ಕರ್ತವ್ಯ ಲೋಪ ಆರೋಪ: ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಯು) ಅಮಾನತು
Twitter
Facebook
LinkedIn
WhatsApp
ಮಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭ ಜಿಲ್ಲಾ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆಯದೆ ಬೆಂಗಳೂರಿಗೆ ತೆರಳಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಯು) ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.
ಮೇ 9ರಂದು ಜಿಲ್ಲಾ ಚುನಾವಣಾಧಿಕಾರಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸುವಂತೆ ಡಿಡಿಪಿಯು ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದರು. ಈ ಬಗ್ಗೆ ನೋಟೀಸ್ ನೀಡಲಾಗಿತ್ತು. ಅದಕ್ಕೆ ನೀಡಿದ ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಿಂದ ಡಿಡಿಪಿಯು ಅವರನ್ನು ಅಮಾನತುಗೊಳಿಸಲಾಗಿದೆ. ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪ್ರಭಾರವಾಗಿ ನೇಮಕ ಮಾಡಲಾಗಿದೆ.
ಮೇ 22ರಂದು ಜಯಣ್ಣ ಮತ್ತೆ ಲಿಖೀತ ಉತ್ತರ ನೀಡಿದ್ದು, ನನ್ನ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸುವುದಾಗಿ ಉಲ್ಲೇಖೀಸಿದ್ದಾರೆ.