ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇವೇಗೌಡರ ಅಚ್ಚರಿಯ ಹೇಳಿಕೆ; ರಾಜ್ಯ ಬಿಜೆಪಿಯಲ್ಲಿ ತಳಮಳ!

Twitter
Facebook
LinkedIn
WhatsApp
Devegowda: ದೇವೇಗೌಡರ ಅಚ್ಚರಿಯ ಹೇಳಿಕೆ

ಬೆಂಗಳೂರು, (ಜುಲೈ 25): ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯಿತು. ಆದ್ರೆ, ಇದುವರೆಗೂ ಬಿಜೆಪಿಯಲ್ಲಿ (BJP) ಯಾರು ವಿಪಕ್ಷ ನಾಯಕರಾಗುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಲ್ಲೇ ಇವೆ. ವಿರೋಧ ಪಕ್ಷದ ನಾಯಕ ಅವರು ಆಗುತ್ತಾರೆ. ಇವರು ಆಗುತ್ತಾರೆ ಎನ್ನುವ ಸುದ್ದಿ ಅಷ್ಟೇ ಹರಿದಾಡುತ್ತಿದೆ. ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆಯಾಗಲಿದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (DS supremo HD Devegowda) ಅವರು ವಿರೋಧ ಪಕ್ಷದ ನಾಯಕ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುವ ಹೆಸರುಗಳು ಘೋಷಣೆ ಮಾಡಿದ್ದಾರೆ. ಇಂದು (ಜುಲೈ 25) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಸಿ.ಟಿ.ರವಿ (CT Ravi) ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಟಿ ರವಿ ಆಗಲಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್​ ವಿರೋಧ ಪಕ್ಷದ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ ಎಂದು ಹೇಳಿರುವ ದೇವೇಗೌಡ, ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ಅದರಲ್ಲಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಹೇಳಿದರು. ಈ ಮೂಲಕ ಬಿಜೆಪಿಯೊಂದಿಗೆ ಮೈತ್ರಿ ಎಲ್ಲ ಎಂದು ಸ್ಪಷ್ಟಪಡಿಸಿದರು.

ಇದರೊಂದಿಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಅಂತೆ-ಕಂತೆಗಳ ಚರ್ಚೆಗಳಿಗೆ ದೇವೇಗೌಡ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಗೊಂದಲಿಗೆ ತೆರೆ ಎಳೆದಿದ್ದು, ಮುಂದಿನ ಲೋಕಸಭೆ ಚುನಾವಣೆ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ​ ಸ್ವತಂತ್ರವಾಗೊ ಸ್ಪರ್ಧೆ ಮಾಡಲಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಗೊಂದಲಗಳಿಗೆ ತೆರೆ ಎಳೆದ ದೇವೇಗೌಡ :

ಬೆಂಗಳೂರು: ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿಚಾರ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ವಿಧಾನಸಭೆ ಅಧಿವೇಶನದಲ್ಲೂ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಆರೋಪಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಜಂಟಿಯಾಗಿ ಸುದ್ದಿಗೋಷ್ಠಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೈತ್ರಿ ಪಕ್ಕಾ ಎನ್ನಲಾಗಿತ್ತು. ಆದರೆ ಇದಕ್ಕೆ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ (HD Devegowda) ಅವರು ತೆರೆಳೆದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆ ಗೊತ್ತಿಲ್ಲ. ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಸಿಎಂ, ಪ್ರಧಾನಿ ಆದೆ, ಕುಮಾರಸ್ವಾಮಿ ಸೇರಿದಂತೆ ಅನೇಕರು ಸಿಎಂ ಆಗಿದ್ದಾರೆ. ಈ ಪಕ್ಷ ಅಳಿಸಿ ಹಾಕುತ್ತೇವೆ ಅಂದರೇ ಅದು ಸಾಧ್ಯವಿಲ್ಲ. ನಮ್ಮ 19 ಶಾಸಕರು, 7 ವಿಧಾನಪರಿಷತ್ ಸದಸ್ಯರ ಜೊತೆ ಕೂತು ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಜಿ.ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕಮೀಟ ಮಾಡಿ, ಕಾರ್ಯಕ್ರಮ ರೂಪಿಸಲು ಸಲಹೆ ನೀಡಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಅಭಿಪ್ರಾಯ ಪಡೆದು ಒಂದು ಗೂಡಿಸುವ ಕೆಲಸ ಮಾಡಲಿದ್ದೇವೆ ಎಂದರು.

ಅನಂತರ 22ರಂದು ಅವರು ಪಪುವಾ ನ್ಯೂಗಿನಿಯಾಗೆ ತೆರಳಿ ಇಲ್ಲಿ ಇಂಡಿಯಾ ಪೆಸಿಫಿಕ್‌ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ಇನ್ನು ಕಾಂಗ್ರೆಸ್‌ ಸಮಯ ಬಂದಾಗ ಸೆಕ್ಯುಲರ್​​ನತ್ತ ವಾಲುತ್ತದೆ. ಧರ್ಮ ಅಂತ ಬಂದಾಗ ನೋ ಸೆಕ್ಯುಲರ್ ಅನ್ನುತ್ತೆ. 1983ರಲ್ಲಿ ಜನತಾ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ಇದು ಕಾಂಗ್ರೆಸೇತರ ಮೊದಲ ಸರ್ಕಾರ. 18 ಜನ ಬಿಜೆಪಿ, 8 ಕಮ್ಯುನಿಸ್ಟ್, 5 ಪಕ್ಷೇತರು ಸೇರಿ ಮೊದಲ ಬಾರಿಗೆ ಕಾಂಗ್ರೆಸೇತರ ಸರ್ಕಾರ ರಚನೆ ಮಾಡಲಾಯ್ತು. ಆ ಸರ್ಕಾರದಲ್ಲಿ ಸಿದ್ದರಾಮಯ್ಯ ಕಾವಲು ಸಮಿತಿ ಅಧ್ಯಕ್ಷ ಆಗಿದ್ದರು.

ಇದು ಸುಭದ್ರ ಸರ್ಕಾರ ಅಲ್ಲ ಅನ್ನೋದು ಎರಡು ತಿಂಗಳಲ್ಲಿ ಗೊತ್ತಾಗಿದೆ

ಸಿಂಗಾಪುರದಲ್ಲಿ ಆಪರೇಷನ್​ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಶಾಸಕ ಜಿಟಿ ದೇವೇಗೌಡ ಮಾತನಾಡಿ ನಾವು ಇರೋದು ಕೇವಲ 19 ಶಾಸಕರು, ಸರ್ಕಾರ ಬೀಳಿಸೋಕೆ ಆಗುತ್ತಾ? ಕಾಂಗ್ರೆಸ್ ಸರ್ಕಾರ ಬೀಳುವುದು ನಮ್ಮ ಕೈಯಲ್ಲಿ ಇಲ್ಲ. ಜೆಡಿಎಸ್ ಮತ್ತೆ ಸಂಘಟನೆ ಮಾಡಿ ಅಧಿಕಾರಕ್ಕೆ ಬಂದೇ ಬರುತ್ತೆ. ಉತ್ತರ ಕರ್ನಾಟಕದಲ್ಲಿ ಜನರು ದೇವೇಗೌಡರನ್ನ ನೆನೆಯುತ್ತಾರೆ. ಸುಭದ್ರ ಸರ್ಕಾರ ಅಲ್ಲ ಅನ್ನೋದು ಎರಡು ತಿಂಗಳಲ್ಲಿ ಗೊತ್ತಾಗಿದೆ. ಕಾಂಗ್ರೆಸ್​ನಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಹೇಳಿದರು.

ಕರ್ನಾಟಕ ಒಂದೇ ಭಾರತ ದೇಶ ಅಲ್ಲ. ಕರ್ನಾಟಕ ರಾಜ್ಯ ಚುನಾವಣೆ, ಲೋಕಸಭೆ ಚುನಾವಣೆಯಲ್ಲಿ ಪ್ರಭಾವ ಬೀರಲ್ಲ. ಕಾಂಗ್ರೆಸ್​​ ಪಕ್ಷಕ್ಕೆ ಲೋಕಸಭೆಯಲ್ಲಿ ಇರುವುದು ಕೇವಲ 50 ಸ್ಥಾನ. ಕಾಂಗ್ರೆಸ್​​​ 50 ಸ್ಥಾನದಿಂದ 500 ಸ್ಥಾನಕ್ಕೆ ಬರುವುದಕ್ಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಜೆಡಿಎಸ್ ಎಲ್ಲಿದೆ ಮುಳುಗಿದೆ. ಎಂಎಲ್ಎ ಅಲ್ಲಿ ಎಲ್ಲಿದ್ದಾರೆ ಅಂತ ಮಾತನಾಡುತ್ತಾರೆ. ಜೆಡಿಎಸ್ ಬಗ್ಗೆ ಟೀಕೆ ಮಾಡ್ತೀರಾ ಜೆಡಿಎಸ್ ಎರಡು ಸ್ಥಾನ ಇದ್ದಾಗಲೂ ಗಟ್ಟಿ, ಈಗಲೂ ಜೆಡಿಎಸ್ ಪಕ್ಷ ಗಟ್ಟಿಯಾಗಿದೆ. ಹರಿಪ್ರಸಾದ್ ಹೇಳಿದರು ಯಾರನ್ನ ಬೇಕಾದರು ಸಿಎಂ ಮಾಡುತ್ತೇನೆ. ಯಾರನ್ನು ಬೇಕಾದರೂ ಇಳಿಸುತ್ತೇನೆ ಅಂತ. ನಾವು ಹೇಳಿದ್ವ ಅದನ್ನ. ಈಗ ನೀವು ಬೀಳಿಸುವ ತಂತ್ರ ಆಗುತ್ತಿದೆ ಅಂತ ಹೇಳುತ್ತಿದ್ದೀರಿ ಎಂದರು.

ಐದು ಯೋಜನೆಗಳನ್ನು ಎಲ್ಲಿಂದ ಹಣ‌ ತರುತ್ತೀರಿ. ರೈತರಿಗೆ ಕೃಷಿಗೆ ಅನುಕೂಲಕ್ಕೆ ಹಣ ಎಲ್ಲಿ ಇಟ್ಟಿದ್ದೀರಾ? ಆರ್ಥಿಕ ತಜ್ಞರು ಹೇಳುತ್ತಿದ್ದಾರೆ ಹಣ ಹೊಂದಿಸಲು ಕಷ್ಟ ಅಂತ. ಅಲ್ಪಸಂಖ್ಯಾತರಿಂದ ನೀವು ಅಧಿಕಾರಕ್ಕೆ ಬಂದಿದ್ದೀರಾ. ಅವರಿಗೆ ನೀವು ಅನುಕೂಲ ಮಾಡಿದ್ದೀರಾ. 4% ಮೀಸಲಾತಿ ವಾಪಸ್ ನೀಡಿದ್ರಾ ಎಂದು ಪ್ರಶ್ನಿಸಿದರು.

ಇನ್ನು ಕಾಂಗ್ರೆಸ್‌ ಸಮಯ ಬಂದಾಗ ಸೆಕ್ಯುಲರ್​​ನತ್ತ ವಾಲುತ್ತದೆ. ಧರ್ಮ ಅಂತ ಬಂದಾಗ ನೋ ಸೆಕ್ಯುಲರ್ ಅನ್ನುತ್ತೆ. 1983ರಲ್ಲಿ ಜನತಾ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ಇದು ಕಾಂಗ್ರೆಸೇತರ ಮೊದಲ ಸರ್ಕಾರ. 18 ಜನ ಬಿಜೆಪಿ, 8 ಕಮ್ಯುನಿಸ್ಟ್, 5 ಪಕ್ಷೇತರು ಸೇರಿ ಮೊದಲ ಬಾರಿಗೆ ಕಾಂಗ್ರೆಸೇತರ ಸರ್ಕಾರ ರಚನೆ ಮಾಡಲಾಯ್ತು. ಆ ಸರ್ಕಾರದಲ್ಲಿ ಸಿದ್ದರಾಮಯ್ಯ ಕಾವಲು ಸಮಿತಿ ಅಧ್ಯಕ್ಷ ಆಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist