ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್, ಹಲವರಿಗೆ ಗಂಭೀರ ಗಾಯ
Twitter
Facebook
LinkedIn
WhatsApp

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ.
ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕೆರೆಗೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌ನ ಚಕ್ರಗಳು ರಾಷ್ಟ್ರೀಯ ಹೆದ್ದಾರಿ-15ರ ಸಮೀಪ ಕೆರೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್ ಮಂಗಲ್ದೋಯಿಯಿಂದ ಗುವಾಹಟಿಗೆ ತೆರಳುತ್ತಿತ್ತು. ಸ್ಥಳೀಯರು ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಗಾಯಾಳುಗಳ ಪೈಕಿ ನಾಲ್ವರನ್ನು ಉತ್ತಮ ಚಿಕಿತ್ಸೆಗಾಗಿ ಮಂಗಲ್ಡೊಯ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದರ್ರಾಂಗ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪ್ರಕಾಶ್ ಸೋನೊವಾಲ್ ಸುದ್ದಿ ಸಂಸ್ಥೆ ANI ಗೆ ಮಾಹಿತಿ ನೀಡಿದ್ದಾರೆ.