ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿಕ್ಕಬಳ್ಳಾಪುರದಲ್ಲಿ ಅಪಾಯಕಾರಿ ಝಿಕಾ ವೈರಸ್‌ ಪತ್ತೆ, ಎಲ್ಲೆಡೆ ಕಟ್ಟೆಚ್ಚರ..!

Twitter
Facebook
LinkedIn
WhatsApp
ಚಿಕ್ಕಬಳ್ಳಾಪುರದಲ್ಲಿ ಅಪಾಯಕಾರಿ ಝಿಕಾ ವೈರಸ್‌ ಪತ್ತೆ, ಎಲ್ಲೆಡೆ ಕಟ್ಟೆಚ್ಚರ..!

ಚಿಕ್ಕಬಳ್ಳಾಪುರ, ನವೆಂಬರ್‌ 02: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದೆ. ಇದರಿಂದ ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ.

ನೆರೆಯ ಕೇರಳ ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದ ಝಿಕಾ ವೈರಸ್ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ವ್ಯಾಪ್ತಿಯ ಸೊಳ್ಳೆಗಳಲ್ಲಿ ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗರ್ಭಿಣಿಯರು ಮತ್ತು ಜ್ವರ ಪೀಡಿತರ ರಕ್ತವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳ ಪರೀಕ್ಷೆ ನಡೆಸಿದ್ದರು. ಜಿಲ್ಲೆಯ 6 ಕಡೆಗಳಲ್ಲೂ ಸೊಳ್ಳೆಗಳ ಪರೀಕ್ಷೆ ನಡೆದಿತ್ತು. ತಲಕಾಯಲ ಬೆಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಈ ಬೆಟ್ಟ ವ್ಯಾಪ್ತಿಯ 5 ಕಿ.ಮೀ. ಸುತ್ತ ಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ತಲಕಾಯಲಬೆಟ್ಟದಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ದೃಢಪಡಿಸಿದ ಬೆನ್ನಲ್ಲೇ ವಿಶೇಷ ಸಭೆ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಟ್ಟೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ 30 ಮಂದಿ ಗರ್ಭಿಣಿಯರು ಮತ್ತು ಜ್ವರ ಪೀಡಿತ 7 ಮಂದಿ ರಕ್ತವನ್ನು ಪಡೆದು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಝಿಕಾ ಗರ್ಭಿಣಿಯರಿಗೆ ಮಾರಕ

ಝಿಕಾ ವೈರಸ್‌ನಿಂದ ಹರಡುವ ಸೋಂಕು. ಇದು ಮುಖ್ಯವಾಗಿ ಸೊಳ್ಳೆಗಳಿಂದ ಹರಡುವ ಕಾಯಿಲೆ. ಪ್ರಾರಂಭದಲ್ಲಿ ಸೌಮ್ಯ ಲಕ್ಷಣ ಇರಲಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಣಾಂತಿಕ ರೋಗವಾಗಿ ಬದಲಾಗುತ್ತದೆ. ಝಿಕಾ ಸ್ವತಃ ಮಾರಣಾಂತಿಕ ಅಲ್ಲದಿದ್ದರೂ ಅಪಾಯ ತಂದೊಡ್ಡಲಿದೆ. ಈ ರೋಗದ ಲಕ್ಷಣಗಳು ಒಂದು ವಾರದೊಳಗೆ ಕಣ್ಮರೆಯಾಗುತ್ತವೆ. ಗರ್ಭಿಣಿ ಸೋಂಕಿಗೆ ಒಳಗಾದಾಗ ಈ ರೋಗವು ಹುಟ್ಟಲಿರುವ ಮಗುವಿನ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತದೆ. ಹೀಗಾಗಿ ಗರ್ಭಿಣಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.

ಝಿಕಾ ವೈರಸ್ ಹೇಗೆ ಹರಡುತ್ತದೆ ?
 ಎಗಿಫ್ಟಿ ಮತ್ತು ಈಡಿಯಸ್ ಅಲ್ಲೋ ಪಿಕ್ಸಸ್ ಸೊಳ್ಳೆಗಳಿಂದ ಝಿಕಾ ವೈರಸ್ ಮನುಷ್ಯನಿಗೆ ಹರಡುತ್ತದೆ. ಸೊಳ್ಳೆಯು ಸೋಂಕಿತ ವ್ಯಕ್ತಿಯನ್ನು ಕಚ್ಚಿದ ನಂತರ, ಕಾ ವೈರಸ್ ಸೊಳ್ಳೆಯ ವ್ಯವಸ್ಥೆ ಪ್ರವೇಶಿಸುತ್ತದೆ. ಅದರ ದೇಹದಲ್ಲಿ ಪುನರಾವರ್ತಿಸುತ್ತದೆ ಮತ್ತು ಅದರ ಲಾಲಾರಸ ಗ್ರಂಥಿ ಗಳಿಗೆ ಹರಡುತ್ತದೆ. ಈ ವೈರಸ್ ಸೊಳ್ಳೆಯಲ್ಲಿ ಎಂಟರಿಂದ ಹತ್ತು ದಿನಗಳವರೆಗೆ ಕಾವು ಕೊಡುತ್ತದೆ. ಅಂತಹ ಸೊಳ್ಳೆ. ಕಚ್ಚಿದಾಗ ವೈರಸ್ ವ್ಯಕ್ತಿಗೆ ಹರಡುತ್ತದೆ. ಸೊಳ್ಳೆ ಕಚ್ಚಿದ ನಂತರ ವ್ಯಕ್ತಿಯಲ್ಲಿ ಕಾ ವೈರಸ್‌ನ ಕಾವು ಕಾಲಾವಧಿ ಮೂರರಿಂದ 12 ದಿನಗಳವರೆಗೆ ಇರುತ್ತದೆ.

ಝಿಕಾ ವೈರಸ್ ಲಕ್ಷಣಗಳು

ಝಿಕಾ ವೈರಸ್ ಒಳಗಾದವರು ಸಾಮಾನ್ಯವಾಗಿ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವಿನ ರೋಗದ ಲಕ್ಷಣ ಗಳನ್ನು ಅನುಭವಿಸುತ್ತಾರೆ ಅಥವಾ ತುಂಬಾ ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸುತ್ತಾರೆ. ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಂತೆ ಇರುತ್ತದೆ. ಜ್ವರ, ದದ್ದು, ತಲೆನೋವು, ಕೀಲುನೊವು, ಆಯಾಸ, ಕೆನ್ನೆಗಳ ಊತ, ಬೆವರುವುದು, ತಣ್ಣಗಾಗುವುದು, ವಾಂತಿ, ರಕ್ತಸಿಕ್ತ ಕಣ್ಣುಗಳು ಲಕ್ಷಣಗಳು ಗೋಚರಿಸುತ್ತವೆ.

ಝಿಕಾ ಬರದಂತೆ ತಡೆಗೆಟ್ಟುವುದು ಹೇಗೆ?

ಸೋಂಕು ಬಂದ ಮೇಲೆ ಪರದಾಡುವುದಕ್ಕಿಂತ ಸೋಂಕು ಬಾರದಂತೆ ತಡೆಯುವುದು ಅತೀ ಅಗತ್ಯ. ಇದಕ್ಕಾಗಿ ಕೆಲವು ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಎಲ್ಲರೂ ಸೊಳ್ಳೆಗಳ ಕಾಟ ತಡೆಗೆ ಕ್ರಮಕೈಗೊಳ್ಳಬೇಕು. ಪ್ರಸ್ತುತ ಝಿಕಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ವಿಜ್ಞಾನಿಗಳು ದೀರ್ಘ ಕಾಲದವರೆಗೆ ವೈರಸ್ ಹಾನಿಕರವಲ್ಲ ಅಂತ ಭಾವಿಸಿದ್ದರು. ಸದ್ಯ ರೋಗ ಲಕ್ಷಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದ್ದರಿಂದ ವೈದ್ಯರು ಜ್ವರ ಕಡಿಮೆ ಮಾಡುವ ಔಷಧಿ ನೀಡುತ್ತಾರೆ. ವಾಂತಿ ಮತ್ತು ದದ್ದುಗಳಿಗೆ ಔಷಧಗಳನ್ನು ಸೂಚಿಸಬಹುದು. ಸದ್ಯ ಝಿಕಾ ವೈರಸ್ ತಡೆಗೆ ಲಸಿಕೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಗರ್ಭಿಣಿಯರ ಮತ್ತು ಜ್ವರ ಪೀಡಿತರು ಸೇರಿ ಒಟ್ಟು 37 ಮಂದಿ ರಕ್ತದ ಮಾದರಿಗಳನ್ನು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವೈರಸ್ ಕಂಡುಬಂದ ತಲಕಾಯಲಬೆಟ್ಟ ವ್ಯಾಪ್ತಿಯ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

30 ಮಂದಿಯ ರಕ್ತ ಪರೀಕ್ಷೆ

ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, “ಚಿಕ್ಕಬಳ್ಳಾಪುರ ಜಿಲ್ಲೆಯ 6 ಕಡೆ ಕೀಟಾಶಾಸ್ತ್ರಜ್ಞರು ಪರೀಕ್ಷೆ ನಡೆಸುವ ವೇಳೆ ಸೊಳ್ಳೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಹೀಗಾಗಿ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ 5ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೂ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ. 30 ಮಂದಿ ಗರ್ಭಿಣಿಯರು ಹಾಗೂ 7 ಮಂದಿ ಜ್ವರ ಪೀಡಿತರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಕೊಟ್ಟಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ