ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ.11ರವರೆಗೆ ವಿಸ್ತರಣೆ!
ಬಿ.ಇಡಿ ಕೋರ್ಸ್ ಪ್ರವೇಶ(B.ED course admission)ಕ್ಕೆ ಅರ್ಜಿ ಸಲ್ಲಿಸಲು ಡಿ.11 ರವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ(Krishna Byre Gowda) ಹೇಳಿದರು. ಶೂನ್ಯವೇಳೆಯಲ್ಲಿ ಮಹಾಂತೇಶ್ ಕೌಜಲಗಿ ಪ್ರಸ್ತಾಪಕ್ಕೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು. ‘ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬ ಹಿನ್ನೆಲೆ ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನ ಮುಕ್ತಾಯ ಆಗುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ಗಮನಿಸಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.
2023-24ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿತ್ತು. ಅದರಂತೆ ಆಸಕ್ತರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ನ. 29 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ವಿಸ್ತರಿಸಲಾಗಿದೆ.