ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ಪರಾರಿಯಾದ ವಧು.

Twitter
Facebook
LinkedIn
WhatsApp
ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ಪರಾರಿಯಾದ ವಧು.

ತ್ರಿಶೂರ್: ಮದುವೆಯಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗರ್ಲ್​ಫ್ರೆಂಡ್ ಜೊತೆ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಕೇರಳದಲ್ಲಿ ನಡೆದಿದೆ.
ಕೇರಳದ ತ್ರಿಶೂರ್​ನ ಮಹಿಳೆಯೊಬ್ಬರು ತಾನು ಮದುವೆಯಾದ ಮರುದಿನವೇ ಗಂಡನ ಮನೆಯಿಂದ ನಾಪತ್ತೆಯಾಗಿದ್ದಾರೆ. ಹೆಂಡತಿ ಕಾಣದ ಕಾರಣ ಆಕೆಯ ಗಂಡನಿಗೆ ಹೃದಯಾಘಾತವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್​ನ ಪಝುವಿಲ್​ನ 23 ವರ್ಷದ ಮಹಿಳೆ ತನ್ನ ಗೆಳತಿಯೊಂದಿಗೆ ಪರಾರಿಯಾದಾಕೆ. ಪತ್ನಿ ಪರಾರಿಯಾಗಿರುವ ಬಗ್ಗೆ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಸತತ 6ದಿನ ತನಿಖೆ ಮಾಡಿದ ಪೊಲೀಸರಿಗೆ ಆಕೆ ತನ್ನ ಗೆಳತಿಯೊಂದಿಗೆ ಓಡಿಹೋಗಿರುವುದು ಖಾತ್ರಿಯಾಗಿದೆ.

ಸದ್ಯ ಆ ಮಹಿಳೆಯನ್ನು ಹುಡುಕಿ ಗಂಡನ ಮನೆಗೆ ಸೇರಿಸಲಾಗಿದೆ. ಆಕೆ ಮದುವೆಗೆ ಮೊದಲೇ ತನ್ನ ಗೆಳತಿಯೊಂದಿಗೆ ಓಡಿಹೋಗಲು ಯತ್ನಿಸಿದ್ದಳು. ಆದರೆ, ಮನೆಯಲ್ಲಿ ತನ್ನ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಓಡಿಹೋಗಲು ನಿರ್ಧರಿಸಿದ್ದ ಆಕೆ ಅದಕ್ಕಾಗಿಯೇ ಮದುವೆಯಾಗಿದ್ದಳು ಎನ್ನಲಾಗಿದೆ. ಆಕೆ ಮದುವೆಯಾದ ಮಾರನೇ ದಿನವೇ ನನ್ನ ಮೊಬೈಲ್ ತೆಗೆದುಕೊಂಡು ನನ್ನ ಗೆಳತಿಯನ್ನು ಭೇಟಿ ಮಾಡಿ ಬರುವುದಾಗಿ ಸುಳ್ಳು ಹೇಳಿ ಬ್ಯಾಂಕ್​ಗೆ ಹೋಗಿದ್ದಳು. ಆದರೆ, ಬೈಕ್​ನಲ್ಲಿ ಹೋದ ಆಕೆ ಮತ್ತೆ ವಾಪಸ್ ಬರಲೇ ಇಲ್ಲ ಎಂದು ಪತಿ ದೂರಿನಲ್ಲಿ ತಿಳಿಸಿದ್ದರು.
ತ್ರಿಶೂರ್​ನಿಂದ ತನ್ನ ಗೆಳತಿಯೊಂದಿಗೆ ಪರಾರಿಯಾಗುವುದಕ್ಕೆ ಆ ಮಹಿಳೆ ಚೆನ್ನೈಗೆ ರೈಲು ಟಿಕೆಟ್ ಬುಕ್ ಮಾಡಿದ್ದರು. ಆದರೆ, ಸಿಕ್ಕಿ ಬೀಳುತ್ತೇವೆಂಬ ಭಯದಿಂದ ಅವರಿಬ್ಬರೂ ಬಸ್ ಮೂಲಕ ಕೊಟ್ಟಾಯಂಗೆ ಹೋಗಿ ಅಲ್ಲಿಂದ ಚೆನ್ನೈಗೆ ರೈಲಿನಲ್ಲಿ ಹೋಗಿದ್ದರು. ಅಲ್ಲಿಂದ ಹೋಟೆಲ್​ನಲ್ಲಿ ರೂಮ್​ ಬುಕ್ ಮಾಡಿಕೊಂಡು ಇದ್ದರು. ಇನ್ನೊಂದು ವಿಚಿತ್ರವೆಂದರೆ ಇನ್ನೊಬ್ಬ ಮಹಿಳೆ ಕೂಡ ಕೆಲ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು. ಅವರನ್ನು ಮಧುರೈನಲ್ಲಿ ಪತ್ತೆಹಚ್ಚಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು