ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಲ್ಪ್ ಲೈನ್ ಮಂಗಳೂರು ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ; ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿ ಸಿಸಿಬಿ ಬಲೆಗೆ!

Twitter
Facebook
LinkedIn
WhatsApp
ಹೆಲ್ಪ್ ಲೈನ್ ಮಂಗಳೂರು ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ; ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿ ಸಿಸಿಬಿ ಬಲೆಗೆ!

ಮಂಗಳೂರು ಅಕ್ಟೋಬರ್ 06: ಹೆಲ್ಪ್ ಲೈನ್ ಮಂಗಳೂರು ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಗರದ ಬಿಕರ್ನಕಟ್ಟೆ ಬಜ್ಜೋಡಿಯ ಬರ್ನಾಡ್ ರೋಶನ್ ಮೆಸ್ಕರೆನಸ್ (41) ಎಂದು ಗುರುತಿಸಲಾಗಿದೆ.

ಆರೋಪಿ ನಗರದ ಕಂಕನಾಡಿ-ಪಂಪ್‌ವೆಲ್ ಹಳೆ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನೆಲ ಅಂತಸ್ತಿನ ಕೊಠಡಿಯಲ್ಲಿ ‘ಹೆಲ್ಪ್‌ಲೈನ್ ಮಂಗಳೂರು’ ಎಂಬ ಹೆಸರಿನ ಸಂಸ್ಥೆಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ (ರೇಶನ್ ಕಾರ್ಡ್), ಅಂಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಯಿಂದ ವಿವಿಧ ಹೆಸರಿನಲ್ಲಿ ತಯಾರಿಸಿದ ನಕಲಿ ಆಧಾರ್ ಕಾರ್ಡ್‌ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸೆಸೆಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ 3 ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಂಜಾ ಮಾರಾಟ ಪ್ರಕರಣ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ, ಅಕ್ಟೋಬರ್ 07: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌.

ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ. 2015 ರಲ್ಲಿ ಗಾಂಜಾ ಮಾರಾಟ‌ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ , ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ