ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯಾಯಬೆಲೆ ಅಂಗಡಿ ನಡೆಸುವವರ ಪ್ರತಿಭಟನೆ ; ನವೆಂಬರ್ 7 ರ ವರೆಗೆ ಪಡಿತರ ವಿತರಣೆ ಬಂದ್!

Twitter
Facebook
LinkedIn
WhatsApp
ನ್ಯಾಯಬೆಲೆ ಅಂಗಡಿ ನಡೆಸುವವರ ಪ್ರತಿಭಟನೆ ; ನವೆಂಬರ್ 7 ರ ವರೆಗೆ ಪಡಿತರ ವಿತರಣೆ ಬಂದ್!

ಬೆಂಗಳೂರು ನ.02: ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್ ​​ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನಿಟ್ಟು ನವೆಂಬರ್ 7 ರವರೆಗೆ ಪಡಿತರ ವಿತರಣೆ (Ration Distribution) ಮಾಡದಿರಲು ನಿರ್ಧರಿಸಿದೆ. ನವೆಂಬರ್ 7 ರಂದು ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿಕಾರರು ನಿರ್ಧರಿಸಿದ್ದಾರೆ. ಸರಕಾರ ಫಲಾನುಭವಿಗಳಿಗೆ ಅಕ್ಕಿ ಬದಲು ಹಣ ನೀಡುವುದನ್ನು ನಿಲ್ಲಿಸಬೇಕು ಎಂಬುದು ನ್ಯಾಯಬೆಲೆ ಅಂಗಡಿ (Fair Price Shop) ನಡೆಸುವವರ ಪ್ರಮುಖ ಬೇಡಿಕೆಯಾಗಿದೆ.

ಬೇಡಿಕೆಗಳು ಏನು?
  1. ಇ-ಕೆವೈಸಿ (Know Your Customer) ಕೆಲಸ ನಿರ್ವಹಿಸಲು ಸರ್ಕಾರವು 23.75 ಕೋಟಿ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು.
  2. ಗೋವಾ, ಕೇರಳ ಮತ್ತು ಮಹಾರಾಷ್ಟ್ರ ಸರ್ಕಾರಗಳು ಹೇಗೆ ನೀಡುತ್ತಿವೆಯೋ ಹಾಗೆಯೇ ಕರ್ನಾಟಕದಲ್ಲಿ ನ್ಯಾಯಬೆಲೆ ಅಂಗಡಿ ನಡೆಸುವವರಿಗೆ ಕಮಿಷನ್ ಹಣವನ್ನು ನೀಡಬೇಕು.
  3.  ಪ್ರತಿ ಕ್ವಿಂಟಾಲ್ ಅಕ್ಕಿ ವಿತರಿಸಲು 250 ರೂಪಾಯಿ ಕಮಿಷನ್ ನೀಡಬೇಕು
  4.  ಅಂಗಡಿ ನಿರ್ವಾಹಕರು ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ನೆರವು ನೀಡಬೇಕು
  5. ಸರ್ವರ್ ಸಮಸ್ಯೆ ಇರುವುದರಿಂದ ಪ್ರತಿ ಜಿಲ್ಲೆಗೂ ಪ್ರತ್ಯೇಕ ಸರ್ವರ್ ಸೆಂಟರ್ ಕಲ್ಪಿಸಬೇಕು
  6. 5 ಕೆಜಿ ಅಕ್ಕಿ ಹಣವನ್ನು ಡಿಬಿಟಿ ಮಾಡುವ ಬದಲು ಬೇರೆ ಆಹಾರ ಪದಾರ್ಥಗಳನ್ನು ನೀಡಬೇಕು
  7. DBT ಮೂಲಕವೇ ಕಮಿಷನ್ ಹಣವನ್ನು ಪಡಿತರ ವಿತರಕರಿಗೆ ನೀಡಬೇಕು

ಅಕ್ಕಿ ಬದಲು ಫಲಾನುಭವಿಗಳಿಗೆ ಹಣ ನೀಡುವುದನ್ನು ವಿರೋಧಿಸಿ ನ್ಯಾಯಬೆಲೆ ವಿತರಕರ ಸಂಘ ಅಕ್ಟೋಬರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ರಾಜ್ಯಾದ್ಯಂತ 20,350 ನ್ಯಾಯಬೆಲೆ ಅಂಗಡಿಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದವು. ಇದೀಗ ಮತ್ತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿದೆ.

ನ್ಯಾಯಬೆಲೆ ಅಂಗಡಿಯ ನಿರ್ವಾಹಕರು ಪ್ರತಿಭಟನೆ ಏಕೆ?

ರಾಜ್ಯದಲ್ಲಿ 4.30 ಕೋಟಿ ಫಲಾನುಭವಿಗಳು ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅರ್ಹರಾಗಿದ್ದಾರೆ. ವರದಿಗಳ ಪ್ರಕಾರ, ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರಕ್ಕೆ ತಿಂಗಳಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಬ್ಬ ಅರ್ಹ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಪ್ರತಿ ಫಲಾನುಭವಿಗೆ 10 ಕೆಜಿ ನೀಡುವಷ್ಟು ಅಕ್ಕಿ ಸರ್ಕಾರಕ್ಕೆ ಸಿಗಲಿಲ್ಲ. ನೇರ ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ 170 ರೂ.ಗಳನ್ನು ಸರ್ಕಾರ ನೀಡುತ್ತಿದೆ.

ಒಬ್ಬ ಫಲಾನುಭವಿಗೆ 1 ಕೆಜಿ ಅಕ್ಕಿಯನ್ನು ವಿತರಿಸಲು ಪಡಿತರ ವಿತರಕರು 1.24 ರೂ. ಕಮಿಷನ್ ಪಡೆಯುತ್ತಾರೆ. ಸರ್ಕಾರವು ಅಕ್ಕಿಯ ಬದಲು ಫಲಾನುಭವಿಗಳಿಗೆ ಹಣವನ್ನು ನೀಡಿದರೆ ಪಡಿತರ ವಿತರಕರು ಈ ಕಮಿಷನ್ ಪಡೆಯುವುದಿಲ್ಲ. ಡಿಬಿಟಿ ಮೂಲಕ ಫಲಾನುಭವಿಗಳಿಗೆ ಹಣವನ್ನು ವರ್ಗಾಯಿಸಲು ಸರ್ಕಾರಕ್ಕೆ 733 ಕೋಟಿ ರೂ. ಬೇಕಾಗುತ್ತದೆ. ಸರ್ಕಾರ ಜನರಿಗೆ ಅಕ್ಕಿ ನೀಡಿದರೆ, ಪಡಿತರ ವಿತರಕರಿಗೆ ತಿಂಗಳಿಗೆ 856 ಕೋಟಿ ರೂ. ಕಮಿಷನ್ ಹಣ ನೀಡಬೇಕು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ