ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Dehradun: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ; ಬಸ್ ಚಾಲಕರು ಸೇರಿದಂತೆ ಐವರ ಬಂಧನ

Twitter
Facebook
LinkedIn
WhatsApp
Dehradun Gang rape

Dehradun: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಬ್ಬರು ಬಸ್ ಚಾಲಕರು ಸೇರಿದಂತೆ ಐವರನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಡೆಹ್ರಾಡೂನ್‌ನ (Dehradun) ಐಎಸ್‌ಬಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ನಡೆದ ಮೂರನೇ ಅಪರಾಧ ಇದಾಗಿದೆ.

ಮಕ್ಕಳ ಕಲ್ಯಾಣ ಸಮಿತಿ ತಂಡ ಅಪ್ರಾಪ್ತ ಬಾಲಕಿಯನ್ನು ಬಸ್ ನಿಲ್ದಾಣದಿಂದ ರಕ್ಷಿಸಿದ್ದು, ಘಟನೆಯನ್ನು ಬಯಲಿಗೆಳೆದಿದೆ. ಈ ಘಟನೆಯು ಹಿಂಸಾತ್ಮಕ ಅಪರಾಧಗಳಲ್ಲಿ ರಾಜ್ಯದ ಆತಂಕಕಾರಿ ಏರಿಕೆಯನ್ನು ಎತ್ತಿ ತೋರಿಸುತ್ತದೆ. ಮಕ್ಕಳ ಕಲ್ಯಾಣ ಸಮಿತಿ ತಂಡ ಅಪ್ರಾಪ್ತ ಬಾಲಕಿಯನ್ನು ಬಸ್ ನಿಲ್ದಾಣದಿಂದ ರಕ್ಷಿಸಿದ್ದು, ಘಟನೆಯನ್ನು ಬಯಲಿಗೆಳೆದಿದೆ. ಎಸ್‌ಎಸ್‌ಪಿ ಡೆಹ್ರಾಡೂನ್, ಅಜಯ್ ಸಿಂಗ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ, “ಬಸ್ ಸಿಬ್ಬಂದಿ ಅಪ್ರಾಪ್ತ ಬಾಲಕಿಯನ್ನು ದೆಹಲಿಯಿಂದ ಡೆಹ್ರಾಡೂನ್‌ಗೆ ಕರೆತಂದರು. ಇಬ್ಬರು ಬಸ್ ಚಾಲಕರು, ಕಂಡಕ್ಟರ್, ಕ್ಯಾಷಿಯರ್ ಮತ್ತು ಸ್ವೀಪರ್ ಸೇರಿದಂತೆ ಐವರು ಪುರುಷರು ಅದೇ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯು ಶನಿವಾರ ಐಎಸ್‌ಬಿಟಿ ಪೊಲೀಸ್ ಹೊರಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಲು ಕ್ಷಿಪ್ರ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸತತ ಮೂರು ಸಲ ಸಮಾಲೋಚನೆ ನಡೆಸಿದ ಬಳಿಕ ಬಾಲಕಿ ಉತ್ತರ ಪ್ರದೇಶದ ಮೊರಾದಾಬಾದ್ ಮೂಲದವಳು ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಮೊರಾದಾಬಾದ್‌ನ 16 ವರ್ಷದ ಬಾಲಕಿ ಮೇಲೆ ಆಗಸ್ಟ್ 13 ರ ಸಂಜೆ ಡೆಹ್ರಾಡೂನ್ (Dehradun) ISBT ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಬಾಲಕಿ ಪಂಜಾಬ್‌ನಿಂದ ದೆಹಲಿಗೆ ಮತ್ತು ನಂತರ ಡೆಹ್ರಾಡೂನ್‌ಗೆ ಪ್ರಯಾಣ ಬೆಳೆಸಿದ್ದಳು.

ಉತ್ತರಾಖಂಡ (Uttarakhand) ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕುಸುಮ್ ಕಂಡ್ವಾಲ್ ಅವರು ಭಾನುವಾರ ಬೆಳಗ್ಗೆ ಬಾಲಿಕಾ ನಿಕೇತನಕ್ಕೆ ಖುದ್ದು ಭೇಟಿ ನೀಡಿ ಸಂತ್ರಸ್ತ ಬಾಲಕಿಯ ಯೋಗಕ್ಷೇಮ ವಿಚಾರಿಸಿದರು.

“ಗ್ಯಾಂಗ್ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಐವರು ಆರೋಪಿಗಳನ್ನು ಧರ್ಮೇಂದ್ರ ಕುಮಾರ್, ರಾಜ್‌ಪಾಲ್ ಮತ್ತು ದೇವೇಂದ್ರ (ಹರಿದ್ವಾರ ನಿವಾಸಿಗಳು), ರಾಜೇಶ್ ಕುಮಾರ್ ಸೋಂಕರ್ (ಡೆಹ್ರಾಡೂನ್ ನಿವಾಸಿ) ಮತ್ತು ರವಿ ಕುಮಾರ್ ( ಫರೂಕಾಬಾದ್ ನಿವಾಸಿ).” ಎಂದು ಗುರುತಿಸಲಾಗಿದೆ.

ಉತ್ತರಾಖಂಡ ಕಾಂಗ್ರೆಸ್ ಉಪಾಧ್ಯಕ್ಷ ಸೂರ್ಯಕಾಂತ್ ದಸ್ಮನಾ ಅವರು, “ಡೆಹ್ರಾಡೂನ್ ರಾಜ್ಯದ ಅತ್ಯಾಚಾರದ ರಾಜಧಾನಿಯಾಗುತ್ತಿದ್ದು, ಬಹದ್ದೂರ್‌ಪುರ, ರುದ್ರಾಪುರ, ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ಮತ್ತು ಗಂಗೊಳ್ಳಿಹಾಟ್‌ನಂತಹ ಘೋರ ಅಪರಾಧಗಳ ಸರಮಾಲೆ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸುತ್ತಿದೆ” ಎಂದು ಹೇಳಿದರು.

ಸಹಪಾಠಿಗೆ ಚಾಕು ಇರಿತ – ಆರೋಪಿ ಮನೆ ಧ್ವಂಸ:

ಜೈಪುರ: ಉದಯ್‌ಪುರದಲ್ಲಿ (Udaipur) ಸಹಪಾಠಿಗೆ ಚಾಕು ಇರಿದ ಪ್ರಕರಣದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಆರೋಪಿಯ ಮನೆಯನ್ನು ಅಧಿಕಾರಿಗಳು ಶನಿವಾರ ಬುಲ್ಡೋಜರ್ ನಿಂದ ಧ್ವಂಸ ಮಾಡಿದ್ದಾರೆ.

ಆರೋಪಿ ಹಾಗೂ ಆತನ ತಂದೆ ನೆಲೆಸಿದ್ದ ಮನೆ ಅಕ್ರಮವಾಗಿತ್ತು ಎಂದು ಉದಯ್‌ಪುರ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮನೆ ಕೆಡವುವ ಮೊದಲು ಆ ಮನೆಯಲ್ಲಿದ್ದ ಸರಕು ಸಾಮಾನುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಆರೋಪಿ ಹಾಗೂ ಕುಟುಂಬಸ್ಥರಿಗೆ ಅವಕಾಶ ನೀಡಿದ್ದರು. 

ಕಟ್ಟಡ ಧ್ವಂಸಗೊಳಿಸುವ ವೇಳೆಯಲ್ಲಿ ಯಾವುದೇ ತೊಂದರೆ ಆಗಬಾರದು ಎಂದು ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಈ ನಡುವೆ ಸ್ಥಳೀಯರಿಗೆ ಹಾಗೂ ಪೊಲೀಸ್ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಘಟನೆ ಏನು?
ಉದಯಪುರ ಜಿಲ್ಲೆಯಲ್ಲಿ ಶುಕ್ರವಾರ 10ನೇ ತರಗತಿ ವಿದ್ಯಾರ್ಥಿ ಶಾಲೆಯಲ್ಲಿ ತನ್ನ ಸಹಪಾಠಿಗೆ ಚಾಕು ಇರಿದಿದ್ದು, ಮಧುಬನ್ ಪ್ರದೇಶದಲ್ಲಿ ಕೋಮುಗಲಭೆಗೆ ಕಾರಣವಾಯಿತು. ಸದ್ಯ ಆರೋಪಿಯನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ. ಈ ಘಟನೆ ಸಂಭವಿಸಿದ ನಂತರ ಮಧುಬನ್ (Madhuban) ಪ್ರದೇಶದ ಹಲವಾರು ಸೇರಿ ಪಕ್ಕದ ಗ್ಯಾರೇಜಿನಲ್ಲಿದ್ದ ಮೂರಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ಮಾಡಿದ್ದಾರೆ.

ಕೋಮುಗಲಭೆ ಸಂಭವಿಸುವ ಸಾಧ್ಯತೆ ಇರುವ ಕಾರಣಕ್ಕೆ ಜಿಲ್ಲಾಡಳಿತ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ನಗರದಲ್ಲಿ ಯಾವುದೇ ದೊಡ್ಡ ಕಾರ್ಯಕ್ರಮ ನಡೆಸದಂತೆ ನಿರ್ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ