘Greatest Of All Time (GOAT)’) ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಬಿಡುಗಡೆಗೂ ಮುನ್ನ, ಅದರ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ನಟ ಕೇರಳಕ್ಕೆ ಭೇಟಿ ನೀಡಿದ್ದಾರೆ. 14 ವರ್ಷಗಳ ಸುದೀರ್ಘ ಅವಧಿಯ ನಂತರ ಅವರು ಕೇರಳ ರಾಜ್ಯಕ್ಕೆ ಮರಳಿದ್ದರು. ಜತೆಗೆ ವಿಜಯ್ ಪ್ರಯಾಣಿಸುತ್ತಿದ್ದ ಕಾರಿಗೆ ಅಭಿಮಾನಿಗಳಿಂದ ಹಾನಿಯಾಗಿದೆ. ವಿಡಿಯೊವೊಂದರಲ್ಲಿ ಕಾರಿನ ಗ್ಲಾಸ್‌ ಪುಡಿ ಪುಡಿಯಾಗಿವೆ.

ವಿಜಯ್ ಅವರು ಈ ಸಿನಿಮಾದ ಚಿತ್ರೀಕರಣಕ್ಕಾಗಿ ಒಂದು ವಾರಗಳ ಕಾಲ ಕೇರಳದಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಇದು ಎನ್ನಲಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಹಲವಾರು ವಿಡಿಯೊಗಳಲ್ಲಿ, ವಿಜಯ್ ಅವರ ಅಭಿಮಾನಿಗಳು ನಟನಿಗಾಗಿ ಕಾದಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಮಹತ್ವದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ಅಷ್ಟೇ ಅಲ್ಲ, ‘ವಿಜಯ್ ಸ್ಟಾರ್ಮ್ ಹಿಟ್ಸ್ ಕೇರಳ’ ಮತ್ತು ‘ಗೋಟ್’ ಎಂಬ ಹ್ಯಾಶ್‌ಟ್ಯಾಗ್‌ಗಳು ಎಕ್ಸ್‌ನಲ್ಲಿ ಟ್ರೆಂಡ್‌ ಆಗಿವೆ. ಎಷ್ಟೇ ಕಟ್ಟು ನಿಟ್ಟಿದ್ದರೂ ಅಭಿಮಾನಿಗಳು ನಟನ ಕಾರಿನ ಗ್ಲಾಸ್‌ವನ್ನು ಪುಡಿ ಪುಡಿ ಮಾಡಿದ್ದಾರೆ.

ʻGOAT’ ಸಿನಿಮಾದಲ್ಲಿ ವಿಜಯ್ ಜತೆ ಪ್ರಭುದೇವ, ಪ್ರಶಾಂತ್, ವಿನಯ್, ಮೀನಾಕ್ಷಿ ಚೌಧರಿ ಮೊದಲಾದವರು ನಟಿಸುತ್ತಿದ್ದಾರೆ. ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ತ್ರಿಷಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ.

“ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ವರ್ಷದ ಕೊನೆಯಲ್ಲಿ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist