ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ಆದೇಶ..!!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ಆದೇಶ

ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ (Tushar Giri Nath) ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ.

24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್​ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು,  RO, ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಮತದಾನ ನಡೆದರೆ, ಮೂರನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ