ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಡಿದೆದ್ದ ಈಶ್ವರಪ್ಪ, ಬಿಎಸ್​ ಯಡಿಯೂರಪ್ಪ ಪುತ್ರನ ವಿರುದ್ಧ ಬಂಡಾಯದ ಮುನ್ಸೂಚನೆ!

Twitter
Facebook
LinkedIn
WhatsApp
Pinterest
ಸಿಡಿದೆದ್ದ ಈಶ್ವರಪ್ಪ, ಬಿಎಸ್​ ಯಡಿಯೂರಪ್ಪ ಪುತ್ರನ ವಿರುದ್ಧ ಬಂಡಾಯದ ಮುನ್ಸೂಚನೆ!

ಲೋಕಸಭಾ ಚುನಾವಣೆಗೆ (Loksabha Elections 2024) ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಹೊಸ ಕಂಪನ ಶುರುವಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು ಒಂದು ಕಡೆಯಾದ್ರೆ ಮತ್ತೊಂದೆಡೆ ಟಿಕೆಟ್‌ಗಾಗಿ ಲಾಬಿ ನಡೆಸಿದವರು ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಮಾಜಿ ಸಚಿವ ಕೆ‌.ಎಸ್ ಈಶ್ವರಪ್ಪ(KS Eshwarappa) ಅವರು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಭಾರೀ ಕಸರತ್ತು ನಡೆಸಿದ್ದರು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಬೇಸರಗೊಂಡಿರುವ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ(BS Yediyurappa) ವಿರುದ್ಧ ಗುಡುಗಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕೆ.ಇ.ಕಾಂತೇಶ್​ಗೆ ಹಾವೇರಿ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಾವೇರಿ ಭಾಗದಲ್ಲಿ ಕಾಂತೇಶ್ ಓಡಾಡಿ ಜನರ ವಿಶ್ವಾಸ ಗಳಿಸಿದ್ದ. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್​ ಬೆನ್ನಿಗೆ ನಿಂತಿದ್ದರು. ಆದ್ರೆ, ಇಂದು ನನ್ನ ಮಗ ಕೆ.ಇ.ಕಾಂತೇಶ್​ಗೆ ಟಿಕೆಟ್ ಕೈತಪ್ಪಿದೆ. ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆಂದು ಬೇಸರವಿದೆ ಎಂದು ಅಸಮಾಧಾನ ಹೊರಕಿದರು.

ಬಿಎಸ್​​ವೈ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರೂ ಲಿಂಗಾಯತ ನಾಯಕರಿಲ್ವಾ? ಬಿ.ಎಸ್.ಯಡಿಯೂರಪ್ಪ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ನನ್ನ ಮಗ ಕಾಂತೇಶ್​ಗೆ ಯಾಕೆ ಬಿಎಸ್​ವೈ ಟಿಕೆಟ್ ಕೊಡಿಸಲಿಲ್ಲ. ಯಡಿಯೂರಪ್ಪ ನಮಗೆ ಅನ್ಯಾಯ ಮಾಡಿದರು. ನಾನು 40 ವರ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಸಿ.ಟಿ.ರವಿ, ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದರು. ಈ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ನನಗೆ ಆರೋಗ್ಯ ಸರಿಯಿಲ್ಲ, ಲೋಕಸಭೆಗೆ ಸ್ಪರ್ಧಿಸಲ್ಲ ಎಂದು ಬೊಮ್ಮಾಯಿ ಚುನಾವಣಾ ಸಮಿತಿ ಸಭೆಯಲ್ಲಿ ಹೇಳಿದ್ದರು. ನಾನು ಮಾಜಿ ಸಿಎಂ, ಶಾಸಕನಾಗಿದ್ದೇನೆ ಲೋಕಸಭೆಗೆ ಸ್ಪರ್ಧಿಸಲ್ಲ. ಕಾಂತೇಶ್​ಗೆ ಹಾವೇರಿ ಟಿಕೆಟ್ ನೀಡಿ ಎಂದು ಬೊಮ್ಮಾಯಿ ಹೇಳಿದ್ದರು. ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದರೂ ಸಹ ಟಿಕೆಟ್ ಕೊಡಿಸಿದ್ದಾರೆ. ಯಡಿಯೂರಪ್ಪ ಹಠಮಾಡಿ ಒತ್ತಾಯಪೂರ್ವಕವಾಗಿ ಬೊಮ್ಮಾಯಿಗೆ ಹಾವೇರಿ ಟಿಕೆಟ್ ಕೊಡಿಸಿದ್ದಾರೆ. ಯಡಿಯೂರಪ್ಪ ಪಕ್ಷದ ಕತ್ತು ಹಿಸುಕುತ್ತಿದ್ದಾರೆಂದು ಹೇಳುತ್ತಿದ್ದಾರೆ. ಯಡಿಯೂರಪ್ಪ ನಡೆ ಪಕ್ಷ ನಿಷ್ಠರಿಗೆ ಅನ್ಯಾಯವಾಗುತ್ತಿದೆ ಅಂತಿದ್ದಾರೆ ಎಂದು ಕಿಡಿಕಾರಿದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ನೀವು ಸ್ಪರ್ಧಿಸಿದರೆ ಗೆಲ್ಲಿಸಿಕೊಂಡು ಬರುತ್ತೇವೆಂದು ಹೇಳುತ್ತಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂದು ನಾನು ಬಯಸುತ್ತೇನೆ. ಪಕ್ಷೇತರವಾಗಿ ಗೆದ್ದು ಮೋದಿ ಬೆಂಬಲಿಸಿ ಎಂದು ಒತ್ತಾಯವಿದೆ. ಈ ಸಂಬಂಧ ಮಾರ್ಚ್ 15ರಂದು ಸಭೆ ಕರೆದಿದ್ದು, ಬೆಂಬಲಿಗರ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತಿಳಿಸುವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ