ಎಸೆಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು 11ಗಂಟೆಗೆ ಪ್ರಕಟ
Twitter
Facebook
LinkedIn
WhatsApp
ಬೆಂಗಳೂರು, ಜೂ 30: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂ. 30ರ ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು. ಅಷ್ಟೇ ವೇಗವಾಗಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿತ್ತು.ರಾಜ್ಯದಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ದಿನಾಂಕ ಮುಕ್ತಾಯದ ಹಂತಕ್ಕೆ ಬಂದಿದ್ದು, ವಿದ್ಯಾರ್ಥಿಗಳ ಅನುಕೂಲವಾಗು ದೃಷ್ಟಿಯಿಂದ ಫಲಿತಾಂಶ ಇಂದೇ ಪ್ರಕಟಿಸಲಿದೆ.