ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಾ. ಸಿ.ಎನ್‌ ಮಂಜುನಾಥ್‌ ರಾಜಕೀಯ ಪ್ರವೇಶದ ಬಗ್ಗೆ ಅಪ್ಡೇಟ್ ಕೊಟ್ಟ ದೇವೇಗೌಡರು..!

Twitter
Facebook
LinkedIn
WhatsApp
ಡಾ. ಸಿ.ಎನ್‌ ಮಂಜುನಾಥ್‌ ರಾಜಕೀಯ ಪ್ರವೇಶದ ಬಗ್ಗೆ ಅಪ್ಡೇಟ್ ಕೊಟ್ಟ ದೇವೇಗೌಡರು..!

ಬೆಂಗಳೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಚಿಕಿತ್ಸಾ ಸಂಸ್ಥೆಯನ್ನು (Jayadeva Hospital) ಖಾಸಗಿ ಆಸ್ಪತ್ರೆಗಿಂತಲೂ ಅದ್ಭುತವಾಗಿ ಕಟ್ಟಿ ಬೆಳೆಸಿದ, ಅದರ ನಿರ್ದೇಶಕರಾಗಿ ನಿವೃತ್ತರಾದ ಡಾ. ಸಿ.ಎನ್‌. ಮಂಜುನಾಥ್‌ (Dr CN Manjunath) ಅವರು ರಾಜಕೀಯ ಪ್ರವೇಶ ಮಾಡುವುದಿಲ್ಲ, ಅವರು ಲೋಕಸಭಾ ಚುನಾವಣೆಯಲ್ಲಿ (Parliament Election 2024) ಸ್ಪರ್ಧೆ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Devegowda).

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಂಜುನಾಥ್‌ ಅವರು ಬಿಜೆಪಿ -ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿಗೆ ತೆರೆ ಎಳೆದರು.

ಜಯದೇವ ಸಂಸ್ಥೆಯಿಂದ ನಿವೃತ್ತರಾದ ಬಳಿಕ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಅವರ ಸೇವೆಯನ್ನು ರಾಷ್ಟ್ರ ಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ ಬಿಜೆಪಿ ಕೂಡಾ ಅವರ ಸ್ಪರ್ಧೆಗೆ ಒತ್ತು ನೀಡಲಿದೆ. ಸ್ವತಃ ಅಮಿತ್‌ ಶಾ ಮತ್ತು ಮೋದಿ ಅವರೇ ಈ ವಿಚಾರದಲ್ಲಿ ಉತ್ಸುಕರಾಗಿದ್ದಾರೆ. ಅವರು ಮುಂದೆ ದೇಶದ ಆರೋಗ್ಯ ಸಚಿವರಾಗಲೂಬಹುದು ಎಂಬವರೆಗೆ ಮಾತುಗಳು ಹರಿದಾಡಿದ್ದವು

ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬಹುದು, ಇದು ಸುಮಲತಾ ಅವರನ್ನು ಸಮಾಧಾನ ಮಾಡಲು ಒಂದು ಸಕಾರಣವೂ ಆದೀತು. ಆವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಕಾಂಗ್ರೆಸ್‌ನ ಹಾಲಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಪ್ರಬಲ ಪ್ರತಿಸ್ಪರ್ಧಿ ಆದಾರು ಎಂಬ ಚರ್ಚೆಯೂ ನಡೆದಿತ್ತು.

ಇದೆಲ್ಲದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಎಲ್ಲ ಕಡೆಯಿಂದ ಚರ್ಚೆ ನಡೆಯುತ್ತಿದೆ. ಆದರೆ, ನಾನು ಈ ಬಗ್ಗೆ ತೀರ್ಮಾನ ಮಾಡಿಲ್ಲ ಎಂದಿದ್ದರು. ಇದೀಗ ಮಾಜಿ ಪ್ರಧಾನಿ ದೇವೇಗೌಡರು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಹಾಗಿದ್ದರೆ ದೇವೇಗೌಡರು ಹೇಳಿದ್ದೇನು?

  • ಮಂಜುನಾಥ್‌ ಅವರು ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿದವರು. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಅಂತವರು ಬರೋದು ಸರಿಯಲ್ಲ.
  • ಅವರಿಗೆ ಒಂದು ಒಳ್ಳೆಯ ಸ್ಥಾನವಿದೆ. ಮುಗಿಲೆತ್ತರದ ಹೆಸರಿದೆ. ಇಂತಹ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಅಂತ ನಾವು ಒತ್ತಾಯಿಸುವುದಿಲ್ಲ.
  • ಡಾ. ಸಿ.ಎನ್‌ ಮಂಜುನಾಥ್‌ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ನಾವು ಮಾಡಲ್ಲ. ಹಾಗಾಗಿ ಸ್ಪರ್ಧೆ ಮಾಡಲ್ಲ.

ಎಚ್‌.ಡಿ ಕುಮಾರಸ್ವಾಮಿ ಸ್ವರ್ಧೆ ಮಾಡ್ತಾರಾ?

ಬಿಜೆಪಿ ಮತ್ತು ಜೆಡಿಎಸ್‌ ನಡುವಿನ ಸೀಟು ಹಂಚಿಕೆ ಮ್ತು ಮಾಜಿ ಪ್ರಧಾನಿ ಎಚ್‌.ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕೇಳಿದಾಗ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಯಾವ್ಯಾವ ಕ್ಷೇತ್ರ ಅನ್ನೋದನ್ನು ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ತೀರ್ಮಾನ ಮಾಡ್ತಾರೆ. ಕುಮಾರಸ್ವಾಮಿ ಸ್ಪರ್ದೆ ವಿಚಾರವನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂತು ಚರ್ಚೆ ಮಾಡ್ತಾರೆ ಎಂದರು.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಮತ್ತು ಗೃಹ ಸಚಿವರಿಬ್ಬರ ಹೇಳಿಕೆಯನ್ನೂ ಗಮನಿಸಿದ್ದೇನೆ. ಈ ವಿಚಾರದಲ್ಲಿ ಸರ್ಕಾರ ಹಿಂದೆ ಬಿದ್ದಿಲ್ಲ ಎಂದು ಅಭಿಪ್ರಾಯಪಟ್ಟರು. ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದರು ದೇವೇಗೌಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist