ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್‌ ಪತನ : ಬಿಪಿಎನ್‌ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ .

Twitter
Facebook
LinkedIn
WhatsApp
ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್‌ ಪತನ : ಬಿಪಿಎನ್‌ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ .

ಚೆನ್ನೈ : ಭಾರತೀಯ ಸೇನೆಯ ಮುಖ್ಯಸ್ಥರಾಗಿರುವ ಬಿಪಿನ್‌ ರಾವತ್‌ ( CDS Gen Bipin Rawat ) ಸೇರಿದಂತೆ ನಾಲ್ವರು ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್‌ ತಮಿಳುನಾಡಿನ ಕುನೂರಿನಲ್ಲಿ (Army chopper crashes) ಪತನವಾಗಿದೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಹುಟುಕಾಟ ನಡೆಸಲಾಗುತ್ತಿದೆ.

ತಮಿಳುನಾಡು ರಾಜ್ಯದ ಕುನೂರಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಗೆಗೆ ಸಿಲುಕಿರುವ ಸೇನಾ ಹೆಲಿಕಾಪ್ಟ್‌ರ್‌ ಹೊತ್ತಿ ಉರಿಯುತ್ತಿದೆ. ಘಟನೆಯಲ್ಲಿ ಮೂವರು ಅಧಿಕಾರಿ ಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್‌ ಕಟೋಂನ್ಮೆಂಟ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ಓರ್ವ ಅಧಿಕಾರಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ಹೊತ್ತಿ ಉರಿಯುತ್ತಿರುವ ಹೆಲಿಕಾಫ್ಟ್‌ನ ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸವನ್ನು ಪಡುತ್ತಿದ್ದಾರೆ. ಪತನಕ್ಕೆ ಒಳಗಾಗಿರುವ ಹೆಲಿಕಾಫ್ಟರ್‌ನಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್‌ ರಾವತ್‌ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ.

ಹೆಲಿಕಾಫ್ಟರ್‌ನಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಹೆಲಿಕಾಪ್ಟರ್‌ನಲ್ಲಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಲಿಕಾಪ್ಟರ್‌ನಲ್ಲಿ 14 ಮಂದಿ ಸದಸ್ಯರು ಪ್ರಯಾಣಿಸುತ್ತಿದ್ದರು. ಸದ್ಯದ ಮಾಹಿತಿಯ ಪ್ರಕಾರ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ದಟ್ಟ ಮಂಜು ಅಥವಾ ತಾಂತ್ರಿಕ ದೋಷದಿಂದ ಹೆಲಿಕಾಫ್ಟರ್‌ ಪತನವಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತು ಪ್ರಾಥಮಿಕ ತನಿಖೆಯನ್ನು ನಡೆಸಲಾಗುತ್ತಿದೆ. ತಮಿಳುನಾಡಿನ ಕೂನೂರಿನ ವೆಲ್ಲಿಂಗ್ಟನ್‌ ಆರ್ಮಿ ಸೆಂಟರ್‌ನಿಂದ ಹೆಲಿಕಾಪ್ಟರ್‌ ಹೊರಟಿತ್ತು. ಜಿಲ್ಲಾಡಳಿತ ಹಾಗೂ ಭಾರತೀಯ ಸೇನೆ ಘಟನೆಯ ಕುರಿತು ಯಾವುದೇ ಮಾಹಿತಿಯನ್ನೂ ನೀಡಿಲ್ಲ.

ಇನ್ನು ಸೇನಾ ಹೆಲಿಕಾಫ್ಟರ್‌ನಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್‌ ರಾವತ್‌ ಅವರು ಪ್ರಯಾಣಿಸುತ್ತಿದ್ದರು ಅನ್ನೋ ಕುರಿತು ಭಾರತೀಯ ವಾಯು ಸೇನೆ ಟ್ವೀಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿದೆ. ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್‌ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು