ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದ್ಯ ಸೇವನೆ ವಯಸ್ಸನ್ನು 25ರಿಂದ 21ಕ್ಕೆ ಇಳಿಸಲು ಆದೇಶ!

Twitter
Facebook
LinkedIn
WhatsApp
ಮಂಗಳೂರು: ಮೀನುಗಾರಿಕಾ ಬೋಟ್‌ನಲ್ಲಿ ಉಲ್ಟಾ ನೇತು ಹಾಕಿ‌ ಹಲ್ಲೆ

ಚಂಡಿಘಡ: ಹರಿಯಾಣ ಸರ್ಕಾರ ಮದ್ಯ ಸೇವನೆ ವಯಸ್ಸನ್ನು 25ರಿಂದ 21ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಅಬಕಾರಿ ಕಾಯ್ದೆ 2021 ತಿದ್ದುಪಡಿ ಮಸೂದೆಯನ್ನು ನಿನ್ನೆಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡ ಮದ್ಯ ಸೇವನೆ ವಯಸ್ಸಿನ ಮಿತಿಯನ್ನು ಕಡಿಮೆ ಮಾಡಿದ್ದು, ಹರಿಯಾಣ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವು ಕೂಡ ಈಗ ಮದ್ಯಸೇವನೆ ವಯಸ್ಸಿನ ಮಿತಿಯನ್ನು ಕಡಿಮೆ ಮಾಡುವ ಕಾಯ್ದೆಯನ್ನು ಜಾರಿಗೊಳಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡ ಮದ್ಯ ಸೇವನೆ ವಯಸ್ಸಿನ ಮಿತಿಯನ್ನು ಕಡಿಮೆ ಮಾಡಿದ್ದು, ಹರಿಯಾಣ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವು ಕೂಡ ಈಗ ಮದ್ಯಸೇವನೆ ವಯಸ್ಸಿನ ಮಿತಿಯನ್ನು ಕಡಿಮೆ ಮಾಡುವ ಕಾಯ್ದೆಯನ್ನು ಜಾರಿಗೊಳಿಸಿದೆ.
ಈ ಹಿಂದೆ ಹರಿಯಾಣದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿ ಮದ್ಯ ಖರೀದಿಸಲು ಅಥವಾ ಮಾರಾಟ ಮಾಡಲು ಅವಕಾಶವಿರಲಿಲ್ಲ. ಈ ಕಾಯ್ದೆ ತಿದ್ದುಪಡಿಯಿಂದಾಗಿ 21 ವರ್ಷ ಮೇಲ್ಪಟ್ಟವರು ಮದ್ಯ ಖರೀದಿಸಲು, ಮಾರಾಟ ಮಾಡಲು ಮತ್ತು ಸೇವನೆಗೆ ಅವಕಾಶ ಕಲ್ಪಿಸಿದಂತಾಗಿದೆ.
2021-22ನೇ ಸಾಲಿಗೆ ಅಬಕಾರಿ ನೀತಿ ರೂಪಿಸುವ ಸಮಯದಲ್ಲಿ ಕೆಲವು ರಾಜ್ಯಗಳು ಮದ್ಯ ಸೇವಿಸುವ ವಯಸ್ಸನ್ನು ಕಡಿಮೆ ಮಾಡಿರುವ ಕಾರಣದಿಂದ ವಯಸ್ಸಿನ ಮಿತಿಯನ್ನು 25ರಿಂದ 21 ವರ್ಷಕ್ಕೆ ಇಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹರಿಯಾಣ ಸರ್ಕಾರ ಹೇಳಿದೆ.

21ನೇ ವರ್ಷಕ್ಕೆ ವ್ಯಕ್ತಿ ಪ್ರಬುದ್ದವಾಗಿ ಯೋಚನೆ ಮಾಡುವ ಸಾಮಥ್ರ್ಯ ಹೊಂದಿರುತ್ತಾನೆ. ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳು ಬದಲಾಗಿವೆ ಎಂಬ ಅಭಿಪ್ರಾಯಕ್ಕೆ ಬಂದಿರುವ ಸರ್ಕಾರ ಈ ಕಾಯ್ದೆಯನ್ನು ಸಮರ್ಥಿಸಿಕೊಂಡಿದೆ.
ಹರಿಯಾಣ ಅಬಕಾರಿ ಕಾಯ್ದೆ 1914ರಲ್ಲಿ ಬರುವ 27, 29, 30 ಮತ್ತು 62ನೇ ಸೆಕ್ಷನ್‍ಗಳಿಗೆ ತಿದ್ದುಪಡಿ ಮಾಡಲಾಗಿದ್ದು, ಈ ಮೂಲಕ 21 ವರ್ಷಕ್ಕೆ ಕನಿಷ್ಠ ವಯೋಮಿತಿಯನ್ನು ಅಂಗೀಕಾರ ಮಾಡಲಾಗಿದೆ. ಇದಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳು ಮದ್ಯ ಸೇವನೆ ಮಾರಾಟ ಖರೀದಿಯಲ್ಲಿ ಪಾಲ್ಗೊಂಡರೆ ಜೈಲು ಅಥವಾ 50 ಸಾವಿರ ರೂ. ದಂಡ ವಿಸಬಹುದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು