ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿಯಲ್ಲಿ ಕುಸಿಯುತ್ತಿರುವ ಅಡಿಕೆ ದರ ; ಮಾರುಕಟ್ಟೆಗೆ ಅಕ್ರಮವಾಗಿ ಪ್ರವೇಶ : ಪ್ರಧಾನಿಗೆ ಪತ್ರ.!

Twitter
Facebook
LinkedIn
WhatsApp
ಕರಾವಳಿಯಲ್ಲಿ ಕುಸಿಯುತ್ತಿರುವ ಅಡಿಕೆ ದರ ; ಮಾರುಕಟ್ಟೆಗೆ ಅಕ್ರಮವಾಗಿ ಪ್ರವೇಶ : ಪ್ರಧಾನಿಗೆ ಪತ್ರ.!

ಕರಾವಳಿಯಲ್ಲಿ ಅಕ್ರಮ ಅಡಿಕೆ (Arecanut) ದಂಧೆಗೆ ಬೆಳೆಗಾರರು ತತ್ತರಿಸಿದ್ದಾರೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರಿಗೆ ಅಡಿಕೆ ಅಕ್ರಮ ದಂಧೆಯ ವ್ಯವಸ್ಥಿತ ಜಾಲದಿಂದ ಭಾರೀ ಸಮಸ್ಯೆ ಎದುರಾಗಿದೆ. ಅಂತಾರಾಜ್ಯಗಳಿಂದ ವಿದೇಶಿ ಅಡಿಕೆ ರಾಜ್ಯದ ಮಾರುಕಟ್ಟೆಗಳಿಗೆ ಅಕ್ರಮವಾಗಿ ಪ್ರವೇಶ ಮಾಡುತ್ತಿದೆ. ಅಡಿಕೆ ಅಕ್ರಮದ ವಿರುದ್ದ ಕ್ಯಾಂಪ್ಕೋ (Campco) ಸಂಸ್ಥೆ ಸಿಡಿದೆದ್ದಿದ್ದು ಅಡಿಕೆ ಅಕ್ರಮ ಆಮದು ತಡೆಗೆ ಕೋರಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್​ಗೆ (Nirmala Sitharaman) ಪತ್ರ ಬರೆದಿದೆ.

ರಾಜ್ಯದಲ್ಲಿ ತಲೆ ಎತ್ತಿದ ವಿದೇಶಿ ಅಡಿಕೆ ಮಾಫಿಯಾ: ಇಂಡೋನೇಷ್ಯಾ, ಬರ್ಮಾ, ಭೂತಾನ್, ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಭಾರತಕ್ಕೆ ಸಾಗಾಟ ಮಾಡಲಾಗುತ್ತಿದೆ. ಈಶಾನ್ಯ ಪ್ರದೇಶಗಳಿಂದ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಗಳು ಭಾರತಕ್ಕೆ ಎಂಟ್ರಿ ಕೊಡುತ್ತಿವೆ. ಮಂಗಳೂರು ಏರ್ ಪೋರ್ಟ್ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ಮೂಲಕವೂ ವಿದೇಶಿ ಅಡಿಕೆ ಬರುತ್ತಿದೆ. ವಿದೇಶಿ ಅಡಿಕೆ ಬೇರೆ ಬೇರೆ ಮಾರ್ಗಗಳಲ್ಲಿ ದೇಶಕ್ಕೆ ನುಸುಳಿ ಏರ್ಪೋರ್ಟ್ ಮೂಲಕ ಮಂಗಳೂರು ಪ್ರವೇಶ ಮಾಡುತ್ತಿದೆ. ಕಸ್ಟಮ್ಸ್ ಸುಂಕ ರಹಿತವಾಗಿ ಶ್ರೀಲಂಕಾದಿಂದ ಅಡಿಕೆ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ ಆಪರೇಟಿವ್(ಕ್ಯಾಂಪ್ಕೊ) ಸಂಸ್ಥೆ ಪ್ರಧಾನಿಗೆ ಪತ್ರ ಬರೆದು ಅಕ್ರಮ ಆಮದು ತಡೆಗೆ ಮನವಿ ಮಾಡಿದೆ.

ಅಗರ್ತಲಾದಿಂದ 60 ಮೂಟೆಗಳಲ್ಲಿ 1,519 ಕೆ.ಜಿ ಕೆಂ‍ಪು ತಳಿಯ ಅಡಿಕೆ ವಿಮಾನ ನಿಲ್ದಾಣಕ್ಕೆ ಬಂದಿದೆ. ಅಕ್ರಮ ಅಡಿಕೆ ಅಮದಿನಿಂದ ಕರಾವಳಿಯ ಅಡಿಕೆ ಬೆಳೆಗಾರರು ಕಂಗೆಟ್ಟಿದ್ದಾರೆ. ಅಕ್ರಮ ಅಮದಿನಿಂದ ರಾಜ್ಯದಲ್ಲಿ ಸ್ಥಳೀಯ ಅಡಿಕೆಯ ಭರ್ಜರಿ ಬೆಲೆಯ ನಾಗಲೋಟಕ್ಕೆ ಬ್ರೇಕ್ ಬಿದ್ದಿದೆ. ಅಡಿಕೆ ಬೆಳೆಯನ್ನೇ ನಂಬಿಕೊಂಡ ಕರಾವಳಿಯ ಕೃಷಿಕರಿಗೆ ಭಾರೀ ಹೊಡೆತ ಬಿದ್ದಿದೆ. ಕೆಜಿಗೆ ರೂ.500 ಗಡಿ ದಾಟಿದ್ದ ಅಡಿಕೆ ಈಗ 300ಕ್ಕೆ ಇಳಿದಿದೆ.

ಕರಾವಳಿ ಭಾಗದ ಉತ್ತಮ ಗುಣಮಟ್ಟದ ಅಡಿಕೆಗೆ ಉತ್ತರ ಭಾರತದಲ್ಲಿ ತೀವ್ರ ಬೇಡಿಕೆ ಇದೆ. ಆದರೆ ಕಡಿಮೆ ಬೆಲೆಗೆ ಬರ್ಮಾ ಹಾಗೂ ಇತರೆ ದೇಶದಿಂದ ಅಡಿಕೆ ಆಮದು ಆಗುತ್ತಿದ್ದು ಕರಾವಳಿಯ ಅಡಿಕೆಯೊಂದಿಗೆ ಅದನ್ನು ಬೆರೆಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಬೆಲೆಯೊಂದಿಗೆ ಕರಾವಳಿಯ ಅಡಿಕೆಯ ಗುಣಮಟ್ಟವೂ ಕುಸಿಯುತ್ತಿದೆ. ಗುಣಮಟ್ಟ ವೈಪರಿತ್ಯದೊಂದಿಗೆ ಬೇಡಿಕೆಯೂ ಇಳಿಮುಖವಾಗುವ ಆತಂಕ ಎದುರಾಗಿದೆ. ಕೊರೊನಾ ಸಂದರ್ಭ ಅಡಿಕೆ ಆಮದು ಸ್ಥಗಿತವಾಗಿದ್ದ ಹಿನ್ನಲೆ ಅಡಿಕೆ ಬೆಲೆ ಧಿಡೀರ್ ಏರಿಕೆಯಾಗಿತ್ತು. ಬೆಲೆ ಏರಿಕೆ ಹಿನ್ನಲೆ ಬಹುಪಾಲು ಎಲ್ಲ ಭಾಗಗಳಲ್ಲಿಯೂ ಕೃಷಿಕರು ಅಡಿಕೆ ಬೆಳೆದಿದ್ದರು. ಆದರೆ ಸದ್ಯದ ಸ್ಥಿತಿಯಲ್ಲಿ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist