ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಗಳ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಶಾರುಖ್ ಖಾನ್!

Twitter
Facebook
LinkedIn
WhatsApp
ಮಗಳ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಶಾರುಖ್ ಖಾನ್ ; ಜೊತೆಗೆ ನಯನಾತಾರ ಜೋಡಿ ಸಾಥ್!

ಶಾರುಖ್ ಖಾನ್ ಅವರು ಇಂದು (ಸೆಪ್ಟೆಂಬರ್ 5) ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್ (Shah Rukh Khan)​ ಜೊತೆ ಮಗಳು ಸುಹಾನಾ ಖಾನ್, ಸಹ ಕಲಾವಿದೆ ನಯನತಾರಾ ಹಾಗೂ ನಟಿಯ ಪತಿ ವಿಘ್ನೇಶ್ ಶಿವನ್ ಕೂಡ ಇದ್ದರು. ಈ ವಿಡಿಯೋನ ಎಎನ್​ಐ ಸುದ್ದಿ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಶಾರುಖ್ ಭಕ್ತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಶಾರುಖ್ ಖಾನ್ ಅವರು ಎಲ್ಲಾ ಧರ್ಮದವರನ್ನು ಪ್ರೀತಿಸುತ್ತಾರೆ. ಅವರು ಎಲ್ಲಾ ಧರ್ಮವನ್ನು ಪಾಲಿಸುತ್ತಾರೆ. ಈ ಮೊದಲು ಅವರು ಗಣೇಶ ಚತುರ್ಥಿ ಮೊದಲಾದ ಹಿಂದೂ ಹಬ್ಬಗಳನ್ನು ಆಚರಿಸಿದ್ದಿದೆ. ಕ್ರಿಸ್​ಮಸ್ ಕೂಡ ಆಚರಿಸಿದ್ದರು. ಈಗ ‘ಜವಾನ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅವರು ದೇವಾಲಯಗಳಿಗೆ ಭೇಟಿ ನೀಡುವ ಕೆಲಸ ಮಾಡುತ್ತಿದ್ದಾರೆ. ಅವರ ಭಕ್ತಿಯ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

‘ಶಾರುಖ್ ಖಾನ್, ಅವರ ಮಗಳು ಸುಹಾನಾ ಖಾನ್, ನಟಿ ನಯನತಾರಾ ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವರ ದರ್ಶನ ಪಡೆದರು’ ಎಂದು ಎಎನ್​ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ‘ಜವಾನ್ ಸಿನಿಮಾ ಗೆಲ್ಲಲ್ಲಿದೆ’ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನೂ ಕೆಲವರು ‘ಇದು ನಟನೆಯ ಭಾಗವೇ’ ಎಂದು ಪ್ರಶ್ನೆ ಮಾಡಿದ್ದಾರೆ.

ಶಾರುಖ್ ಖಾನ್ ಅವರು ‘ಜವಾನ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ‘ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಮೂಲಕ ‘ಜವಾನ್’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದಾರೆ. ನಯನತಾರಾ, ವಿಜಯ್ ಸೇತುಪತಿ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದು ದೊಡ್ಡ ಮಟ್ಟದ ಸಂಭಾವನೆ ಪಡೆದುಕೊಂಡಿದ್ದಾರೆ. ಚಿತ್ರದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, ಮುಂಜಾನೆ ಟಿಕೆಟ್​ಗಳು ಸೋಲ್ಡ್​ಔಟ್ ಆಗುತ್ತಿದೆ. ಈ ವರ್ಷ ತೆರೆಗೆ ಬರುತ್ತಿರುವ ಶಾರುಖ್ ಖಾನ್ ನಟನೆಯ ಎರಡನೇ ಸಿನಿಮಾ.

ಮಲೈಕಾನಾ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಅರ್ಜುನ್ ಕಪೂರ್? ಗೂಢಾರ್ಥದ ಪೋಸ್ಟ್ ಹಾಕಿದ ನಟಿ

ಮಲೈಕಾ ಅರೋರಾ ಹಾಗೂ ಅರ್ಜುನ್ ಕಪೂರ್ (Arjun Kapoor) ಬೇರೆ ಆಗುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇಬ್ಬರ ಪ್ರೀತಿ ಮುರಿದು ಬಿತ್ತು ಎಂದು ಎಲ್ಲರೂ ಮಾತನಾಡಿಕೊಂಡರು. ಹೀಗಿರುವಾಗಲೇ ಮುಂಬೈ ಬೀದಿಗಳಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು. ಆದರೆ, ಈ ವಿಚಾರ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಮಲೈಕಾ ಮಾಡಿರುವ ಹೊಸ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ಈ ಮೂಲಕ ಮತ್ತೆ ಬ್ರೇಕಪ್ ವಿಚಾರ ಮುನ್ನೆಲೆಗೆ ಬಂದಿದೆ.

ಮಲೈಕಾ ಅರೋರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಾಗೂ ಸ್ಟೇಟಸ್ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಮಲೈಕಾ ಅವರ ಹೊಸ ಸ್ಟೇಟಸ್ ಗಮನ ಸೆಳೆಯುತ್ತಿದೆ. ಅವರು ತುಂಬಾನೇ ನಿಗೂಢಾರ್ಥ ಇರುವ ರೀತಿಯಲ್ಲಿ ಸಾಲುಗಳನ್ನು ಪೋಸ್ಟ್ ಮಾಡಿದ್ದಾರೆ.

‘ಮಹಿಳೆ ನೀವು ಅವಳನ್ನು ಹೇಗೆ ನಡೆಸಿಕೊಳ್ಳುತ್ತೀರಿ ಎಂಬುದರ ಪ್ರತಿಬಿಂಬ ಆಗುತ್ತಾಳೆ. ಅವಳು ವರ್ತಿಸುತ್ತಿರುವುದು ನಿಮಗೆ ಇಷ್ಟವಾಗದಿದ್ದರೆ, ನೀವು ಅವಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂದು ನೋಡಿ’ ಎಂದು ಮಲೈಕಾ ಬರೆದುಕೊಂಡಿದ್ದಾರೆ. ಈ ಮೂಲಕ ಮಲೈಕಾ ಅರೋರಾ ಅವರನ್ನು ಅರ್ಜುನ್ ಕಪೂರ್ ಸರಿಯಾಗಿ ಟ್ರೀಟ್ ಮಾಡುತ್ತಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಮಲೈಕಾ ಹಾಗೂ ಅರ್ಜುನ್ ಕಪೂರ್ ಸುತ್ತಾಟ ಆರಂಭಿಸಿ ಹಲವು ವರ್ಷಗಳೇ ಕಳೆದಿವೆ. ಮಲೈಕಾಗಿಂತ ಅರ್ಜುನ್ 12 ವರ್ಷ ಸಣ್ಣವರು. ಇವರ ಮಧ್ಯೆ ವಯಸ್ಸಿನ ಅಂತರ ಅಡ್ಡಿ ಆಗಿಲ್ಲ. ಆದರೆ, ಈಗ ಇವರ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ತಂಡದಿಂದ ಸ್ಪಷ್ಟನೆ ಸಿಗಬೇಕಿದೆ.

ಮಲೈಕಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಈ ಕಾರಣದಿಂದಲೇ ಅವರ ವಯಸ್ಸು 49 ದಾಟಿದರೂ ಯುವತಿಯರನ್ನು ನಾಚಿಸುವಂತಿದ್ದಾರೆ. ಇತ್ತೀಚೆಗೆ ಅರ್ಜುನ್ ಕಪೂರ್ ಸೋಲೋ ಟ್ರಿಪ್ ತೆರಳಿದ್ದರು. ಇದರಿಂದ ಬ್ರೇಕಪ್ ವದಂತಿ ಹುಟ್ಟಿಕೊಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist