ಬೆಂಗಳೂರಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ಆದೇಶ..!!
ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ (Tushar Giri Nath) ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.
24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು, RO, ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಮತದಾನ ನಡೆದರೆ, ಮೂರನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.