ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿಯ ಮೂವರು ಕಾರಿನಲ್ಲಿ ಸುಟ್ಟ ಪ್ರಕರಣಕ್ಕೆ ರೋಚಕ ಟ್ವಿಸ್ಟ್; ಹತ್ಯೆಯ ಪ್ಲ್ಯಾನ್ ಹೇಗಿತ್ತು.?

Twitter
Facebook
LinkedIn
WhatsApp
ಬೆಳ್ತಂಗಡಿಯ ಮೂವರು ಕಾರಿನಲ್ಲಿ ಸುಟ್ಟ ಪ್ರಕರಣಕ್ಕೆ ರೋಚಕ ಟ್ವಿಸ್ಟ್; ಹತ್ಯೆಯ ಪ್ಲ್ಯಾನ್ ಹೇಗಿತ್ತು.?

ತುಮಕೂರು: ತುಮಕೂರಿನ (Tumkur News) ಕುಚ್ಚಂಗಿ ಕೆರೆ ಸಮೀಪ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರಲ್ಲಿ (Burnt Car found) ಮೂವರ ಶವಗಳು (Three dead bodies found in the Car) ಪತ್ತೆಯಾಗಿದ್ದವು. ಇದೀಗ ಪೊಲೀಸ್ ತನಿಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತರನ್ನು ದಕ್ಷಿಣ ಕನ್ನಡದ ಬೆಳ್ತಂಗಡಿ ಮೂಲದ ಇಸಾಕ್ (56), ಸಾಹುಲ್ (45), ಇಮ್ಮಿಯಾಜ್ (34) ಗುರುತಿಸಲಾಗಿದೆ. ಈ ಮೂವರು ಬಂಗಾರದ ಆಸೆಗೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಇಸಾಕ್‌ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದರೆ, ಸಾಹುಲ್ ಅಮೀದ್ ಆಟೋ ಚಾಲಕನಾಗಿ ಹಾಗೂ ಇಮ್ಮಿಯಾಜ್ ಸಿದ್ದಿಕ್ ಫುಟ್ ವೇರ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಇಸಾಕ್‌ಗೆ ಪರಿಚಿತರೊಬ್ಬರಿಂದ ಫೋನ್‌ ಕರೆಯೊಂದು ಬಂದಿತ್ತು. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ. ಕಡಿಮೆ ಬೆಲೆಗೆ ಎಲ್ಲ ಚಿನ್ನವನ್ನು ಕೊಡುತ್ತೇವೆ ಎಂದಿದ್ದರು ಹಂತಕರು. ಚಿನ್ನದಾಸೆ ತೋರಿಸಿ ಹಣವನ್ನು ದೋಚುವ ಪ್ಲ್ಯಾನ್‌ ಮಾಡಿಕೊಂಡಿದ್ದರು.

ಇದರ ಯಾವ ಅರಿವು ಇರದ ಇಸಾಕ್‌ ಸ್ನೇಹಿತನ ಕಾರು ಪಡೆದುಕೊಂಡು ಅಮೀದ್ ಹಾಗೂ ಇಮ್ಮಿಯಾಜ್ ಸಿದ್ದಿಕ್‌ಗೆ ಒಂದು ಡೀಲ್ ಇದೆ ಬನ್ನಿ ಎಂದು ಹಣದ ಚೀಲದೊಂದಿಗೆ ತುಮಕೂರಿಗೆ ಹೋಗಿದ್ದ. ತುಮಕೂರು ಮೂಲದ ಸ್ವಾಮಿ ಎಂಬಾತನ ಪರಿಚಯದ ಮೂಲಕ ಇಸಾಕ್‌ ತುಮಕೂರಿಗೆ ಬಂದಿದ್ದ. ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜತೆ ಸಂಪರ್ಕದಲ್ಲಿದ್ದ ಇಸಾಕ್, ಗುರುವಾರ ರಾತ್ರಿ ನಂತರ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು.

ಹಂತಕರು ನಕಲಿ ಚಿನ್ನ ತೋರಿಸಿ, ಹಣ ದೋಚಲು ಮುಂದಾಗಿದ್ದರು. ಜನನಿಬಿಡ ಪ್ರದೇಶಕ್ಕೆ ಕರೆದೊಯ್ದು ಮೂವರನ್ನು ಹೊಡೆದು ಕೈ ಕಾಲು ಕಟ್ಟಿ ಹಾಕಿ ಕೊಲೆ ಮಾಡಿದ್ದರು. ನಂತರ ಕಾರಿನ ಡಿಕ್ಕಿಯೊಳಗೆ ಇಬ್ಬರ ಮೃತದೇಹ ಹಾಗೂ ಕಾರಿನ ಮಧ್ಯಭಾಗದ ಸೀಟಿನಲ್ಲಿ ಒಬ್ಬನ ಮೃತದೇಹ ಇಟ್ಟು ಬೆಂಕಿ ಹಚ್ಚಿದ್ದರು.

 

ಗುರುತು ಪತ್ತೆ ಹಚ್ಚಲು ಆಗದ ಸ್ಥಿತಿಯಲ್ಲಿ ಕಾರು ಸಮೇತ ಸುಟ್ಟು ಹಾಕಿದ್ದರು. ಘಟನಾ ಸ್ಥಳದಲ್ಲಿದ್ದ ಕಾರಿನ ನಂಬರ್ ಆಧರಿಸಿ ಕಾರಿನ ಮಾಲೀಕ್‌ನನ್ನು ಸಂಪರ್ಕ ಮಾಡಿದಾಗ, 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಕಾರು ಮಾಲೀಕ ರಫಿಕ್ ತಿಳಿಸಿದ್ದ. ಮಾ.21ರಂದು ತುಮಕೂರು ಪೊಲೀಸರು ಮೃತ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದರು. ಸದ್ಯ ಪ್ರಕರಣ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸ್ವಾಮಿ ಸೇರಿ 6 ಜನರನ್ನು ವಶಕ್ಕೆ ಪಡೆದಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಯು ಅಂತ್ಯವಾಗಿದ್ದು, ಮೃತದೇವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಘಟನೆ ಸಂಬಂಧ ತುಮಕೂರು ತಾಲೂಕಿನ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ