ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಮಗು ಅದಲು ಬದಲು ಪ್ರಕರಣ - ಡಿಎನ್ಎ ವರದಿ ಬರುವ ಮೊದಲೇ ಹಸುಳೆ ಸಾವು

Twitter
Facebook
LinkedIn
WhatsApp
ಮಂಗಳೂರಿ ನ ಮಗು ಅದಲು ಬದಲು ಪ್ರಕರಣ – ಡಿಎನ್ಎ ವರದಿ ಬರುವ ಮೊದಲೇ ಹಸುಳೆ ಸಾವು

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ನಡೆದ ಮಗು ಅದಲು ಬದಲು ಪ್ರಕರಣದಲ್ಲಿ ಸುದ್ದಿಯಾಗಿದ್ದ ಮಗುವೊಂದು ಡಿಎನ್ಎ ಪರೀಕ್ಷೆಯ ವರದಿ ಬರುವ ಮೊದಲೇ ನ.೧೫ ರ ಸೋಮವಾರ ಮೃತಪಟ್ಟಿದೆ.

ಲೇಡಿಗೋಶನ್ ಆಸ್ಪತ್ರೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಕಳೆದ ಅ.15ರಂದು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು ಹೆಣ್ಣು ಮಗು ಎಂದು ಹೇಳಿದ್ದರು.ಮಗುವಿಗೆ ಉಸಿರಾಟ ತೊಂದರೆ ಕಾರಣ ಐಸಿಯುನಲ್ಲಿಡಲಾಗಿತ್ತು. ಬಳಿಕ ಪೋಷಕರ ಕೈಗೆ ಮಗುವನ್ನು ನೀಡಲಾಗಿದೆ. ಈ ವೇಳೆ ಪರಿಶೀಲಿಸಿದಾಗ ಗಂಡು ಮಗುವನ್ನು ನೀಡಲಾಗಿತ್ತು. ಮಗು ಬದಲಾದ ಬಗ್ಗೆ ವೈದ್ಯರ ಗಮನಕ್ಕೆ ತಂದಾಗ, ಗಂಡು ಮಗುವೇ ಜನಿಸಿದೆ. ದಾಖಲೆಯಲ್ಲಿ ಹೆಣ್ಣು ಎಂದು ತಪ್ಪಾಗಿ ನಮೂದಿಸಲಾಗಿದೆ ಎಂದು ತಿಳಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪೋಷಕರು ಹೆಣ್ಣು ಮಗುವನ್ನೇ ನೀಡಲು ಆಗ್ರಹಿಸಿದ್ದರು. ಅಲ್ಲದೇ, ಈ ಬಗ್ಗೆ ಮಂಗಳೂರಿನ ಬಂದರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮಗುವಿನ ಪೋಷಕರ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಮಗುವಿನ ಡಿಎನ್‌ಎ ಮಾದರಿಯನ್ನು ಪರೀಕ್ಷೆಗಾಗಿ ಹೈದರಾಬಾದ್​ಗೆ ಕಳುಹಿಸಿಕೊಡಲಾಗಿತ್ತು. ಆದರೆ, ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದೆ.
“ಮಗು ಪ್ರೀ ಮೆಚ್ಯೂರ್ಡ್ ಆಗಿ ಜನಿಸಿದ್ದು ಆರಂಭದಿಂದಲೇ ಉಸಿರಾಟದ ಸಮಸ್ಯೆ, ಕಡಿಮೆ ತೂಕ ಸೇರಿದಂತೆ ವಿವಿಧ ಗಂಭೀರ ಸಮಸ್ಯೆಗಳಿದ್ದವು. ಎಲ್ಲ ಅಗತ್ಯ ಚಿಕಿತ್ಸೆ ನೀಡಿಯೂ ಮಗು ಮಗು ಚಿಕಿತ್ಸೆ ಫಲಕಾರಿಯಗದೇ ಮೃತಪಟ್ಟಿದೆ ಎಂದು ಮಗುವಿನ ಆರೋಗ್ಯ ಸ್ಥಿತಿ ಬಗ್ಗೆ ಹೆತ್ತವರಿಗೆ ಹಲವು ಬಾರಿ ಮಾಹಿತಿ ನೀಡುತ್ತಾ ಬಂದಿದ್ದೆವು” ಎಂದುಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಆಧೀಕ್ಷಕ ಡಾ. ದುರ್ಗಾಪ್ರಸಾದ್ ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಮಗುವಿನ ಪೋಷಕರು, ” ಆಸ್ಪತ್ರೆಯವರು ಮಗುವಿನ ಆರೋಗ್ಯದ ಸಮಸ್ಯೆ ಬಗ್ಗೆ ಆರಂಭದಲ್ಲಿ ಹೇಳಿರಲಿಲ್ಲ, ಹೆಣ್ಣು ಮಗುವಿನ ಬದಲು ಗಂಡು ಮಗುವನ್ನು ನೀಡಿದ್ದರು. ಈಗ ಗಂಡು ಮಗುವನ್ನು ಕಳೆದುಕೊಂಡಿದ್ದೇವೆ ನಮಗೆ ನ್ಯಾಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು