ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಿಢೀರ್ ಈಶ್ವರಪ್ಪಗೆ ದೆಹಲಿ ಬುಲಾವ್; ಪಕ್ಷೇತರ ಸ್ಪರ್ಧೆ ನಿಲುವು ಬದಲಾಗುತ್ತಾ.?

Twitter
Facebook
LinkedIn
WhatsApp
ದಿಢೀರ್ ಈಶ್ವರಪ್ಪಗೆ ದೆಹಲಿ ಬುಲಾವ್; ಪಕ್ಷೇತರ ಸ್ಪರ್ಧೆ ನಿಲುವು ಬದಲಾಗುತ್ತಾ.?

ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ (KS Eshwarappa) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಪ್ತರ ಜತೆ ಮಾಹಿತಿ ಹಂಚಿಕೊಂಡಿರುವ ಈಶ್ವರಪ್ಪ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ಆದರೆ, ಸ್ಪರ್ಧೆಯ ವಿಚಾರವಾಗಿ ನಿಲುವಿಗೆ ಬದ್ಧ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೆಎಸ್ ಈಶ್ವರಪ್ಪ, ‘ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅವರ ಕೋರಿಕೆಯ ಮೇರೆಗೆ ದೆಹಲಿಗೆ ಹೋಗುತ್ತೇನೆ. ಆದರೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಈಶ್ವರಪ್ಪ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಸದ್ಯ ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದ್ದಾರೆ. ಇದೇ ವೇಳೆ ಅವರು ಈಶ್ವರಪ್ಪಗೆ ದೂರವಾಣಿ ಕರೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾದ ಬೆನ್ನಲ್ಲೇ ಬಿಎಸ್​ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಶತಃಸಿದ್ಧ ಎಂದು ಘೋಷಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕುಟುಂಬದ ಹಿಡಿತದಿಂದ ಪಕ್ಷ ಮುಕ್ತವಾಗುವ ವರೆಗೆ ವಿರಮಿಸುವುದಿಲ್ಲ ಎಂದೂ ಹೇಳಿದ್ದಾರೆ.

ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಅಮಿತ್ ಶಾ

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜತೆ ಸಭೆ ನಡೆಸಿದ ಅಮಿತ್ ಶಾ, ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದರು. ಕುಮಾರಸ್ವಾಮಿ ಬಳಿ, ‘ಹೇಗಿದೆ ನಿಮ್ಮ ಆರೋಗ್ಯ’ ಎಂದು ಶಾ ವಿಚಾರಿಸಿದರು. ಇದಕ್ಕೆ ಉತ್ತರಿಸಿದ ಕುಮಾರಸ್ವಾಮಿ, ‘ಪರವಾಗಿಲ್ಲ, ನಾನು ಚೆನ್ನಾಗಿ ಇದ್ದೇನೆ’ ಎಂದರು.

ಯದುವೀರ್ ಬಳಿ ಚಿನ್ನ ಬೆಳ್ಳಿ ಎಷ್ಟಿದೆ

ಯದುವೀರ್ ಒಡೆಯರ್‌ ಹೆಸರಿನಲ್ಲಿ 3.25 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನವಿದೆ. ಮಡದಿ ತ್ರಿಷಿಕಾ ಹೆಸರಿನಲ್ಲಿ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ 5.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ, ಪುತ್ರನ ಹೆಸರಿನಲ್ಲಿ 12 ಲಕ್ಷ ರೂಪಾಯಿ ಚಿನ್ನ ಹಾಗೂ 5.5 ಲಕ್ಷ ರೂಪಾಯಿ ಚಿನ್ನದ ಗಟ್ಟಿ ಇದೆ.

ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ, ಜೆಡಿಎಸ್​ ನಾಯಕರ ಸಭೆ ನಡೆದಿದ್ದು ಅಮಿತ್ ಶಾ, ಹೆಚ್​ಡಿಕೆ ನೇತೃತ್ವದಲ್ಲಿ ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಸದಾನಂದಗೌಡ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್​​, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್​​, ಶಾಸಕರಾದ ಮುನಿರತ್ನ, ಗೋಪಾಲಯ್ಯ, ಸುರೇಶ್ ಕುಮಾರ್​ ಭಾಗಿಯಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist