ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಪರೀಕ್ಷೆ ಆರಂಭ..!

Twitter
Facebook
LinkedIn
WhatsApp
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಪರೀಕ್ಷೆ ಆರಂಭ..!

 ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಿರಲಿವೆ.

ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಆಫರ್‌ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೇಟ್‌ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

 

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ

  • 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್
  • 04-03-2024 ಸೋಮವಾರ ಗಣಿತ, ಶಿಕ್ಷಣ ಶಾಸ್ತ್ರ
  • 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
  • 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
  • 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
  • 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
  • 11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
  • 13-03-2024 ರಂದು ಇಂಗ್ಲಿಷ್ ಪರೀಕ್ಷೆ
  • 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
  • 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
  • 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
  • 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
  • 22-03-2024 ರಂದು ಹಿಂದಿ ಪರೀಕ್ಷೆ

ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist