ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೀಪಿಕಾ ಪಡುಕೋಣೆ ಗರ್ಭಿಣಿ; 'ಸೆಪ್ಟೆಂಬರ್​ 2024' ಎಂದು ಸಾಮಾಜಿಕ ಜಾಲತನದಲ್ಲಿ ಪೋಸ್ಟ್ ಹಂಚಿಕೊಂಡ ದಂಪತಿ!

Twitter
Facebook
LinkedIn
WhatsApp
ದೀಪಿಕಾ ಪಡುಕೋಣೆ ಗರ್ಭಿಣಿ; 'ಸೆಪ್ಟೆಂಬರ್​ 2024' ಎಂದು ಸಾಮಾಜಿಕ ಜಾಲತನದಲ್ಲಿ ಪೋಸ್ಟ್ ಹಂಚಿಕೊಂಡ ದಂಪತಿ!

ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಮತ್ತು ನಟ ರಣವೀರ್ ಸಿಂಗ್ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ದಂಪತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಈ ವರ್ಷ ಸೆಪ್ಟೆಂಬರ್ನಲ್ಲಿ ಮಗುವಿಗೆ ದೀಪಿಕಾ ಜನ್ಮ ನೀಡಲಿದ್ದಾರೆ ಎಂದು ತಿಳಿಸಲಾಗಿದೆ. ಈ ಸುದ್ದಿ ತಿಳಿಸಲು ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದು ಡಿಫರೆಂಟ್ ಆಗಿದೆ. ಇದರಲ್ಲಿ ಯಾವುದೇ ಕ್ಯಾಪ್ಷನ್ ಇಲ್ಲ. ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಆಟಿಕೆ, ಟೋಪಿ ಮುಂತಾದ ವಸ್ತುಗಳಿರುವ ಚಿತ್ರವನ್ನು ಅವರು ಪೋಸ್ಟ್ ಮಾಡಿದ್ದಾರೆ. ‘ಸೆಪ್ಟೆಂಬರ್ 2024 ’ ಎಂದು ಇದರಲ್ಲಿ ಬರೆಯಲಾಗಿದೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಈಗ ದೀಪಿಕಾ ಪಡುಕೋಣೆ ಅವರು ಎರಡು ತಿಂಗಳ ಗರ್ಭಿಣಿ. ಇದೇ ವರ್ಷ ಸೆಪ್ಟೆಂಬರ್​ನಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ. ಸದ್ಯಕ್ಕೆ ಚಿತ್ರರಂಗದಲ್ಲಿ ಅವರು ತುಂಬ ಬೇಡಿಕೆ ಹೊಂದಿದ್ದಾರೆ. ಆದರೆ ಈಗ ಮಗು ಸಲುವಾಗಿ ಬ್ರೇಕ್​ ತೆಗೆದುಕೊಳ್ಳಲಿದ್ದಾರೆ.

ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್​ ಆಗಿರಬಹುದು ಎಂಬ ಗಾಸಿಪ್​ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಇತ್ತೀಚೆಗೆ ಅವರು ಬಾಫ್ಟಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲು ತೆರಳಿದ್ದರು. ಆಗ ಅವರು ಸೀರೆ ಧರಿಸಿದ್ದು. ಬೇಬಿ ಬಂಪ್​ ಕಾಣಬಾರದು ಎಂಬ ಉದ್ದೇಶದಿಂದಲೇ ಅವರು ಸೀರೆ ಧರಿಸಿದ್ದರು ಎಂದು ಅನೇಕರು ಊಹಿಸಿದ್ದರು. ಜನರ ಊಹೆ ಈಗ ನಿಜವಾಗಿದೆ. ದೀಪಿಕಾ ಪ್ರೆಗ್ನೆಂಟ್​ ಆಗಿರುವ ಸುದ್ದಿಯನ್ನು ಸ್ವತಃ ಬಹಿರಂಗಪಡಿಸಿದ್ದಾರೆ. ಈ ನ್ಯೂಸ್​ ಕೇಳಿ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

ಹಿಂದಿ, ಕನ್ನಡ, ತಮಿಳು ಸಿನಿಮಾಗಳಲ್ಲಿ ನಟಿಸಿ ದೀಪಿಕಾ ಪಡುಕೋಣೆ ಅವರು ಫೇಮಸ್​ ಆಗಿದ್ದಾರೆ. ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’, ‘ಛಪಾಕ್​’, ‘ಓಂ ಶಾಂತಿ ಓಂ’ ಮುಂತಾದ ಸಿನಿಮಾಗಳಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲೂ ದೀಪಿಕಾ ನಟಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಸದ್ಯ ‘ಕಲ್ಕಿ 2898 ಎಡಿ’, ‘ಸಿಂಗಂ ಅಗೇನ್​’ ಮುಂತಾದ ಸಿನಿಮಾಗಳ ಅವರ ಕೈಯಲ್ಲಿವೆ.

ಈ ವೀಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದೆ. ಗೇಟ್ಸ್ ಸ್ಥಳೀಯ ಜನಪ್ರಿಯ ಬೀದಿ ವ್ಯಾಪಾರಿಯಿಂದ ಚಹಾ ಕುಡಿಯುತ್ತಿರುವುದು ಸಾವಿರಾರು ಮಂದಿ ನೋಡಿ ಆಶ್ಚರ್ಯ ಮತ್ತು ಸಂತೋಷಪಟ್ಟಿದ್ದಾರೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸರಿಸುಮಾರು 40 ಲಕ್ಷ ವೀಕ್ಷಣೆಗಳನ್ನು ಗಳಿಸಿದೆ. Instagramನಲ್ಲಿ ಸುಮಾರು 300,000 ಲೈಕ್‌ಗಳನ್ನು ಗಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ