ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಬಂಧನ ..!

Twitter
Facebook
LinkedIn
WhatsApp
ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಬಂಧನ ..!

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21 ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ಡೆಲ್ಲಿ ಹೈಕೋರ್ಟ್ (Delhi Highcourt) ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಜೆ ವೇಳೆ ಸಿಎಂ ನಿವಾಸಕ್ಕೆ ಹೋದ ಇಡಿ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿದ್ದಾರೆ.

ಇಡಿ ಅಧಿಕಾರಿಗಳು ದೊಡ್ಡ ಮಟ್ಟದ ಪೊಲೀಸ್​ ಭದ್ರತೆಯೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಸತತವಾಗಿ ಎರಡು ಗಂಟೆಗಳ ಕಾಲ ಪರಿಶೋಧ ನಡೆಸಿದರು. ಇದೇ ವೇಳೆ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಎಂ ನಿವಾಸಕ್ಕೆ ತೆರಳಿದ್ದ 12ಕ್ಕೂ ಅಧಿಕ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಹಲವಾರು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಕೇಜ್ರಿವಾಲ್ ಅವರ ಮನೆಗೆ ಹೋಗುವ ರಸ್ತೆಗಳನ್ನು ದೆಹಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಪ್ರವೇಶಿಸಲು ಎಎಪಿ ನಾಯಕರಿಗೆ ಅವಕಾಶ ನೀಡುತ್ತಿಲ್ಲ. ಕೇಜ್ರಿವಾಲ್ ಅವರಿಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸೌರಭ್ ಭಾರದ್ವಾಜ್ ಹೇಳಿದರು.

ಕೇಜ್ರಿವಾಲ್ ಅವರ ಮನೆಗೆ ಅಧಿಕಾರಿಗಳು ತೆರಳುತ್ತಿದ್ದಂತೆ ಆಪ್​ ಕಾರ್ಯಕರ್ತರು ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ನಾಯಕರು ಮನೆಯ ಸುತ್ತ ಜಮಾಯಿಸಿ ಘೋಷಣೆಗಳನ್ನು ಕೂಗಿದರು.

ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ (Money Laundering Case) ಇ.ಡಿ ಅಧಿಕಾರಿಗಳ ಬಂಧನದಿಂದ ರಕ್ಷಣೆ ಕೋರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ (Delhi High Court) ತಿರಸ್ಕರಿಸಿತ್ತು.

“ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ 9 ಬಾರಿ ಸಮನ್ಸ್‌ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಮಂಧ್ಯಂತರ ರಕ್ಷಣೆ ನೀಡಲು ಆಗುವುದಿಲ್ಲ” ಎಂದು ದೆಹಲಿ ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಅವರಿಂದ್‌ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇದುವರೆಗೆ 9 ಬಾರಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಆದರೂ, ಕೇಜ್ರಿವಾಲ್‌ ಅವರು ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ. ಈಗ ನ್ಯಾಯಾಲಯವು ಬಂಧನದಿಂದ ರಕ್ಷಣೆ ನೀಡದ ಕಾರಣ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದಾಗ್ಯೂ, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಏಪ್ರಿಲ್‌ 22ಕ್ಕೆ ಮುಂದೂಡಿದೆ.

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ