ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಟಕದ ವೇದಿಕೆಯಲ್ಲೇ ಹೃದಯಾಘಾತ, ಪೋಸ್ಟ್‌ಮ್ಯಾನ್ ಸಾವು

Twitter
Facebook
LinkedIn
WhatsApp
ನಾಟಕದ ವೇದಿಕೆಯಲ್ಲೇ ಹೃದಯಾಘಾತ, ಪೋಸ್ಟ್‌ಮ್ಯಾನ್ ಸಾವು

ವಿಜಯಪುರ, ಸೆಪ್ಟೆಂಬರ್‌ 15: ನಾಟಕ ಮಾಡುತ್ತಿರುವಾಗಲೇ ಪಾತ್ರಧಾರಿ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.

ಶರಣು ಬಾಗಲಕೋಟೆ (24) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಶರಣು ಬಾಗಲಕೋಟೆಗೆ ಹೃದಯಾಘಾತವಾಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಶರಣು ಬಾಗಲಕೋಟೆ ವೃತ್ತಿಯಲ್ಲಿ ಪೋಸ್ಟ್‌ಮ್ಯಾನ್ ಆಗಿದ್ದು, ಇತ್ತೀಚೆಗೆ ವೃತ್ತಿಗೆ ನೇಮಕಗೊಂಡಿದ್ದರು. ಗ್ರಾಮ ದೇವರ ಜಾತ್ರೆ ಹಿನ್ನೆಲೆಯಲ್ಲಿ ಕೋಟ್ಯಾಳದಲ್ಲಿ ನಾಟಕ ಹಮ್ಮಿಕೊಳ್ಳಲಾಗಿತ್ತು. ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕ ಪ್ರದರ್ಶನ ವೇಳೆ ಶರಣು ಬಾಗಲಕೋಟೆ ತಾನು ನೃತ್ಯ ಮಾಡುವುದಾಗಿ ವೇದಿಕೆ ಏರಿದ್ದರು. ಈ ವೇಳೆ ಶರಣು ಬಾಗಲಕೋಟೆ ಏಕಾಏಕಿ ಕುಸಿದು ಬಿದ್ದಿದ್ದು, ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 9ಕ್ಕೂ ಹೆಚ್ಚು ಜನರಿಗೆ ಗಾಯ

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಸ್ ಬಿದ್ದು 9ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಶಿವಪುರದ ಬಳಿ ನಡೆದಿದೆ.

ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ನ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಬಸ್‌ನಲ್ಲಿ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಯಾಣ ಮಾಡುತ್ತಿದ್ದು ಅದರಲ್ಲಿ 9 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೋಕಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ