ಇಸ್ರೇಲ್ ನಲ್ಲಿ ವಾಸವಾಗಿರುವ ದಕ್ಷಿಣ ಕನ್ನಡದ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ!
ಪುತ್ತೂರು/ಮಂಗಳೂರು: ಇಸ್ರೇಲ್-ಪ್ಯಾಲೆಸ್ಟೀನ್ ಹಮಾಸ್ ಯುದ್ಧ ನಡೆಯುತ್ತಿರುವ ಈ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತೀಯ ಪ್ರಜೆಗಳಿದ್ದಲ್ಲಿ
ಅವರ ಬಗ್ಗೆ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077/ 0824-2442590 ಗೆ ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?
ಟೆಲ್ ಅವಿವ್: ಇಸ್ರೇಲ್-ಪ್ಯಾಲೆಸ್ತೀನ್ (Israel-Palestine) ನಡುವಿನ ಯುದ್ಧದಲ್ಲಿ 60 ಕ್ಕೂ ಹೆಚ್ಚು ಪ್ರಜೆಗಳು ಸಾವನ್ನಪ್ಪಿದ್ದಾರೆ. ಯಾವ ದೇಶದ ಎಷ್ಟು ಮಂದಿ ಮೃತಪಟ್ಟಿದ್ದಾರೆ ಮತ್ತು ಕಾಣೆಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಯುದ್ಧದಲ್ಲಿ ಈವರೆಗೆ ಅಮೇರಿಕಾದ 9 ಮಂದಿ ಸಾವಿಗೀಡಾಗಿದ್ದಾರೆ. ಕೆನಡಾ – 1 (ಇಬ್ಬರು ಕಾಣೆ), ಗ್ರೇಟ್ ಬ್ರಿಟನ್ – 10 ಕ್ಕೂ ಹೆಚ್ಚು ಮಂದಿ ಸಾವು ಅಥವಾ ಕಾಣೆಯಾಗಿದ್ದಾರೆ. ಫ್ರಾನ್ಸ್ – 1 ಸಾವು (ಹಲವಾರು ಕಾಣೆ), ಥೈಲ್ಯಾಂಡ್ – 12 ಸಾವು (11 ಕಾಣೆ), ನೇಪಾಳ – 10 ಸಾವನ್ನಪ್ಪಿದ್ದಾರೆ.
ಜರ್ಮನಿ – ದೃಢೀಕರಿಸದ/ಕಾಣೆಯಾದ ಸಾವಿನ ಸಂಖ್ಯೆ, ರಷ್ಯಾ – 1, ಕಾಂಬೋಡಿಯಾ – 1, ಚೀನಾ – ಸಾವು/ಹಾನಿಗಳ ಸಂಖ್ಯೆಯನ್ನು ದೃಢೀಕರಿಸಲಾಗಿಲ್ಲ. ಬ್ರೆಜಿಲ್ – 3 ಮಂದಿ ಗಾಯಗೊಂಡಿದ್ದಾರೆ. ಪರಾಗ್ವೆ – 2 ಸಾವು ಅಥವಾ ಕಾಣೆ, ಉಕ್ರೇನ್ – ಇಬ್ಬರು ಮೃತಪಟ್ಟಿದ್ದಾರೆ.
ಮೆಕ್ಸಿಕೋದ ಇಬ್ಬರು ಕೈದಿಗಳು, ಐರ್ಲೆಂಡ್‌ನ ಒಬ್ಬರು ಗಾಯಗೊಂಡಿದ್ದಾರೆ. ತಾಂಜಾನಿಯಾದ ಇಬ್ಬರು ಗಾಯಗೊಂಡಿದ್ದಾರೆ.
ಅಕ್ಟೋಬರ್ 7 ರಂದು ಹಮಾಸ್ (Hamas) ಬಂಡುಕೋರರು ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿ 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.