ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ಕಡಬದ ಲೈನ್ ಮ್ಯಾನ್ ಗಂಭೀರ
Twitter
Facebook
LinkedIn
WhatsApp
ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ.
ಗಾಯಗೊಂಡ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ.
ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿ