ಬೆಂಗಳೂರು: ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್ ಕುಮಾರ್ ನೇಮಕ
Twitter
Facebook
LinkedIn
WhatsApp
ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಹಂಗಾಮಿ ಸಿಜೆಯಾಗಿ ನೇಮಕಗೊಂಡಿದ್ದರು.
ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಯಾಗಲಿದೆ.
ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು.