ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೈಲಿನಿಂದ ಯುವತಿಯ ನಗ್ನ ಫೋಟೋ ಕಳಿಸಿ ಹಣಕ್ಕೆ ಡಿಮ್ಯಾಂಡ್; ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು..!

Twitter
Facebook
LinkedIn
WhatsApp
ಜೈಲಿನಿಂದ ಯುವತಿಯ ನಗ್ನ ಫೋಟೋ ಕಳಿಸಿ ಹಣಕ್ಕೆ ಡಿಮ್ಯಾಂಡ್; ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು..!

\ಜೈಲಿನಿಂದ ಮಹಿಳೆಯ ಬೆತ್ತಲೆ ಫೋಟೋ ಕಳುಹಿಸಿದ್ದ ರೌಡಿಶೀಟರ್(Rowdy Sheeter) ಹಾಗೂ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪರಿಚಯಸ್ಥ ಮಹಿಳೆಗೆ ಯಲಹಂಕ(Yalahanka) ರೌಡಿಶೀಟರ್ ಮನೋಜ್ ಅಲಿಯಾಸ್​ ಕೆಂಚ ಎಂಬಾತ ಜೈಲಲ್ಲಿ ಕುಳಿತುಕೊಂಡು ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಹಿನ್ನಲೆ ಮನೋಜ್ ಅಲಿಯಾಸ್​ ಕೆಂಚ, ಸುಭಾಷ್ ಹಾಗೂ ಯೋಗೆಶ್ ಎಂಬುವವರನ್ನು ಬಂಧಿಸಲಾಗಿದೆ.

ರೌಡಿಶೀಟರ್​​​ ಮನೋಜ್ ಕಳೆದ ವರ್ಷ ಅಗಸ್ಟ್​​ನಲ್ಲಿ ಯುವತಿಯ ತಾಯಿಗೆ ಕರೆ ಮಾಡಿ, ನಿನ್ನ ಮಗಳ ಬೆತ್ತಲೆ ಫೋಟೋವನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಯುವತಿಯ ತಾಯಿ, ರೌಡಿಶೀಟರ್​​​ ಮನೋಜ್​​ಗೆ 40 ಸಾವಿರ ಹಣ ನೀಡಿದ್ದರು. ನಂತರ ಫೆಬ್ರವರಿ 9 ರಂದು ಮನೋಜ್​ ಸಹಚರ ಕಾರ್ತಿಕ್ ಎಂಬಾತ​ ಯುವತಿಯ ತಾಯಿಗೆ ವಾಟ್ಸಪ್ ಮೂಲಕ ಕರೆ ಮಾಡಿ, ನಾನು (ಕಾರ್ತಿಕ್​) ಮನೋಜ್​ ಕಡೆಯ ಹುಡುಗ. ನೀವು 5 ಲಕ್ಷ ರೂ. ಕೊಡದಿದ್ದರೆ ನಿಮ್ಮಗಳ ಮಗಳ ನಗ್ನ ಫೋಟೋವನ್ನು ನಿನ್ನ ಅಳಿಯನಿಗೆ ಕಳಸುತ್ತೇನೆ ಎಂದು ಬ್ಲ್ಯಾಕ್​ಮೇಲ್​ ಮಾಡಿದ್ದಾನೆ.

ಇದಾದ ನಂತರ ಫೆಬ್ರವರಿ 12 ರಂದು ಮನೋಜ್​​ ಜೈಲಿನಿಂದಲೇ ಯುವತಿಯ ತಾಯಿ ವಾಟ್ಸಾಪ್ ಹಾಗೂ ಮೆಸೆಂಜರ್ ಮೂಲಕ ಕರೆ ಮಾಡಿ, ಹಣ ನೀಡದಿದ್ದರೆ ನಿನ್ನ ಮಗಳ ನಗ್ನ ಫೋಟೋ ರಿವೀಲ್ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಇದರಿಂದ ರೋಸಿ ಹೋದ ಸಂತ್ರಸ್ತರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ 67, ಐಪಿಸಿ 34 ಅಂಡ್ 384 ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಜೈಲಿನಲ್ಲಿದ್ದ ಮನೋಜ್ ಅಲಿಯಾಸ್​ ಕೆಂಚನನ್ನ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದ ಸಿಸಿಬಿ, ಕೆಂಚನಿಗೆ ಸಹಾಯ ಮಾಡಿದ್ದ ಯೊಗೇಶ್ ಹಾಗೂ ಸುಭಾಷ್ ಅವರನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ