ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವಕಪ್ ನ ಇನ್ನೆರಡು ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಆಡುವುದು ಡೌಟ್..!

Twitter
Facebook
LinkedIn
WhatsApp
ವಿಶ್ವಕಪ್ ನ ಇನ್ನೆರಡು ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಆಡುವುದು ಡೌಟ್..!

ನವದೆಹಲಿ: ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ವಾರ ತಮ್ಮ ಪಾದಕ್ಕೆ ಗಾಯ ಮಾಡಿಕೊಂಡಿದ್ದು, ಇನ್ನೂ ಕೆಲವು ಪಂದ್ಯಗಳಿಗೆ ಅವರು ಲಭ್ಯವಾಗುವುದಿಲ್ಲ ಎನ್ನಲಾಗುತ್ತಿದೆ.

ಗಾಯದಿಂದಾಗಿ ಈಗಾಗಲೇ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವ ಹಾರ್ದಿಕ್, ಇನ್ನೂ ಚೇತರಿಸಿಕೊಳ್ಳದ ಕಾರಣ ಭಾರತದ ಮುಂದಿನ ಎರಡು ವಿಶ್ವಕಪ್ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಅ.19 ರಂದು ಪುಣೆಯಲ್ಲಿ ಬಾಂಗ್ಲಾ ವಿರುದ್ಧ ಆಡುವಾಗ ಪಾಂಡ್ಯ ಜಾರಿ ಬಿದ್ದು ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಮಂಡಿ ಉಳುಕಿತ್ತು. ಇದರಿಂದಾಗಿಯೇ ಅ.22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಹೊರಗುಳಿದರು. ಗಾಯದ ನಿರ್ವಹಣೆಗಾಗಿ ಕಳೆದ ಸೋಮವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ವರದಿ ಮಾಡಿದ್ದರು.

ಇಂಗ್ಲೆಂಡ್ ವಿರುದ್ಧದ ಭಾರತದ ಮುಂದಿನ ಪಂದ್ಯಕ್ಕಾಗಿ ಹಾರ್ದಿಕ್ ಲಕ್ನೋಗೆ ಪ್ರಯಾಣಿಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಹಿಂದೆ ಹೇಳಿತ್ತು. ಆದರೆ ಹಾರ್ದಿಕ್ ಎಡ ಪಾದದ ಊತವು ಗಣನೀಯವಾಗಿ ಕಡಿಮೆಯಾಗಿದೆಯಾದರೂ ಇನ್ನೂ ಚಿಕಿತ್ಸೆ ಮುಂದುವರಿಸಿರುವುದರಿಂದ ಅವರು ಈ ವಾರಾಂತ್ಯದಲ್ಲಿ ಬೌಲಿಂಗ್ ಶುರು ಮಾಡಬಹುದು. ಇದೀಗ ಅವರಿಗೆ ಚೇತರಿಕೆಗೆ ಸಮಯ ನೀಡುವುದು ಮುಖ್ಯವಾಗಿದೆ ಎಂದು ಎನ್​ ಸಿಎ ಮೂಲಗಳು ತಿಳಿಸಿವೆ.

ಭಾರತವು ಇದುವರೆಗಿನ ಎಲ್ಲಾ ಐದು ಪಂದ್ಯಗಳನ್ನು ಗೆದ್ದಿರುವುದರಿಂದ ಸೆಮಿಫೈನಲ್‌ಗೆ ಹೋಗಲು ಸುಸ್ಥಿತಿಯಲ್ಲಿರುವುದರಿಂದ ಮುಂದಿನ ಎರಡು ಪಂದ್ಯಗಳಲ್ಲಿ ಪಾಂಡ್ಯಗೆ ವಿಶ್ರಾಂತಿ ನೀಡಬಹುದು, ಅದು ನಾಕ್-ಔಟ್‌ಗೆ ಮೊದಲು ಅವರು ಸಂಪೂರ್ಣ ಚೇತರಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಆಫ್ಘನ್ ಯಶಸ್ಸಿಗೆ ಟೀಮ್ ಇಂಡಿಯಾ ಮಾಜಿ ಆಟಗಾರ ಕಾರಣ ಎಂದ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್

ಚೆನ್ನೈ: ಅ್ಘಾನಿಸ್ತಾನ ತಂಡ 10 ದಿನದ ಅಂತರದಲ್ಲಿ ಟೂರ್ನಿಯ ಹಾಲಿ ಚಾಂಪಿಯನ್ ಇಂಗ್ಲೆಂಡ್, ಮಾಜಿ ಚಾಂಪಿಯನ್ ಪಾಕಿಸ್ತಾನ ತಂಡಗಳಿಗೆ ಆಘಾತ ನೀಡಿದೆ. ಈ ಗೆಲುವಿನ ಹಿಂದೆ ಭಾರತದ ಮಾಜಿ ಆಟಗಾರ ಅಜಯ್ ಜಡೇಜಾ ಅವರ ಪಾತ್ರ ಪ್ರಮುಖವಾಗಿದ್ದು, ಇದನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಕೂಡ ಗುರುತಿಸಿದ್ದಾರೆ. ‘ವಿಶ್ವಕಪ್‌ನಲ್ಲಿ ಅ್ಘಾನಿಸ್ತಾನ ಪ್ರದರ್ಶನ ಯಾವುದಕ್ಕೂ ಕಡಿಮೆಯಿಲ್ಲ. ಬ್ಯಾಟಿಂಗ್ ವಿಭಾಗದ ಶಿಸ್ತು, ಮನೋಧರ್ಮ ಹಾಗೂ ವಿಕೆಟ್ ನಡುವಿನ ಓಟದ ಪರಿಶ್ರಮಗಳೆಲ್ಲವೂ ಅಜಯ್ ಜಡೇಜಾ ಅವರ ಪ್ರಭಾವದಿಂದ ಆಗಿರಬಹುದು’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಟೂರ್ನಿಯ ಆರಂಭಕ್ಕೂ ಮುನ್ನ ಅಜಯ್ ಜಡೇಜಾ ಆ್ಘನ್ ತಂಡದ ಮೆಂಟರ್ ಆಗಿ ನೇಮಕಗೊಂಡಿದ್ದರು. 1996ರ ವಿಶ್ವಕಪ್ ಕಾರ್ಟರ್‌ೈನಲ್‌ನಲ್ಲಿಯೂ ಅಜಯ್ ಜಡೇಜಾ ಪಾಕ್ ತಂಡವನ್ನು ಕಾಡಿದ್ದರು. ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅಜಯ್ ಜಡೇಜಾ 25 ಎಸೆತಗಳಲ್ಲಿ 45 ರನ್ ಬಾರಿಸಿ ಸವಾಲಿನ ಮೊತ್ತ ಪೇರಿಸಲು ನೆರವಾಗಿದ್ದರು. ಬಳಿಕ ಬೌಲಿಂಗ್‌ನಲ್ಲಿಯೂ 5 ಓವರ್ ಎಸೆದು 19 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. 1999ರ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಗೆದ್ದ ಪಂದ್ಯದಲ್ಲೂ ಅಜಯ್ ಭಾರತ ತಂಡದಲ್ಲಿದ್ದರು. ಹೀಗಾಗಿ ‘ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಅಜಯ್ ಜಡೇಜಾ ಅಜೇಯರಾಗಿ ಮುಂದುವರಿದಿದ್ದಾರೆ’ ಎಂದು ಕ್ರಿಕೆಟ್ ಪ್ರೇಮಿಗಳು ಬಣ್ಣಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ