ಸೋಮವಾರ, ಮೇ 20, 2024
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ; ಹಲವರಿಗೆ ಗಂಭೀರ ಗಾಯ!

Twitter
Facebook
LinkedIn
WhatsApp
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ; ಹಲವರಿಗೆ ಗಂಭೀರ ಗಾಯ!

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ(rameshwaram cafe)  ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಇನ್ನು ಈ ಸ್ಪೋಟದಲ್ಲಿ 5ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಈ ಪೈಕಿ ಮಹಿಳೆಗೆ ಗಾಯವಾಗಿದೆ.

ಸಿಲಿಂಡರ್‌ ಅಥವಾ ಬಾಯ್ಲರ್‌ ಸ್ಫೋಟ ಕೂಡ ಆಗಿರಬಹುದೆಂದು ಎಂದು ಶಂಕಿಸಲಾಗಿತ್ತು. ಆದ್ರೆ, ಸ್ಫೋಟದಲ್ಲಿ ಕೆಲ ಐಡಿ ಕಾರ್ಡ್​ಗಳು ದೊರೆತಿವೆ. ಇನ್ನು ಬ್ಲಾಸ್ಟ್​​ ನಡೆದ ಸ್ಥಳದ ಸಮೀಪದಲ್ಲೇ ಒಂದು ಬ್ಯಾಟರಿ ಪತ್ತೆಯಾಗಿದೆ. ಅಲ್ಲದೇ ಹೋಟೆಲ್​​ಗೆ ಗ್ರಾಹಕರೊಬ್ಬರ ಬ್ಯಾಗ್​ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.  ಈ ಹಿನ್ನೆಲೆಯಲ್ಲಿ ಹಲವು ಅ ಅನುಮಾನಗಳು ವ್ಯಕ್ತವಾಗಿವೆ.  ಈ ಹಿನ್ನೆಲೆಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳಕ್ಕೆ ಬಂದಿದ್ದು, ಸುಟ್ಟ ಸ್ಥಿತಿಯಲ್ಲಿರುವ ಬ್ಯಾಗ್ ಹಾಗೂ ಸ್ಥಳದಲ್ಲಿ ಸಿಕ್ಕ ಐಡಿ ಕಾರ್ಡ್ ಬಗ್ಗೆ​ ಪರಿಶೀಲನೆ ನಡೆಸಿದ್ದಾರೆ. ಇನ್ನು ಹೋಟೆಲ್​ನ ಸಿಸಿಟಿವಿಗಳನ್ನು ಸಹ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಪ್ರಯೋಗಾಲಯದ ತಜ್ಞರು ದೌಡು ಸ್ಫೋಟದ ಹಿಂದೆ ಕಿಡಿಗೇಡಿಗಳ ಕೃತ್ಯ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದಾರೆ. ಅಗತ್ಯ ಉಪಕರಣಗಳ ಜೊತೆ ರಾಮೇಶ್ವರಂ ಕೆಫೆಗೆ ಬಂದಿರುವ FSL ತಂಡ ಪರಿಶೀಲನೆ ನಡೆಸಿದೆ. ಹೋಟೆಲ್​ನಲ್ಲಿದ್ದ ಯಾವುದೇ ವಸ್ತು ಸ್ಫೋಟವಾಗಿಲ್ಲ. ಬದಲಾಗಿ ಹೊರಗಡೆಯಿಂದ ಹೋಟೆಲ್​ಗೆ ತಂದ ವಸ್ತುವಿನಿಂದ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ  ಬಂದಿದ್ದು, ತಪಾಸಣೆ ನಡೆಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ