ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಇಎ ಪರೀಕ್ಷೆ ವೇಳೆ ಬ್ಲೂಟೂತ್‌ ಬಳಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರು ಅರೆಸ್ಟ್‌!

Twitter
Facebook
LinkedIn
WhatsApp
ಕೆಇಎ ಪರೀಕ್ಷೆ ವೇಳೆ ಬ್ಲೂಟೂತ್‌ ಬಳಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರು ಅರೆಸ್ಟ್‌!

ಯಾದಗಿರಿ: ಅ. 28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ (Examination on October 28, 29) ಕೆಇಎ ಪರೀಕ್ಷೆಯನ್ನು ನಡೆಸುತ್ತಿದೆ. ರಾಜ್ಯಾದ್ಯಂತ ಮೊದಲ ದಿನ 350 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿಯ (Yadagiri News) ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಬಳಕೆ ಮಾಡಿ ನಕಲು ಮಾಡುತ್ತಿದ್ದ ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯಾದಗಿರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದವನು ನಕಲಿ ಅಭ್ಯರ್ಥಿ ಎಂದು ದೃಢವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ ಸೇರಿದಂತೆ 17 ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 7,884 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ದರೂ ಬ್ಲೂಟೂತ್‌ ಬಳಕೆಯಾಗಿದೆ.

ಪುಟ್ಟಪ್ಪ ಎಂಬಾತನನ್ನು ಸೇರಿದಂತೆ ಮೂವರನ್ನ ವಶಕ್ಕೆ ಪಡೆಯಲಾಗಿದೆ. ಪುಟ್ಟಪ್ಪ ಮೂಲತಃ ಪಿಎಸ್ಐ ಹಗರಣ ಕಿಂಗ್ ಪಿನ್ ಆಗಿರುವ ಆರ್‌.ಡಿ ಪಾಟೀಲ್ ಗ್ರಾಮದವನು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನು. ಸದ್ಯ ಪರೀಕ್ಷಾ ಕೇಂದ್ರದ ಹೊರಗಿದ್ದು ಮಾಹಿತಿ ನೀಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಜೊಂಡಿದ್ದಾರೆ. ಎಲ್ಲರೂ ಕಲಬುರಗಿ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಗೆ 6-8 ಮಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಪರೀಕ್ಷಾ ಅಕ್ರಮ ಸಂಬಂಧ ಡಿಸಿ ಡಾ.ಸುಶೀಲಾ ಬಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ಅವರು, ಖಾಲಿ ಹುದ್ದೆ ಭರ್ತಿಗಾಗಿ ಇಂದು ಮತ್ತು ನಾಳೆ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿರುವ ಬಗ್ಗೆ ಎಸ್‌ಪಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆ ಹಾಕಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಆರೋಪಿ ಅಫಜಲಪುರ ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇವರೆಗೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆಯನ್ನು ಮಾಡಲಾಗುತ್ತಿದೆ. ವಿಚಾರಣೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ