ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧಗಧಗನೆ ಹೊತ್ತಿ ಉರಿದು ಬೆಂಕಿಗೆ ಆವುತಿಯಾದ ಬಸ್ !

Twitter
Facebook
LinkedIn
WhatsApp
45

ಶಿವಮೊಗ್ಗ, (ಜುಲೈ 17): ಇನ್ನು ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದು ಬೆಂಕಿಗೆ ಆಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಬಳಿ ನಡೆದಿದೆ.

ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ 3 ದಿನಗಳಿಂದ ಬಸ್​ ನಿಂತಲ್ಲೇ ನಿಂತುಕೊಂಡಿತ್ತು. ಆದ್ರೆ, ಇಂದು (ಜುಲೈ 17) ಬೆಳಗ್ಗೆ ಏಕಾಏಕಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಗಜಾನನ ಕಂಪನಿಗೆ ಸೇರಿದ ಬಸ್​ ಸುಟ್ಟು ಭಸ್ಮವಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ಆನಂದಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ‌ ಸಚಿವೆ ಮೋಟಮ್ಮ ಮನೆ ಮುಂದೆ ಹೊತ್ತಿ ಉರಿದ ಬುಲೆಟ್

ಮಾಜಿ‌ ಸಚಿವೆ ಮೋಟಮ್ಮ ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್​ ಬೈಕ್​ನಲ್ಲಿ ಕಾಣಿಸಿಕೊಂಡ ಸಂಪೂರ್ಣವಾಗಿ ಸುಟ್ಟ ಭಸ್ಮವಾಗಿದೆ.

ಚಿಕ್ಕಮಗಳೂರು, (ಜುಲೈ  17): ಮಾಜಿ‌ ಸಚಿವೆ ಮೋಟಮ್ಮ ನಿವಾಸದ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್​ ಧಗ-ಧಗ ಹೊತ್ತಿ ಉರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿರುವ ಮಾಜಿ ಸಚಿವೆ ಮೋಟಮ್ಮ ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್​ನಲ್ಲಿ ಇಂದು(ಜುಲೈ 17) ಬೆಂಕಿ ಕಾಣಿಸಿಕೊಂಡಿದ್ದು, ಬೈಕ್​ನ ಕೆಲ ಭಾಗಗಳು​ ಸುಟ್ಟು ಭಸ್ಮವಾಗಿವೆ. 

ಮೋಟಮ್ಮ ಕಾರು ಚಾಲಕ ರಾಜೇಶ್​ಗೆ ಸೇರಿದ ಬುಲೆಟ್ ಬೈಕ್​ನ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿರುವವ ಸಾಧ್ಯತೆಗಳಿವೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ