ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು 4 ರಾಜ್ಯಗಳ ಚುನಾವಣಾ ಫಲಿತಾಂಶ ; ಪ್ರಬಲ ಪೈಪೋಟಿಯಲ್ಲಿ ಯಾವ ಪಕ್ಷಕ್ಕೆ ಅಧಿಕಾರ?

Twitter
Facebook
LinkedIn
WhatsApp

5 ರಾಜ್ಯಗಳಲ್ಲಿ ಈಗಾಗಲೇ ಮತ ಚಲಾವಣೆ, ಸಂಪೂರ್ಣಗೊಂಡಿದ್ದು ಇಂದು ನಾಲ್ಕು ರಾಜ್ಯಗಳಲ್ಲಿನ ಫಲಿತಾಂಶ ಹೊರಬೀಳಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ(Assembly Election)ಯ ಮತ ಎಣಿಕೆ(Vote Counting) ಆರಂಭವಾಗಲಿದೆ. ಸ್ವಲ್ಪ ಸಮಯದ ನಂತರ, ಯಾರು ಹಿನ್ನೆಡೆ, ಯಾರು ಮುನ್ನೆಡೆ ಎನ್ನುವ ಮಾಹಿತಿ ಕೂಡ ಸಹ ಹೊರಹೊಮ್ಮಲು ಆರಂಭವಾಗಲಿದೆ. ಮತ ಎಣಿಕೆ ಹಂತ ಮುಂದುವರೆದಂತೆ ಫಲಿತಾಂಶವೂ ಸ್ಪಷ್ಟವಾಗಲಿದೆ. ಅದಕ್ಕೂ ಮೊದಲು ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಕ್ಷೇತ್ರಗಳಿವೆ. ಇಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಛತ್ತೀಸ್‌ಗಢದಲ್ಲಿ 90 ವಿಧಾನಸಭಾ ಸ್ಥಾನಗಳಿದ್ದು, ಇಲ್ಲಿ ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ರಾಜಸ್ಥಾನದಲ್ಲಿ 200 ವಿಧಾನಸಭಾ ಸ್ಥಾನಗಳಿವೆ.

 

ಯಾವುದೇ ಪಕ್ಷಕ್ಕೆ ಸರ್ಕಾರ ರಚಿಸಲು 101 ಸ್ಥಾನಗಳ ಅಗತ್ಯವಿದೆ. ತೆಲಂಗಾಣದಲ್ಲಿ 119 ವಿಧಾನಸಭಾ ಸ್ಥಾನಗಳಿವೆ. ಇಲ್ಲಿ ಬಹುಮತವು 110 ಆಗಿದೆ. ಮಿಜೋರಾಂನಲ್ಲಿ 40 ವಿಧಾನಸಭಾ ಸ್ಥಾನಗಳಿವೆ. ಇಲ್ಲಿ ಬಹುಮತದ ಸಂಖ್ಯೆ 21. ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ ಚುನಾವಣೆಯ ಫಲಿತಾಂಶ ಹೊರಬರಲಿದೆ. ಡಿಸೆಂಬರ್ 04 ರಂದು ಮಿಜೋರಾಂ ಚುನಾವಣಾ ಫಲಿತಾಂಶ ಹೊರಬರಲಿದೆ.

ಈ ರಾಜ್ಯಗಳಲ್ಲಿ ಅತಂತ್ರ ವಿಧಾನಸಭೆ ಭೀತಿ

ಇಲ್ಲಿಯವರೆಗೆ ಬಂದಿರುವ ಎಲ್ಲಾ ಎಕ್ಸಿಟ್ ಪೋಲ್ ಗಳನ್ನು ನೋಡಿದರೆ ತೆಲಂಗಾಣ ಮತ್ತು ಛತ್ತೀಸ್ ಗಢದಲ್ಲಿ ಮಾತ್ರ ನೇರವಾಗಿ ಸರ್ಕಾರ ರಚನೆಯಾಗುತ್ತಿದೆ. ಕುತೂಹಲಕಾರಿ ಸಂಗತಿಯೆಂದರೆ ಈ ಎರಡೂ ಸ್ಥಳಗಳಲ್ಲಿ ಕಾಂಗ್ರೆಸ್ ಪ್ರತಿ ಎಕ್ಸಿಟ್ ಪೋಲ್‌ನಲ್ಲಿ ಸ್ಪಷ್ಟ ಬಹುಮತವನ್ನು ಪಡೆಯುತ್ತಿದೆ. ಇವೆರಡನ್ನು ಹೊರತು ಪಡಿಸಿ ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ರಾಜ್ಯಗಳಲ್ಲಿ ನಡೆದಿರುವ ವಿಭಿನ್ನ ಎಕ್ಸಿಟ್ ಪೋಲ್‌ಗಳನ್ನು ಗಮನಿಸಿದರೆ ಹಂಗ್‌ ಅಸೆಂಬ್ಲಿಯಾಗುವ ಸಾಧ್ಯತೆ ಇದೆ. ಆದರೆ, ಮಧ್ಯಪ್ರದೇಶದಲ್ಲಿ ಹಂಗ್‌ ಅಸೆಂಬ್ಲಿಯಾಗುವ ಸಾಧ್ಯತೆ ತೀರಾ ಕಡಿಮೆ.

ಮಧ್ಯಪ್ರದೇಶ :  ಪ್ರಸ್ತುತ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವಿದೆ, ಆದರೆ ಜ್ಯೋತಿರಾದಿತ್ಯ ಬಂಡಾಯವೆದ್ದು ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಸೇರುವ ಮೊದಲು ಕಾಂಗ್ರೆಸ್ ಅಧಿಕಾರದಲ್ಲಿತ್ತು. 15 ವರ್ಷಗಳ ನಂತರ 2018ರ ಚುನಾವಣೆಯಲ್ಲಿ ಅವರು ಪುನರಾಗಮನ ಮಾಡಿದರು. ಈ ಬಾರಿಯೂ ಎರಡು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 8 ಏಜೆನ್ಸಿಗಳು ಮಧ್ಯಪ್ರದೇಶದ ಎಕ್ಸಿಟ್ ಪೋಲ್‌ಗಳನ್ನು ಬಿಡುಗಡೆ ಮಾಡಿವೆ. 4 ಎಕ್ಸಿಟ್ ಪೋಲ್‌ಗಳಲ್ಲಿ, ಭಾರತೀಯ ಜನತಾ ಪಕ್ಷವು ಸ್ಪಷ್ಟ ಬಹುಮತವನ್ನು ಪಡೆಯುವ ನಿರೀಕ್ಷೆಯಿದೆ, ಉಳಿದ 4 ಎಕ್ಸಿಟ್ ಪೋಲ್‌ಗಳಲ್ಲಿ ಕಾಂಗ್ರೆಸ್ ಬಹುಮತದ ಸಮೀಪದಲ್ಲಿದೆ. ಅಂತಹ ಪರಿಸ್ಥಿತಿಯಲ್ಲಿ, ಇಬ್ಬರ ನಡುವೆ ಇರುವ ರೀತಿಯ ಸಂಘರ್ಷವು ಅತಂತ್ರ ವಿಧಾನಸಭೆಗೆ ಕಾರಣವಾಗಬಹುದು ಎಂದು ಅನೇಕ ತಜ್ಞರು ನಂಬಿದ್ದಾರೆ.

ರಾಜಸ್ಥಾನ : ರಾಜಸ್ಥಾನದ ಎಕ್ಸಿಟ್ ಪೋಲ್‌ಗಳನ್ನು ನೋಡಿದರೆ ಇಲ್ಲೂ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ. ರಾಜಸ್ಥಾನಕ್ಕೆ ಇದುವರೆಗೆ ಒಟ್ಟು 10 ಎಕ್ಸಿಟ್ ಪೋಲ್‌ಗಳು ಹೊರಬಿದ್ದಿವೆ. ಈ ಪೈಕಿ 6ರಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮೂರು ಎಕ್ಸಿಟ್ ಪೋಲ್‌ಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಅದೇ ಸಮಯದಲ್ಲಿ, 1 ಎಕ್ಸಿಟ್ ಪೋಲ್ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ ಎಂದು ಹೇಳಲಾಗಿದೆ.

ಮಿಜೋರಾಂ:  ಐದು ರಾಜ್ಯಗಳ ಎಕ್ಸಿಟ್ ಪೋಲ್ ನಂತರ ಮಿಜೋರಾಂನಲ್ಲಿ ಹಂಗ್ ಅಸೆಂಬ್ಲಿ ಸಾಧ್ಯತೆ ಹೆಚ್ಚಿದೆ. ಇಲ್ಲಿರುವ ಐದು ಎಕ್ಸಿಟ್ ಪೋಲ್‌ಗಳಲ್ಲಿ, ಒಂದು ಬಹುಮತದೊಂದಿಗೆ ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ZPM) ಅನ್ನು ತೋರಿಸಿದೆ, ಆದರೆ ನಾಲ್ಕು ಎಕ್ಸಿಟ್ ಪೋಲ್‌ಗಳು ಹಂಗ್ ಅಸೆಂಬ್ಲಿಯನ್ನು ಭವಿಷ್ಯ ನುಡಿದಿವೆ. ಸಮೀಕ್ಷೆಯ ಪ್ರಕಾರ, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) 15, ZPM 16, ಕಾಂಗ್ರೆಸ್ 7 ಮತ್ತು ಬಿಜೆಪಿ 1 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist