ಬುಧವಾರ, ಡಿಸೆಂಬರ್ 25, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸುಪ್ರೀಂನಿಂದ ಬಿಗ್‌ ರಿಲೀಫ್!

Twitter
Facebook
LinkedIn
WhatsApp
India Briefing Filing Income Tax Returns in India 4

ನವದೆಹಲಿ: ಆದಾಯಕ್ಕೂ ಮೀರಿ‌ ಆಸ್ತಿಗಳಿಕೆ ಪ್ರಕರಣದಲ್ಲಿ (Disproportionate Assets Case) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಿಬಿಐ (CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾ ಮಾಡಿದೆ.

2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆಗೆ ಡಿಕೆ ಶಿವಕುಮಾರ್ ರಾಜ್ಯ ಹೈಕೋರ್ಟ್‌ನಿಂದ ಮಧ್ಯಂತರ ತಡೆ ತಂದಿದ್ದರು. ಆದೇಶ ವಿಸ್ತರಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಫೆಬ್ರವರಿ 10ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾವಿ, ನ್ಯಾ.ಸಿ.ಟಿ.ರವಿಕುಮಾರ್ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಮಧ್ಯಂತರ ತಡೆಯಾಗಿರುವ ಹಿನ್ನಲೆ ಈ ಹಂತದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿದೆ.  

ಫೆಬ್ರವರಿ 10 ರಂದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಹೈಕೋರ್ಟ್ ಸೂಚಿಸಿತ್ತು. ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣಗಳು 2020 ರಂದು ರದ್ದಾಗಿವೆ ಎಂದು ಸೂಚಿಸಿದ್ದ ಹೈಕೋರ್ಟ್, ಕಳೆದ ಎರಡು ವರ್ಷಗಳ ತನಿಖೆಯ ಪ್ರಗತಿಯ ಕುರಿತು ಸಿಬಿಐ ಅನ್ನು ಪ್ರಶ್ನಿಸಿತ್ತು. ಅಷ್ಟೇ ಅಲ್ಲದೇ ಅಂತಿಮ ವರದಿಯನ್ನು ಯಾವಾಗ ಸಲ್ಲಿಸುತ್ತೀರಿ ಎಂದು ಕೇಳಿ ಮಧ್ಯಂತರ ತಡೆ ನೀಡಿತ್ತು.

ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಕೆಜೆ ಹಳ್ಳಿ, ಡಿಜಿ ಹಳ್ಳಿ ಪ್ರಕರಣದಲ್ಲೂ ಅಫ್ಸರ್ ಪಾಷಾ ಪಾತ್ರ – ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್ ಮೈಂಡ್ ಅಫ್ಸರ್ ಪಾಷಾ ಕೆಜೆ ಹಳ್ಳಿ (KJ Halli) ಹಾಗೂ ಡಿಜಿ (DG Halli) ಹಳ್ಳಿ ಗಲಭೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆರೋಪಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಸ್ಫೋಟದ ಬಗ್ಗೆ ಕಾಂಗ್ರೆಸ್ ನಾಯಕರು ಭಯೋತ್ಪಾದನಾ ಕೃತ್ಯವಲ್ಲ ಎಂದು ವಾದಿಸಿದ್ದರು. ಆದರೆ ಈಗ ಸತ್ಯಗಳು ಹೊರಗೆ ಬರುತ್ತಿವೆ. ಆದರೆ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ. 

ಬೆಳಗಾವಿಯ ಜೈಲಿನಲ್ಲಿದ್ದ ಅಫ್ಸರ್ ಪಾಷಾ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತಿಳಿದು ಬಂದಿದೆ. ಅಲ್ಲದೇ ಮಹಾರಾಷ್ಟ್ರ ಎಟಿಎಸ್ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ. ಇವರಿಂದಲೇ ಕೇಂದ್ರ ಸಚಿವರಿಗೆ ಬೆದರಿಕೆ ಸಹ ಬಂದಿತ್ತು. ಈ ಪ್ರಕರಣದ ಆರೋಪಿ ಜಯೇಶ್ ಪೂಜಾರಿ ಶಾಹೀರ್ ಆಗಿ ಮತಾಂತರವಾಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಅಫ್ಸರ್ ಪಾಷಾ ಜಮಾತ್‍ನಿಂದ ಬಂದ ಹಣವನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುತ್ತಿದ್ದ. ಜೈಲಿನಲ್ಲಿ ಕರ್ನಾಟಕದ ಯುವಕರ ಮೈಂಡ್ ವಾಷ್ ಮಾಡುತ್ತಿರುವುದು ಸಹ ಬಯಲಾಗಿದೆ. ಜೈಲಿನಲ್ಲಿದ್ದುಕೊಂಡೇ ಭಯೋತ್ಪಾದಕ ಕೃತ್ಯಗಳು ನಡೆಸಲಾಗುತ್ತಿದೆ. ಕರ್ನಾಟಕ ಉಗ್ರರ ಅಡಗು ತಾಣವಾಗುತ್ತಿದೆ. ಈ ಮೂಲಕ ಮತ್ತೊಂದು ಕೇರಳವಾಗಿ ಮಾರ್ಪಾಡಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನಾವು ಯಾರು ಸುರಕ್ಷಿತವಾಗಿಲ್ಲ. ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕೆಜೆ ಹಳ್ಳಿ ಹಾಗೂ ಡಿಜಿ ಹಳ್ಳಿ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸುವಂತೆ ಅವರು ಆಗ್ರಹಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist