ಡಾ.ಮಲ್ಲಿಕಾ ಘಂಟಿ ವಿರುದ್ಧ ಎಫ್‌ಐಆರ್ ದಾಖಲು, ಏನಿದು ಪ್ರಕರಣ?
ವಿಜಯನಗರ: ಅಧಿಕಾರ ದುರುಪಯೋಗ ಮಾಡಿಕೊಂಡು, ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಹಂಪಿ ಕನ್ನಡ ವಿಶ್ವವಿದ್ಯಾಲಯದ (Hampi Kannada University) ವಿಶ್ರಾಂತ ಕುಲಪತಿ ಡಾ. ಮಲ್ಲಿಕಾಘಂಟಿ (Dr. Mallika Ghanti) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ.
ಅವರ ಅಧಿಕಾರದ ಅವದಿಯಲ್ಲಿ 2015-2016 ಮತ್ತು 2016-2017ರ ಸಾಲಿನಲ್ಲಿ ಕೆಲ ಕಾಮಗಾರಿಗಳು ಮಾಡಿದ್ದಾರೆ. 13.56 ಲಕ್ಷ ರೂ. ಆರ್ಥಿಕ ನಷ್ಟ ವಿವಿಗೆ ಮಾಡಲಾಗಿದೆ ಎಂದು ದೂರು ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
4 ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕಲಾನಿರ್ದೇಶಕ ದೇಸಾಯಿ ನೇಣಿಗೆ ಶರಣು
ಕಲಾನಿರ್ದೇಶನಕ್ಕಾಗಿ (Art Director) ಬರೋಬ್ಬರಿ ನಾಲ್ಕು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಬಾಲಿವುಡ್ ನ ಖ್ಯಾತ ಆರ್ಟ್ ಡೈರೆಕ್ಟರ್ ನಿತಿನ್ ದೇಸಾಯಿ (Nitin Desai) ನೇಣಿಗೆ ಶರಣಾಗಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲವಾದರೂ ಆರ್ಥಿಕ ಸಂಕಷ್ಟವೇ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.
ಬಾಲಿವುಡ್ (Bollywood)ನಲ್ಲಿ ಕಲಾ ನಿರ್ದೇಶಕರಾಗಿ, ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಹೀಗೆ ವಿವಿಧ ವಿಭಾಗಗಳಲ್ಲಿ ದೇಸಾಯಿ ಕೆಲಸ ಮಾಡಿದ್ದರು. ಅಲ್ಲದೇ, ಹಿಂದಿ ಮತ್ತು ಮರಾಠಿ ಕಿರುತೆರೆಯಲ್ಲೂ ಸಾಕಷ್ಟು ಕೆಲಸ ಮಾಡಿದ್ದರು. ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಖ್ಯಾತ ನಿರ್ದೇಶಕರ ಸಿನಿಮಾಗಳಿಗೆ ಸೆಟ್ ಹಾಕಿದ್ದ ಹೆಗ್ಗಳಿಕೆ ಇವರದ್ದು.
ಆಗಸ್ಟ್ 9ಕ್ಕೆ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಿ ಇಂಥದ್ದೊಂದು ತಪ್ಪು ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎನ್ನುತ್ತಾರೆ ದೇಸಾಯಿ ಆಪ್ತರು. ಕಲಾ ನಿರ್ದೇಶನಕ್ಕಾಗಿಯೇ ಅವರು 4 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಇದೀಗ ಮುಂಬೈನ ಕರ್ಜತ್ ಎನ್.ಡಿ ಸ್ಟುಡಿಯೋದಲ್ಲಿ ನೇಣಿಗೆ (Suicide) ಶರಣಾಗಿದ್ದಾರೆ.
ಜೋದಾ ಅಕ್ಬರ್, ಲಗಾನ್, ಹಮ್ ದಿಲ್ ದೆ ಜುಕೆ ಸನಂ ಹೀಗೆ ಸಾಕಷ್ಟು ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದ ನಿತಿನ್, ಬೃಹತ್ ಸೆಟ್ ಗಳಲ್ಲಿ ನಿರ್ಮಾಣ ಮಾಡುವಲ್ಲಿ ದೇಸಾಯಿ ಪಳಗಿದ್ದರು. ಅನೇಕರು ನಿತಿನ್ ಸಾವಿಗೆ ಕಂಬನಿ ಮಿಡಿದಿದ್ದಾರೆ.