ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

Twitter
Facebook
LinkedIn
WhatsApp
233831489 380003373482147 2412848297956402447 n 1

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಡಿಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸಿಬಿಐ ತನಿಖೆಗೆ ತಡೆಯಾಜ್ಞೆ ವಿಧಿಸಿರುವ ಹೈಕೋರ್ಟ್‌ ಏಕಸದಸ್ಯ ಪೀಠ, ಈಗಾಗಲೇ ಪ್ರಕರಣದ ವಿಚಾರಣೆಯನ್ನು ಮತ್ತೊಂದು ಪೀಠ ನಡೆಸಿದ್ದ ಹಿನ್ನೆಲೆ ಯಾವ ಪೀಠದಲ್ಲಿ ವಿಚಾರಣೆ ನಡೆಯಬೇಕೆಂಬ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳ ಆದೇಶ ಅಗತ್ಯ. ಹೀಗಾಗಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಅವಗಾಹನೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನ ಸಿಜೆ ಸೂಚನೆ ಬಳಿಕ ಹೈಕೋರ್ಟ್‌ ಮತ್ತೆ ವಿಚಾರಣೆ ನಡೆಸಲಿದೆ.

ಈ ಪ್ರಕರಣದ ವಿಚಾರಣೆ ಈ ಹಿಂದೆ ನ್ಯಾ.ನಟರಾಜನ್ ಪೀಠದಲ್ಲಿ ನಡೆದಿತ್ತು. ಈಗ ನ್ಯಾ. ಎಂ ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಹೀಗಾಗಿ ಯಾವ ಪೀಠದಲ್ಲಿ ವಿಚಾರಣೆ ಮುಂದುವರಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ನಿರ್ಧಾರ ಮಾಡಲಿದ್ದಾರೆ. ಈ ಹಿನ್ನೆಲೆ ಮುಂದಿನ ವಿಚಾರಣೆವರೆಗೂ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರೆಸಿ ಆದೇಶ ನೀಡಲಾಗಿದೆ.

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮೂರನೇ ಬಾರಿ ತಡೆಯಾಜ್ಞೆ ವಿಸ್ತರಿಸಿದಂತಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತೆ ಆಗಿದೆ.

2020ರಲ್ಲಿ ಸಿಬಿಐನಿಂದ ಪ್ರಕರಣ
ಇನ್ನು, ಡಿಕೆ ಶಿವಕುಮಾರ್‌ ವಿರುದ್ಧ ಸಿಬಿಐ ಅಕ್ಟೋಬರ್‌ 3, 2020ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಿಬಿಐ ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆಯನ್ನು ನೀಡಿತ್ತು.
ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಸಿಬಿಐ ಮೇಲ್ಮನವಿ!

ಇನ್ನು ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಫೆಬ್ರವರಿ 10ರಂದು ಹೈಕೋರ್ಟ್‌ ಡಿಕೆ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಅದನ್ನು ಅನೇಕ ಬಾರಿ ವಿಸ್ತರಿಸಲಾಗಿದೆ. ಈ ಹಿನ್ನೆಲೆ ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು.

ಸಿಬಿಐ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಅರ್ಜಿಯ ವಿಚಾರಣೆಯನ್ನು ಜುಲೈ 14ರವರೆಗೂ ಮುಂದೂಡಿದೆ. ನ್ಯಾಯಮೂರ್ತಿಗಳಾದ ಬಿಆರ್‌ ಗವಾಯಿ ಮತ್ತು ಸಂಜಯ್‌ ಕರೋಳ್‌ ನೇತೃತ್ವದ ಪೀಠ ವಿಚಾರಣೆಯನ್ನು ಮುಂದೂಡಿತ್ತು. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಪರ ಅಭಿಷೇಕ್‌ ಮನುಸಿಂಘ್ವಿ ವಾದ ಮಂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist