ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಾರಿ ನಿರ್ದೇಶನಾಲಯದ ಪ್ರಭಾರ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

Twitter
Facebook
LinkedIn
WhatsApp
ಜಾರಿ ನಿರ್ದೇಶನಾಲಯದ ಪ್ರಭಾರ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ನವದೆಹಲಿ: ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗಿರುವ ರಾಹುಲ್ ನವೀನ್ ಅವರನ್ನು ಜಾರಿ ನಿರ್ದೇಶನಾಲಯದ ಹಂಗಾಮಿ ನಿರ್ದೇಶಕರಾಗಿ ಕೇಂದ್ರ ಸರಕಾರ ನೇಮಿಸಲಾಗಿದೆ.

ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳುತ್ತಿದ್ದು ಹಾಗಾಗಿ ಅವರ ಸ್ಥಾನಕ್ಕೆ ಪೂರ್ಣಪ್ರಮಾಣದ ಅಧಿಕಾರಿಗಳು ನೇಮಕಗೊಳ್ಳುವ ವರೆಗೆ ರಾಹುಲ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ಕೇಂದ್ರ ನೇಮಿಸಿದೆ.

1984 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಅವರ ಬದಲಿಗೆ 1993-ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ರಾಹುಲ್ ನವೀನ್ ಇಡಿ ಹಾಲಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ನೇಮಕಾತಿಯೊಂದಿಗೆ ರಾಹುಲ್ ನವೀನ್ ಅವರು ಕೇಂದ್ರ ತನಿಖಾ ಸಂಸ್ಥೆಯ ಅತ್ಯಂತ ಹಿರಿಯ ಅಧಿಕಾರಿಯಾಗಲಿದ್ದಾರೆ ಎನ್ನಲಾಗಿದೆ. ಅಲ್ಲದೆ ನವೀನ್ ಇಡಿ ಪ್ರಧಾನ ಕಚೇರಿಯ ಮುಖ್ಯ ವಿಜಿಲೆನ್ಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸುಳ್ಳು ಸುದ್ದಿ: ಆಜ್‌ತಕ್‌ ವಾಹಿನಿ ವಿರುದ್ಧ ಬಲವಂತದ ಕ್ರಮಕ್ಕೆ ಹೈಕೋರ್ಟ್‌ ‘ತಡೆ’

ಬೆಂಗಳೂರು(ಸೆ.16):  ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿ ಕೋಮು ಗಲಭೆ ನಡೆಸಲು ಪ್ರಚೋದನೆ ನೀಡಿದ ಆರೋಪ ಸಂಬಂಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಆಜ್‌ತಕ್‌ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕ ಸುಧೀರ್‌ ಚೌಧರಿ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ನಗರದ ಶೇಷಾದ್ರಿಪುರಂ ಠಾಣಾ ಪೊಲೀಸರಿಗೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಸುಧೀರ್‌ ಚೌಧರಿ ಮತ್ತು ಆಜ್‌ತಕ್‌ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್ ಈ ಆದೇಶ ಮಾಡಿದ್ದಾರೆ.

ಪ್ರಕರಣದ ತನಿಖೆಗೆ ತಡೆಯಾಜ್ಜೆ ನೀಡುವುದಿಲ್ಲ. ಸೆ.20ರಂದು ಅರ್ಜಿಯನ್ನು ಇತ್ಯರ್ಥಪಡಿಸಲಾಗುವುದು. ಅಲ್ಲಿಯವರೆಗೆ ಪೊಲೀಸರು ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ಎಲ್ಲಾ ವಿಚಾರ ಸಾರ್ವಜನಿಕ ಅಂಗಳದಲ್ಲಿರುವ ಕಾರಣ ಅರ್ಜಿದಾರರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.

ಕಾರ್ಯಕ್ರಮದ ವಿರುದ್ಧ ಕೇಸ್‌:

ಸೆ.11ರಂದು ಆಜ್ ತಕ್‌ನಲ್ಲಿ ಪ್ರಸಾರವಾದ ಸುದ್ದಿಯಲ್ಲಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಅವರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯ ಪ್ರಯೋಜನವನ್ನು ಕೇವಲ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಲ್ಲದ ಹಿಂದೂಗಳಿಗೆ ಈ ಯೋಜನೆ ನೀಡುತ್ತಿಲ್ಲ. ಆ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಅಲ್ಪಸಂಖ್ಯಾತರಲ್ಲದ ಬಡ ಹಿಂದೂಗಳಿಗೆ ಅನ್ಯಾಯವಾಗಿರುತ್ತದೆ ಎಂದು ಹೇಳಿದ್ದರು.

ಇದರ ವಿರುದ್ಧ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯಕ ಆಡಳಿತಾಧಿಕಾರಿ ಎಸ್.ಶಿವಕುಮಾರ್ , ಶೇಷಾದ್ರಿಪುರಂ ಠಾಣೆಯಲ್ಲಿ ದೂರು ನೀಡಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಜನರು ಬ್ಯಾಂಕ್ ಮೂಲಕ ಸಾಲ ಪಡೆದು ಟ್ಯಾಕ್ಸಿ/ಗೂಡ್ಸ್ ವಾಹನ/ ಆಟೊರಿಕ್ಷಾ ಖರೀದಿಸಲು ಬಯಸಿದ್ದಲ್ಲಿ ನಿಗಮವು ಸಾರಥಿ ಯೋಜನಯಡಿ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರು. ಸಹಾಯಧನ ನೀಡುತ್ತದೆ. ಈ ಯೋಜನೆಯು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇತರೆ ಜಾತಿಯ ನಿಗಮಗಳಲ್ಲಿ ಅನುಷ್ಠಾನದಲ್ಲಿದೆ. ಆದರೆ, ಚೌಧರಿ ಸುಳ್ಳು ಸುದ್ದಿ ಬಿತ್ತರಿಸಿದ್ದಾರೆ. ಆ ಮೂಲಕ ಹಿಂದೂ ಧರ್ಮ ಮತ್ತು ಇತರ ಧರ್ಮಗಳ ನಡುವೆ ದ್ವೇಷ ಹರಡುವ, ಅಶಾಂತಿಯ ವಾತಾವರಣ ಸೃಷ್ಟಿಸುವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಈ ದೂರು ಆಧರಿಸಿ ಸುಧೀರ್ ಚೌಧರಿ, ಆಜ್ ತಕ್ ಸುದ್ದಿ ವಾಹಿನಿ ಮತ್ತು ವಾಹಿನಿಯ ಸಂಘಟಕರ ವಿರುದ್ಧ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಮತ್ತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ