ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಳ್ವಾಸ್‌ ಎಂಜಿನಿಯರಿಂಗ್‌, ತಂತ್ರಜ್ಞಾನ ಸಂಸ್ಥೆ (AIET)ಗೆ ’ಎ+’ ಮಾನ್ಯತೆ

Twitter
Facebook
LinkedIn
WhatsApp
DJI 0135

ಮೂಡುಬಿದಿರೆ (ಜ.21) : ಮೂಡುಬಿದಿರೆಯ ಆಳ್ವಾಸ್‌ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಸಂಸ್ಥೆಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್‌ ಮೊದಲ ಸುತ್ತಿನಲ್ಲೇ ಸಿಜಿಪಿಎ 3.32 ನೊಂದಿಗೆ ’ಎ+’ ಮಾನ್ಯತೆ ನೀಡಿದೆ. ಮುಂದಿನ ಐದು ವರ್ಷಗಳ ಅವಧಿಯ ಈ ಮಾನ್ಯತೆಯನ್ನು ಜ. 17ರಂದು ಘೋಷಿಸಿದೆ.

ನ್ಯಾಕ್‌ ತಂಡದ ಭೇಟಿ, ಪರೀಶಿಲನೆ: ಆಂಧ್ರ ಪ್ರದೇಶದ ಪೂರ್ವ ಗೋದಾವರಿಯ ಆದಿಕವಿ ನನ್ನಯಾ ವಿವಿಯ ಸಿಎಸ್‌ಇ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ನ ಕುಲಪತಿ ಡಾ. ಸುರೇಶ್‌ ವರ್ಮಾ ನ್ಯಾಕ್‌ ತಂಡದ ನೇತೃತ್ವ ವಹಿಸಿದ್ದರು. ಪಾಂಡಿಚೇರಿ ವಿವಿಯ ಸ್ಕೂಲ್‌ ಆಫ್‌ ಮ್ಯಾನೇಜ್ಮೆಂಟ್‌ನ ಪ್ರಾಧ್ಯಾಪಕಿ ಡಾ. ಮಾಲಬಿಕ ಡಿಯೋ ಹಾಗೂ ಅಮರಾವತಿಯ ಶ್ರೀ ಶಿವಾಜಿ ಎಜುಕೇಶನ್‌ ಸೊಸೈಟಿಯ ಕಾರ‍್ಯದರ್ಶಿ ಡಾ. ವಿಜಯ್‌ ಠಾಕ್ರೆ ತಂಡದ ಸದಸ್ಯರಾಗಿದ್ದರು. ಈ ಮೂವರ ನ್ಯಾಕ್‌ ತಂಡವು 2023ರ ಜ. 13 ಮತ್ತು 14ರಂದು ಸಂಸ್ಥೆಗೆ ಎರಡು ದಿನಗಳ ಭೇಟಿ ನೀಡಿ ಶೈಕ್ಷಣಿಕ ಸಿದ್ಧತೆ ಹಾಗೂ ಪೂರಕ ವ್ಯವಸ್ಥೆಗಳನ್ನು ಕೂಲಂಕಷವಾಗಿ ಮೌಲ್ಯಮಾಪನ ನಡೆಸಿತ್ತು.

ನ್ಯಾಕ್‌ನ ಗುಣಾತ್ಮಕ ಮಾಪನದ ಪ್ರಮುಖ ಏಳು ಆಯಾಮಗಳ ಆಧಾರದಲ್ಲಿ ತಂಡವು ಸಂಸ್ಥೆಯಲ್ಲಿ ಸೂಕ್ಷ್ಮ ಪರಿಶೀಲನೆ ಹಾಗೂ ಮಾಪನ ನಡೆಸಿತು. ಈ ಆಯಾಮಗಳಾದ ಸಂಸ್ಥೆಯಲ್ಲಿನ ಪಠ್ಯಕ್ರಮದ ಅಂಶಗಳು, ಬೋಧನೆ- ಕಲಿಕೆ ಹಾಗೂ ಮೌಲ್ಯಮಾಪನೆ, ಸಂಶೋಧನೆ, ಆವಿಷ್ಕಾರ ಮತ್ತು ವಿಸ್ತರಣಾ ಕಾರ್ಯಕ್ರಮಗಳು, ಮೂಲಸೌಕರ್ಯ ಹಾಗೂ ಕಲಿಕಾ ಸಂಪನ್ಮೂಲಗಳು, ವಿದ್ಯಾರ್ಥಿ ಪ್ರೋತ್ಸಾಹ ಹಾಗೂ ಪ್ರಗತಿ, ಆಡಳಿತ, ನಾಯಕತ್ವ ಮತ್ತು ನಿರ್ವಹಣೆ ಮತ್ತು ಸಾಂಸ್ಥಿಕ ಮೌಲ್ಯಗಳು ಹಾಗೂ ಉನ್ನತ ಅಭ್ಯಾಸಗಳ ಆಧಾರದಲ್ಲಿ ತಂಡವು ಜ. 14ರಂದು ನಡೆದ ನಿರ್ಗಮನ ಸಭೆಯಲ್ಲಿ ಪ್ರಶಂಸೆ ವ್ಯಕ್ತಪಡಿಸಿತ್ತು.

ಪ್ರತಿಷ್ಠಿತ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ದೂರದೃಷ್ಟಿತ್ವದ ನಾಯಕತ್ವ ಹಾಗೂ ವ್ಯವಸ್ಥಾಪಕ ಟ್ರಸ್ಟಿಎಂ. ವಿವೇಕ ಆಳ್ವ ಅವರ ದಿಟ್ಟಮುಂದಾಳತ್ವದಲ್ಲಿ ಸಂಸ್ಥೆಯು ಐಐಎಸ್‌ಸಿ ಇಸ್ರೊ, ಎನ್‌ಆರ್‌ಎಸ್‌ಸಿ, ಕುಮಮೊಟೊ ವಿಶ್ವವಿದ್ಯಾಲಯ- ಜಪಾನ್‌, ಎಸ್‌ಕೆಎಫ್‌, ಟಿಸಿಎಸ್‌-ಐಯಾನ್‌, ಟೊಯೊಟೊ- ಕಿರ್ಲೊಸ್ಕರ್‌ ಮತ್ತಿತರ ಕೈಗಾರಿಕೆ ಹಾಗೂ ಸಂಸ್ಥೆಗಳ ಜೊತೆ ಶೈಕ್ಷಣಿಕ ಸಹಯೋಗ ಹಾಗೂ ಒಪ್ಪಂದಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳನ್ನು ಸಮಕಾಲೀನ ತಂತ್ರಜ್ಞಾನ ಆಧಾರಿತ ಜಗತ್ತಿನ ಸವಾಲಿಗೆ ಸಿದ್ಧಗೊಳಿಸಿದೆ. ಪ್ರತಿಷ್ಠಿತ ಸಂಸ್ಥೆ- ಕೈಗಾರಿಕೆಗಳ ಜೊತೆ ಸಕ್ರಿಯ ಸಹಭಾಗಿತ್ವಗಳು ಹಾಗೂ ಗುಣಮಟ್ಟದ ಶಿಕ್ಷಣದ ಉನ್ನತ ಧೋರಣೆಯ ಕಾರಣ ನ್ಯಾಕ್‌ ಎ+ ಶ್ರೇಣಿ ಮಾನ್ಯತೆಯನ್ನು ಸಿಜಿಪಿಎ 3.32ರ ಜೊತೆ ನೀಡಿದೆ.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್‌ ಫೆರ್ನಾಂಡಿಸ್‌, ಐಕ್ಯೂಎಸಿ ಹಾಗೂ ನ್ಯಾಕ್‌ ಸಂಚಾಲಕ ಡಾ. ದತ್ತಾತ್ರೇಯ ನೇತ್ರತ್ವದ ಅಧ್ಯಾಪಕರ ತಂಡವು ನ್ಯಾಕ್‌ ಸಮಿತಿಯ ಮುಂದೆ ಅಗತ್ಯ ದಾಖಲೆಗಳನ್ನು ಪ್ರಸ್ತುತ ಪಡಿಸಿದ್ದರು.

ಸರ್ಕಾರದ ಸಂಸ್ಥೆಯಾದ ನ್ಯಾಕ್‌ ನೀಡಿದ ಎ+ ಮಾನ್ಯತೆಯು ಸಂಸ್ಥೆಯ ಉನ್ನತ ಮಟ್ಟದ ಗುಣಾತ್ಮಕ ಶಿಕ್ಷಣವನ್ನು ದೇಶದ ನಕಾಶೆಯಲ್ಲಿ ಗುರುತಿಸುವಂತೆ ಮಾಡಿದೆ. ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮಗ್ರ ಪ್ರಯತ್ನದ ಫಲವಾಗಿ ಮುಂದಿನ ದಿನಗಳಲ್ಲಿ ‘ಸ್ವಾಯತ್ತ’ ದತ್ತ ದೃಢ ಹೆಜ್ಜೆ ಇಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ