ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಂದ್ಯ ಶ್ರೇಷ್ಠ ಪ್ರಶಸ್ತಿಯಿಂದ ವಂಚಿತನಾದರೂ ದಾಖಲೆ ಮೇಲೆ ದಾಖಲೆ ಸೃಷ್ಟಿಸಿದ ಯಶಸ್ವಿ ಜೈಸ್ವಾಲ್!!

Twitter
Facebook
LinkedIn
WhatsApp
ಪಂದ್ಯ ಶ್ರೇಷ್ಠ ಪ್ರಶಸ್ತಿಯಿಂದ ವಂಚಿತನಾದರೂ ದಾಖಲೆ ಮೇಲೆ ದಾಖಲೆ ಸೃಷ್ಟಿಸಿದ ಯಶಸ್ವಿ ಜೈಸ್ವಾಲ್!!

 ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 2-1 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಹೈದರಾಬಾದ್‌ನಲ್ಲಿ ನಡೆದಿದ್ದು, ಪ್ರವಾಸಿ ತಂಡ ಗೆದ್ದಿತ್ತು. 

  ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ಜಯ ಸಾಧಿಸಿದೆ. ಇದೀಗ ಮೂರನೇ ಟೆಸ್ಟ್‌ನಲ್ಲೂ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದೆ.

ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಬಾರಿಸಿದರು. ಆದರೆ ಇದರ ಹೊರತಾಗಿಯೂ ಅವರಿಗೆ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ನೀಡಲಿಲ್ಲ. ಮೂರನೇ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ ಅವರ ಆಲ್‌ರೌಂಡ್ ಪ್ರದರ್ಶನಕ್ಕಾಗಿ ಪಂದ್ಯದ ಆಟಗಾರರಾಗಿ ಆಯ್ಕೆಯಾದರು. ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ ಒಟ್ಟು 5 ವಿಕೆಟ್ ಪಡೆದರು.

ಅವರು ಆಲಿ ಪಾಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಫಾಕ್ಸ್ ಮತ್ತು ಮಾರ್ಕ್ ವುಡ್ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಮುಖ ವಿಕೆಟ್ ಪಡೆದರು. ಮೊದಲ ಇನಿಂಗ್ಸ್‌ನಲ್ಲಿ ಜಡೇಜಾ 2 ವಿಕೆಟ್ ಪಡೆದಿದ್ದರು. ಜಡೇಜಾ ಕೂಡ ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದರು. 

 ಈ ಅತ್ಯುತ್ತಮ ಪ್ರದರ್ಶನದಿಂದಾಗಿ, ಅವರು ಮೂರನೇ ಟೆಸ್ಟ್‌ನಲ್ಲಿ ಪಂದ್ಯದ ಆಟಗಾರರಾಗಿ ಆಯ್ಕೆಯಾದರು.

 

ರಾಜ್‌ಕೋಟ್‌ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ಸಿಡಿದೆದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ 22 ವರ್ಷ ವಯಸ್ಸಿನ ಎಡಗೈ ಬ್ಯಾಟರ್ 236 ಎಸೆತಗಳಲ್ಲಿ 14 ಬೌಂಡರಿ ಮತ್ತು 12 ಸಿಕ್ಸರ್‌ಗಳ ಸಹಾಯದಿಂದ 214 ರನ್ ಚಚ್ಚಿದರು.

ಜೈಸ್ವಾಲ್ ವೃತ್ತಿಜೀವನದ ಅತ್ಯುತ್ತಮ ನಾಕ್‌ ಇದಾಗಿದೆ. ಇವರ ಈ ಭರ್ಜರಿ ಬ್ಯಾಟಿಂಗ್ನಿಂದ ಭಾರತವು ಇಂಗ್ಲೆಂಡ್ ಅನ್ನು 434 ರನ್‌ಗಳಿಂದ ಸೋಲಿಸಿ ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ತನ್ನ ಅತಿದೊಡ್ಡ ಗೆಲುವನ್ನು ಕೂಡ ದಾಖಲಿಸಿತು. 

   ಇದು ಇಂಗ್ಲೆಂಡ್ ವಿರುದ್ಧ ಜೈಸ್ವಾಲ್ ಅವರ ಎರಡನೇ ದ್ವಿಶತಕವಾಗಿದೆ ಈ ಮೂಲಕ ಇತಿಹಾಸ ನಿರ್ಮಿಸಿದರು.

ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಇಂಗ್ಲೆಂಡ್ ವಿರುದ್ಧ ಎರಡು ದ್ವಿಶತಕಗಳನ್ನು ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಯುವ ಆಟಗಾರ ಜೈಸ್ವಾಲ್ ಪಾತ್ರರಾದರು. ರಾಜ್‌ಕೋಟ್‌ನಲ್ಲಿ ಇಂಗ್ಲಿಷ್ ಬೌಲರ್‌ಗಳನ್ನು ಬಗ್ಗು ಬಡಿಯುವ ಮೊದಲು, ಜೈಸ್ವಾಲ್ ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 209 ರನ್ ಗಳಿಸಿದ್ದರು.

ಭಾರತವು 1934 ರಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿತು. ಆಗಿನಿಂದ ಈವರೆಗೆ ಯಾರೂ ಕೂಡ ಆಂಗ್ಲರ ವಿರುದ್ಧದ ಎರಡು ಬಾರಿ ದ್ವಿಶತಕ ಸಿಡಿಸಿಲ್ಲ. ಆದರೆ, ಈಗ ಜೈಸ್ವಾಲ್ 90 ವರ್ಷಗಳಲ್ಲಿ ಇಂಗ್ಲಿಷ್ ತಂಡದ ವಿರುದ್ಧ ಎರಡು ದ್ವಿಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್ ಎಂಬ ಸಾಧನೆ ಮಾಡಿದ್ದಾರೆ.

ಹಾಗೆಯೆ ಜೈಸ್ವಾಲ್ ಅವರ ದ್ವಿಶತಕದೊಂದಿಗೆ, ಬ್ಯಾಕ್-ಟು-ಬ್ಯಾಕ್ ಪಂದ್ಯಗಳಲ್ಲಿ ದ್ವಿಶತಕಗಳನ್ನು ಗಳಿಸಿದ ಮೂರನೇ ಭಾರತೀಯ ಕ್ರಿಕೆಟಿಗರಾದರು. ಈ ಹಿಂದೆ ವಿನೋದ್ ಕಾಂಬ್ಳಿ ಬ್ಯಾಕ್-ಟು-ಬ್ಯಾಕ್ 200+ ಸ್ಕೋರ್‌ಗಳನ್ನು ಗಳಿಸಿದ ಮೊದಲ ಭಾರತೀಯರಾಗಿದ್ದರು ಮತ್ತು ವಿರಾಟ್ ಕೊಹ್ಲಿ 2017 ರಲ್ಲಿ ಭಾರತ-ಶ್ರೀಲಂಕಾ ಸರಣಿಯ ಸಮಯದಲ್ಲಿ ಈ ಗಣ್ಯರ ಪಟ್ಟಿಗೆ ಸೇರಿದ್ದರು.

 

  3 ನೇ ದಿನದಂದು ಬೆನ್ನುನೋವಿನ ಕಾರಣ ಗಾಯಗೊಂಡು ನಿವೃತ್ತರಾದ ಜೈಸ್ವಾಲ್, ನಾಲ್ಕನೇ ದಿನದ ಆಟದ ಬೆಳಗಿನ ಅವಧಿಯಲ್ಲಿ ಗಿಲ್ ಔಟಾದ ನಂತರ ಮತ್ತೆ ಬ್ಯಾಟಿಂಗ್ಗೆ ಬಂದರು. 

  ಕ್ರೀಸ್‌ನಲ್ಲಿರುವಾಗ 12 ಸಿಕ್ಸರ್‌ಗಳನ್ನು ಗಳಿಸುವ ಮೂಲಕ, ಜೈಸ್ವಾಲ್ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದಾಖಲೆಯನ್ನು ಸರಿಗಟ್ಟಿದರು.

  ಮೂರನೇ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರ ಸೂಪರ್ ಶೋನೊಂದಿಗೆ, ಯುವ ಆಟಗಾರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-25 ಸೈಕಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಈಗ ನಂ. 1 ಸ್ಥಾನವನ್ನು ತಲುಪಿದ್ದಾರೆ. ಏಳು ಪಂದ್ಯಗಳಲ್ಲಿ ಅವರು 861 ರನ್ ಗಳಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist