Electoral Bond : ಚುನಾವಣಾ ಆಯೋಗಕ್ಕೆ ಬಾಂಡ್ಗಳ ವಿವರ ಸಲ್ಲಿಸಿದ ಎಸ್ಬಿಐ..!
ನವದೆಹಲಿ: ಸುಪ್ರೀಂ ಕೋರ್ಟ್ ನ ಖಡಕ್ ಆದೇಶದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಸಂಜೆ ಚುನಾವಣಾ ಬಾಂಡ್ ಗಳ (Electoral Bond) ಅಂಕಿ ಅಂಶಗಳು ಹಾಗೂ ಎಲ್ಲ ಮಾಹಿತಿಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಚುನಾವಣಾ ಆಯೋಗವು ಮಾಹಿತಿಗಳನ್ನು ಕ್ರೋಢೀಕರಿಸಿ ಬಿಡುಗಡೆ ಮಾಡಬೇಕಿದೆ. ಆದಾಗ್ಯೂ ಬ್ಯಾಂಕಿನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ನ್ಯಾಯಾಲಯದ ಆದೇಶದ ಪಾಲನೆಯನ್ನು ದೃಢೀಕರಿಸುವ ಅಫಿಡವಿಟ್ ಸಲ್ಲಿಸಿಲ್ಲ.
SBI Complies with SC Order on #ElectoralBonds
— Meera Hussain (@Meerahussen) March 12, 2024
The State Bank of India (SBI) has finally complied with the Supreme Court's order regarding electoral bonds. Following the SC's directive, SBI submitted the required data to the Election Commission of India. pic.twitter.com/Wy5iO6EZYn
ಈ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಲು ಮಾರ್ಚ್ 6ರ ಗಡುವನ್ನು ವಿಸ್ತರಿಸುವಂತೆ ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ನ್ಯಾಯಾಂಗ ನಿಂದನೆ ವಿಚಾರಣೆಯ ಎಚ್ಚರಿಕೆಯನ್ನೂ ಕೊಟ್ಟಿತ್ತು.