ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರುಗಳು!!

Twitter
Facebook
LinkedIn
WhatsApp
ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರುಗಳು!!

ಬೆಂಗಳೂರು : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಏರ್‌ ಪೋರ್ಟ್‌ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಕೊಲ್ಕತ್ತಾ ಮೂಲದ ಪೂರ್ಣಿಮಾ ರವೀಂದ್ರ ( 57 ವರ್ಷ ), ಲಕ್ಷ್ಮೀರವೀಂದ್ರ (38 ವರ್ಷ ) ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಕೊಲ್ಕತ್ತಾ ಮೂಲದ ಇಬ್ಬರು ಮಹಿಳೆಯರು ಏರ್‌ಪೋರ್ಟ್‌ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆಯಲ್ಲಿ ಎದುರಿನಿಂದ ಬರುತ್ತಿದ್ದ ಬೆಟ್ಟ ಹಲಸೂರು ಕ್ರಾಸ್‌ ಬಳಿಯಲ್ಲಿ ಎಕ್ಸ್‌ಯೂವಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ನಂತರ ಕಾರು ಡಿವೈಡರ್‌ ದಾಟಿಕೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿಯಾಗಿದೆ. ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದ ಭರತ್‌ ಹಾಗೂ ವಿಕಾಸ್‌ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆಯನ್ನು ನಡೆಸಲಾಗುತ್ತಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಾಲಕನಿಗೆ ಡಿವೈಡರ್‌ ಗೋಚರಿಸದೇ ಈ ಘಟನೆ ನಡೆದಿದೆ. ಇನ್ನು ಕಾರು ಚಾಲಕ ಭರತ್‌ ಹಾಗೂ ವಿಕಾಸ್‌ ಮದ್ಯಪಾನ ಮಾಡಿದ್ದರು, ಕುಡಿದ ಮತ್ತಲ್ಲಿ ಕಾರು ಚಲಾಯಿಸಿದ್ದೇ ಘಟನೆ ಕಾರಣವೆನ್ನಲಾಗುತ್ತಿದೆ.

ಸ್ಥಳಕ್ಕೆ ಭೇಟಿ ನೀಡಿದ್ದ ಚಿಕ್ಕಜಾಲ ಠಾಣೆಯ ಪೊಲೀಸರು ಕಾರಿನಲ್ಲಿದ್ದ ಮೂವರ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತ ದೇಹಗಳನ್ನು ಕಾರಿನಲ್ಲಿಯೇ ಇಟ್ಟು ಟೋಯಿಂಗ್‌ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು