ಇಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಇಟ್ಟ ವೇಳೆ ಶಾಕ್ ಸರ್ಕ್ಯೂಟ್; 2 ಬೈಕ್ ಸೇರಿದಂತೆ ಒಂದು ಕಾರು ಸುಟ್ಟು ಭಸ್ಮ.!
ಮೈಸೂರು: ಎಲೆಕ್ಟ್ರಿಕ್ ಸ್ಕೂಟರ್ ಒಂದನ್ನು ಚಾರ್ಜ್ ಇಟ್ಟ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಸೇರಿದಂತೆ ಒಂದು ಕಾರು ಸುಟ್ಟು ಕರಕಲಾದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.
ಕುಂಬಾರಕೊಪ್ಪಲಿನ ಗುಂಡಪ್ಪ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿ ಚಾರ್ಜ್ ಮಾಡಲಾಗುತ್ತಿತ್ತು ಈ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ಅಲ್ಲೇ ಇದ್ದ ಇನ್ನೊಂದು ಸ್ಕೂಟರ್ ಗೆ ಬೆಂಕಿ ಆವರಿಸಿದೆ ಇದೆ ವೇಳೆ ಸ್ಕೂಟರ್ ಪಕ್ಕದಲ್ಲೇ ನಿಲ್ಲಿಸಿದ್ದ ಕಾರಿಗೂ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ ಅಲ್ಲದೆ ಮನೆಗೂ ಹಾನಿಯಾಗಿದೆ.
ಬೆಂಕಿ ಹೊತ್ತಿಕೊಂಡ ವಿಚಾರ ಗೊತ್ತಾಗುವ ವೇಳೆ ಮೂರೂ ವಾಹನಗಳು ಸಂಪೂರ್ಣ ಸುಟ್ಟು ಕಾರಕಲಾಗಿತ್ತು ಅಲ್ಲದೆ ಮನೆಯ ಕಿಟಕಿ ಬಾಗಿಲುಗಳಿಗೆ ಹಾನಿಯಾಗಿದೆ. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
ಬೆಂಗಳೂರು, ಮಾ.22: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ. ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ (BBMP) ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.
ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ನರಳಾಡಿದ್ದ ಚಂದನ್ನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್ಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೆ. ಈ ನಡುವೆ ಆಶೋಕನಗರ ಪೊಲೀಸರಿಗೆ ಚಂದನ್ ದೂರು ನೀಡಿದ್ದಾರೆ.
ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರೂ ಅದನ್ನು ತೆರವು ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಪ್ರಕರಣ ದಾಖಲುಸಿಕೊಂಡ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.