ಬೆಂಗಳೂರು ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಬೆಳ್ಳಂಬೆಳಗ್ಗೆ NIA ದಾಳಿ; ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ದಾಳಿ!
Twitter
Facebook
LinkedIn
WhatsApp
ನವದೆಹಲಿ/ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ.
ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ದಾಳಿ:
ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ ಇಂದು ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಿದೆ.